Govt employees strike: ಸರ್ಕಾರಿ ನೌಕರರ ಮುಷ್ಕರದಿಂದ ಶಾಲಾ- ಕಾಲೇಜು ಬಾಗಿಲಿಗೆ ಬೀಗ!
ವೈದ್ಯಕೀಯ ಚಿಕಿತ್ಸೆಗೆ ಬಂದಿದ್ದ ರೋಗಿಗಳು ಒಪಿಡಿಯಲ್ಲಿ (ಹೊರ ರೋಗಿ ವಿಭಾಗ) ವೈದ್ಯರಿಲ್ಲದೆ ಪರದಾಡಿದ್ದಾರೆ.
ಬೆಂಗಳೂರು, ಮಾರ್ಚ್. 01: 7ನೇ ವೇತನ ಆಯೋಗದ ವರದಿ ಜಾರಿ, ಹಳೆಯ ಪಿಂಚಣಿ ಯೋಜನೆಗೆ ಮರುಪಾವತಿ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ವೈದ್ಯಕೀಯ ಸೇರಿದಂತೆ ಹಲವು ಸೇವೆಗಳು ಸಿಗದೆ, ಸಾರ್ವಜನಿಕರು ಪರದಾಡುವಂತಾಗಿದೆ.
#Karnataka govt employees association strike
— Kiran Parashar (@KiranParashar21) March 1, 2023
Govt schools and colleges in several parts of the state remain shut due to employees strike. @IndianExpress pic.twitter.com/jIVCodBFfa
ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಲ್ಲಿ ಪ್ರಾಧ್ಯಾಪಕರು ಇಲ್ಲದೆ ಬೀಗ ಹಾಕಲಾಗಿದೆ. ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳ ಬಳಿ ಸುಮ್ಮನೆ ತಿರುಗುತ್ತಿರುವ ದೈಶ್ಯಗಳು ಕಂಡು ಬಂದಿವೆ. ಸಿಬ್ಬಂದಿ ಸೇರಿದಂತೆ ಎಲ್ಲಾ ಸರ್ಕಾರಿ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕಾರನ ವಿದ್ಯಾರ್ಥಿಗಳು ಪಾಠವಿಲ್ಲದೆ ಶಾಲಾ, ಕಾಲೇಜುಗಳ ಮುಂದೆ ಓಡಾಡುತ್ತಿದ್ದಾರೆ.

ಇನ್ನು, ವೈದ್ಯಕೀಯ ಚಿಕಿತ್ಸೆಗೆ ಬಂದಿದ್ದ ರೋಗಿಗಳು ಒಪಿಡಿಯಲ್ಲಿ (ಹೊರ ರೋಗಿ ವಿಭಾಗ) ವೈದ್ಯರಿಲ್ಲದೆ ಪರದಾಡಿದ್ದಾರೆ. ತುರ್ತು ಸೇವೆ ಹೊರತುಪಡಿಸಿ ಉಳಿದ ಎಲ್ಲ ಸೇವೆಗಳು ಬಂದ್ ಆಗಿದ್ದು, ತುರ್ತು ಸೇವೆಗಳನ್ನು ನಿರ್ವಹಿಸುತ್ತಿರುವ ನೌಕರರು ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಕೆಲವು ಕಡೆ ಕೆಲಸಕ್ಕೆ ಬಮದಿರುವವರನ್ನು ಮನವೊಲಿಸಿ ಮುಷ್ಕರಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ.
ಅನಧಿಕೃತವಾಗಿ ಕೆಲಸಕ್ಕೆ ಗೈರು ಹಾಜರಾರಾದರೇ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೂ ಆರು ಲಕ್ಷಕ್ಕೂ ಹೆಚ್ಚಿನ ನೌಕರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ವಿಷಯ ತಿಳಿಯದೆ ಆಸ್ಪತ್ರೆಗೆ ಬಂದ ಬಡ ರೋಗಿಗಳು ವೈದ್ಯರಿಗಾಗಿ ಕಾದು ಕುಳಿತಿದ್ದಾರೆ. ಹಲವೆಡೆ ವೈದ್ಯರು ಮಾತ್ರ ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಕೊಪ್ಪಳ ಜಿಲ್ಲಾಸ್ಪತ್ರೆಗೆ ರೋಗಿಗಳು ಬಂದಿರುವ ಕಾರಣ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂದು ಕಪ್ಪುಪಟ್ಟಿ ಧರಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಬಾಗಲಕೋಟೆಯಲ್ಲಿ ಒಪಿಡಿ ಸೇವೆ ಸ್ಥಗಿತಗೊಂಡಿದ್ದು ಚಿಕಿತ್ಸೆ ಸಿಗದೆ ರೋಗಿಗಳು ಪರದಾಡುತ್ತಿದ್ದಾರೆ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಕೆಲ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕೈಗೆ ಕಪ್ಪು ಪಟ್ಟಿ ಧರಸಿ ಕರ್ತವ್ಯಕ್ಕೆ ಹಾಜರಾಗಿದ್ದು, ಒಪಿಡಿ ಕಾರ್ಯ ನಿರ್ವಹಿಸುತ್ತಿದೆ.

ಈ ನಡುವೆ ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಸೇವೆಗಳು-2) ಶೇ 17ರಷ್ಟು ವೇತನ ಹೆಚ್ಚಳದ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಆದೇಶ 2023ರ ಏಪ್ರಿಲ್‌ನಿಂದ ಜಾರಿಗೆ ಬರಲಿದೆ ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.












Click it and Unblock the Notifications