ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶೀಘ್ರದಲ್ಲೇ ನೂತನ ಚಿಕಿತ್ಸೆ ಮಾರ್ಗಸೂಚಿ ಬಿಡುಗಡೆ: ಡಾ.ಕೆ.ಸುಧಾಕರ್

|
Google Oneindia Kannada News

ಬೆಂಗಳೂರು, ಜುಲೈ 1: ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ವಿವಿಧ ತಜ್ಞರುಗಳು ಹಲವು ಉಪಯುಕ್ತ ಸಲಹೆಗಳನ್ನು ಸರ್ಕಾರಕ್ಕೆ ನೀಡಿದ್ದಾರೆ. ಸಲಹೆಗಳನ್ನು ಪರಿಶೀಲಿಸಿ, ಶೀಘ್ರದಲ್ಲೇ ನೂತನ ಚಿಕಿತ್ಸೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಡಾ. ಸುಧಾಕರ್ ಹೇಳಿದರು.

Recommended Video

Health minister Sriramulu sent notice to 18 hospital which avoided Covid patient | Oneindia Kannada

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಬುಧವಾರದಂದು ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ವಿವಿಧ ರಂಗಗಳ ತಜ್ಞ ವೈದ್ಯರುಗಳು, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸಚಿವರಾದ ಬಸವರಾಜ್ ಬೊಮ್ಮಾಯಿ ಹಾಗೂ ಶ್ರೀರಾಮುಲು ಸೇರಿದಂತೆ ಅನೇಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್19 ರೋಗಿಗಳಿಗೆ ಬೆಡ್ ಮೀಸಲುಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್19 ರೋಗಿಗಳಿಗೆ ಬೆಡ್ ಮೀಸಲು

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ತಜ್ಞರುಗಳ ಸಲಹೆಯನ್ನು ಸ್ವೀಕರಿಸಲಾಗಿದ್ದು, ಶೀಘ್ರದಲ್ಲೇ ಮಾನ್ಯ ಮುಖ್ಯಮಂತ್ರಿಗಳು ಉನ್ನತ ಮಟ್ಟದ ಮತ್ತೊಂದು ಸಭೆ ಕರೆದಿದ್ದಾರೆ. ಮುಂದಿನ ಮಾರ್ಗಸೂಚಿಗಳ ಕುರಿತಂತೆ ಸಧ್ಯದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ ಎಂದರು.

 6 ಮಂದಿಯನ್ನು ಕೆಲಸದಿಂದ ಅಮಾನತು

6 ಮಂದಿಯನ್ನು ಕೆಲಸದಿಂದ ಅಮಾನತು

ಬಳ್ಳಾರಿಯಲ್ಲಿ ಕೋವಿಡ್ ನಿಂದ ಮೃತಪಟ್ಟವರ ಶವಸಂಸ್ಕಾರ ಕುರಿತ ವಿವಾದಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಘಟನೆ ಸಂಭವಿಸಿದ ದಿನದಂದೇ ಜಿಲ್ಲಾಡಳಿತದೊಂದಿಗೆ ಮಾತನಾಡಿದ್ದು ಅಲ್ಲಿನ ಜಿಲ್ಲಾಧಿಕಾರಿಯವರು ಈ ಘಟನೆಗಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ಈ ಘಟನೆಗೆ ಕಾರಣರಾದ 6 ಮಂದಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ, ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

 ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ

ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ

ಸಭೆಯಲ್ಲಿ ವಿವಿಧ ತಜ್ಞರುಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು. ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಬಹುತೇಕ ತಜ್ಞರು ಅಭಿಪ್ರಾಯಪಟ್ಟರು. ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದರು. ಅಲ್ಲದೆ ಟೆಲಿ ಮೆಡಿಸಿನ್ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಸಿಬ್ಬಂದಿ ಹಾಗೂ ಪರಿಕರಗಳ ಅವಶ್ಯಕತೆಯನ್ನೂ ಕೂಡ ವ್ಯಕ್ತಪಡಿಸಿದರು.

