ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ, ಗಣೇಶ ಹಬ್ಬ; ಬೆಂಗಳೂರಿನಿಂದ 1000 ಹೆಚ್ಚುವರಿ ಬಸ್ ವ್ಯವಸ್ಥೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 07; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿ ಗೌರಿ, ಗಣೇಶ ಹಬ್ಬದ ಪ್ರಯುಕ್ತ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಮಾಡಿದೆ. ಬೆಂಗಳೂರು ನಗರದಿಂದ ಬೇರೆ-ಬೇರೆ ಸ್ಥಳಗಳಿಗೆ ಪ್ರಯಾಣಿಸುವ ಜನರು ಬಸ್‌ಗಳ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಗೌರಿ, ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸೆಪ್ಟೆಂಬರ್ 8 ಮತ್ತು 9ರಂದು ಬೆಂಗಳೂರು ನಗರದಿಂದ 1000 ಹೆಚ್ಚುವರಿ ವಾಹನಗಳ ವ್ಯವಸ್ಥೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಮಾಡಿದೆ.

ಸಾರ್ವಜನಿಕ ಗಣೇಶೋತ್ಸವ ಆಚರಣೆ; ಮಾರ್ಗಸೂಚಿ ಸಾರ್ವಜನಿಕ ಗಣೇಶೋತ್ಸವ ಆಚರಣೆ; ಮಾರ್ಗಸೂಚಿ

ರಾಜ್ಯ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 12/9/2021ರಂದು ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಬಸ್‌ನಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಮನವಿ ಮಾಡಲಾಗಿದೆ.

ಗಣೇಶ ಚತುರ್ಥಿ 2021: ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಬಹುದಾದ ಸಂದೇಶಗಳುಗಣೇಶ ಚತುರ್ಥಿ 2021: ನಿಮ್ಮ ಪ್ರೀತಿಪಾತ್ರರಿಗೆ ಕಳುಹಿಸಬಹುದಾದ ಸಂದೇಶಗಳು

ಜನರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ ಪಿಕ್ ಅಪ್ ಪಾಯಿಂಟ್ ಹೆಸರನ್ನು ಗಮನಿಸುವಂತೆ ಸೂಚಿಸಲಾಗಿದೆ.

Ganesh Chaturthi 2021: ಗಣೇಶ ಚತುರ್ಥಿ ಪೂಜಾ ವಿಧಾನ, ಶುಭ ಮುಹೂರ್ತ ಹಾಗೂ ಮಹತ್ವGanesh Chaturthi 2021: ಗಣೇಶ ಚತುರ್ಥಿ ಪೂಜಾ ವಿಧಾನ, ಶುಭ ಮುಹೂರ್ತ ಹಾಗೂ ಮಹತ್ವ

ಜನರು ಇ-ಟಕೆಟ್‌ಗಳನ್ನು https://ksrtc.karnataka.gov.in/ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಬುಕ್ ಮಾಡಬಹುದಾಗಿದೆ. ಜನರು ಕರ್ನಾಟಕ ಮತ್ತು ಅಂತರರಾಜ್ಯದಲ್ಲಿ ಇರುವ 685 ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕವೂ ಟಿಕೆಟ್ ಕಾಯ್ದಿರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೆಜೆಸ್ಟಿಕ್‌ನಿಂದ ಬಸ್‌ಗಳ ಸಂಚಾರ

ಮೆಜೆಸ್ಟಿಕ್‌ನಿಂದ ಬಸ್‌ಗಳ ಸಂಚಾರ

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸಂಚಾರ ನಡೆಸಲಿದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಯ ಬಸ್‌ಗಳು ಸಂಚರಿಸುತ್ತವೆ.

ಶಾಂತಿನಗರ ಬಸ್ ನಿಲ್ದಾಣ

ಶಾಂತಿನಗರ ಬಸ್ ನಿಲ್ದಾಣ

ಶಾಂತಿನಗರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳು ಸಂಚಾರ ನಡೆಸಲಿವೆ.

ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿ ಮುಂತಾದ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

ಎಷ್ಟು ರಿಯಾಯಿತಿ ಸಿಗಲಿದೆ?

ಎಷ್ಟು ರಿಯಾಯಿತಿ ಸಿಗಲಿದೆ?

ನಾಲ್ಕು ಅಥವ ಹೆಚ್ಚಿನ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಬಸ್‌ನಲ್ಲಿ ಸಂಚಾರ ನಡೆಸುವಾಗ ಕರ್ನಾಟಕ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಸಾರ್ವಜನಿಕರು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಪ್ರಕಟಣೆ ತಿಳಿಸಿದೆ.

Recommended Video

ಲಾಕ್ ಡೌನ್ ಆದಮೇಲೆ ಮತ್ತೆ ಡ್ರಗ್ ಪಾರ್ಟಿಗಳು ನಡೀತಿದೆ! | Oneindia Kannada
ವೆಬ್‌ಸೈಟ್‌ನಲ್ಲಿ ವಿವರಗಳು ಲಭ್ಯವಿದೆ

ವೆಬ್‌ಸೈಟ್‌ನಲ್ಲಿ ವಿವರಗಳು ಲಭ್ಯವಿದೆ

ಕಾರ್ಯಾಚರಣೆ ನಡೆಸುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾಪಟ್ಟಿ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡಾ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕೆ ಅನುಗುಣವಾಗಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ.

English summary
KSRTC will run 1000 additional buses for Ganesha chaturthi. Bus will run from Bengaluru on September 8 and 9, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X