#Thankyou Doctor ಟ್ರೆಂಡ್, ರಾಷ್ಟ್ರೀಯ ವೈದ್ಯ ದಿನ ಸಂಭ್ರಮ#Thankyou Doctor ಟ್ರೆಂಡ್, ರಾಷ್ಟ್ರೀಯ ವೈದ್ಯ ದಿನ ಸಂಭ್ರಮ

 ಟೆಲಿ ಐಸಿಯು ಹಾಗೂ ಚಿಕಿತ್ಸೆ ಬಗ್ಗೆ ಚರ್ಚೆ

ಟೆಲಿ ಐಸಿಯು ಹಾಗೂ ಚಿಕಿತ್ಸೆ ಬಗ್ಗೆ ಚರ್ಚೆ

ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ಅಗತ್ಯ. ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು.. ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ. ಇದಕ್ಕಾಗಿ ಮಾಧ್ಯಮಗಳು ಸರಿಯಾದ ರೀತಿಯಲ್ಲಿ ಸುದ್ದಿ ಬಿತ್ತರಿಸಬೇಕು ಎಂದು ಅವರುಗಳು ಮನವಿ ಮಾಡಿದರು.

 ಅನೇಕ ತಜ್ಞರು ಭಾಗವಹಿಸಿದ್ದ ಸಭೆ

ಅನೇಕ ತಜ್ಞರು ಭಾಗವಹಿಸಿದ್ದ ಸಭೆ

ತಜ್ಞರುಗಳ ಸಲಹೆಗಳನ್ನು ಸರ್ಕಾರ ಉನ್ನತಮಟ್ಟದಲ್ಲಿ ವಿವರವಾಗಿ ಚರ್ಚಿಸಿ ಕ್ರಮಕೈಗೊಳ್ಳುವುದೆಂದು ಸಚಿವ ಸುಧಾಕರ್ ತಿಳಿಸಿದರು. ಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ದಕ್ಷಿಣ ಭಾರತದ ಪ್ರತಿನಿಧಿ ಆಶಿಶ್ ಸತ್ಪತಿ, ಕಿ ಕಿಮ್ಸ್‌ನ ಡಾ.ಲೋಕೇಶ್, ಮಣಿಪಾಲ ಆಸ್ಪತ್ರೆಯ ಮುಖ್ಯಸ್ಥ ಡಾ.ಸುಧಾಕರನ್ ಬಲ್ಲಾಳ್, ಡಾ.ಅಂಜನಪ್ಪ, ಡಾ.ಶರಣ್ ಪಾಟೀಲ್, ಡಾ.ಪ್ರಭುದೇವ್, ಡಾ.ಪ್ರದೀಪ್ ರಂಗಪ್ಪ, ಡಾ.ಪ್ರಕಾಶ್, ಡಾ.ಕುಮಾರ್, ಡಾ.ಗಿರಿಧರ್ ಬಾಬು, ಡಾ.ಷರೀಫ್, ಡಾ.ರಂಗನಾಥ, ಡಾ.ಸತೀಶ್, ಡಾ.ಭುಜಂಗ ಶೆಟ್ಟಿ ಸೇರಿದಂತೆ ಅನೇಕ ತಜ್ಞರು ಭಾಗವಹಿಸಿದ್ದರು.

ಸಿಎಂ ಜೊತೆ ತಜ್ಞರ ಸಭೆ: ಕೊರೊನಾ ನಿಯಂತ್ರಿಸಲು ತಜ್ಞರು ಹೇಳಿದ್ದೇನು?ಸಿಎಂ ಜೊತೆ ತಜ್ಞರ ಸಭೆ: ಕೊರೊನಾ ನಿಯಂತ್ರಿಸಲು ತಜ್ಞರು ಹೇಳಿದ್ದೇನು?

English summary
Karnataka Government will take a final decision based on experts' suggestion and release new guildelines said Medical education minister Dr Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X