Get Updates
Get notified of breaking news, exclusive insights, and must-see stories!

ಬೆಂಗಳೂರಿಗರಿಗೆ ಭರ್ಜರಿ ಗುಡ್‌ನ್ಯೂಸ್‌: 3 ತಿಂಗಳಲ್ಲಿ ಈ ಜಂಕ್ಷನ್‌ ಕಾಮಗಾರಿ ಪೂರ್ಣ!

ಬೆಂಗಳೂರಿನಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಹಲವು ಭಾಗದಲ್ಲಿ ಅನಾಹುತ ಸೃಷ್ಟಿಯಾಗಿತ್ತು. ಅಲ್ಲದೇ ಪ್ರಮುಖ ಜಂಕ್ಷನ್‌ಗಳನ್ನು ಅಭಿವೃದ್ಧಿ ಮಾಡದೆ ಇರುವುದು ಹಾಗೂ ರಾಜಕಾಲುವೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಾರೀ ಚರ್ಚೆಗಳು ನಡೆದಿದ್ದವು. ಇದೀಗ ಈ ವಿಚಾರವಾಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಬಿಗ್‌ ಅಪ್ಡೇಟ್ಸ್‌ ಕೊಟ್ಟಿದ್ದಾರೆ. ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳ ಅಭಿವೃದ್ಧಿ ಕಾಮಗಾರಿಗೆ ಡೆಡ್‌ಲೈನ್‌ ಫಿಕ್ಸ್‌ ಮಾಡಿದ್ದು. ಇದರಿಂದ ಬೆಂಗಳೂರಿನಲ್ಲಿ ಮಳೆಗಾಲದ ಸಮಸ್ಯೆ ಹಾಗೂ ಟ್ರಾಫಿಕ್‌ ಜಾಮ್‌ ಸಮಸ್ಯೆಗೆ ಏಕಕಾಲದಲ್ಲಿ ಪರಿಹಾರ ಸಿಗಲಿದೆ. ಈ ಸಂಬಂಧ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಬಿಬಿಎಂಪಿಯ ಮುಖ್ಯ ಆಯುಕ್ತ ಮಹೇಶ್ವರ್‌ ರಾವ್‌ ಅವರು ಖಡಕ್‌ ಸೂಚನೆ ನೀಡಿದ್ದಾರೆ.

ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಲಾಗುತ್ತಿದ್ದು. ಮುಂದಿನ ಮೂರು ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಮಹೇಶ್ವರ್‌ ರಾವ್‌ ಅವರು ಹೇಳಿದ್ದಾರೆ. ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿದ್ದು. ಹೊರ ವರ್ತುಲ ರಸ್ತೆಯ ಪಿ.ಇ.ಎಸ್ ಕಾಲೇಜು ಬಳಿಯ ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿ ಕೈಗೆತ್ತಿಕೊಂಡಿರುವ ಮೇಲ್ಸೇತುವೆ ಕಾಮಗಾರಿಗೆ ವೇಗ ನೀಡಲಾಗುತ್ತಿದ್ದು, 3 ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.

Great good news for Bengaluru residents This junction work will be completed in 3 months

ಹೊಸರೆರೆಹಳ್ಳಿ ಜಂಕ್ಷನ್‌ ವ್ಯಾಪ್ತಿಯ 500 ಮೀ. ಉದ್ದದ ಮೇಲ್ಸೇತುವೆ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಶೇ. 75 ರಷ್ಟು ಕಾಮಗಾರಿ ಮುಗಿಸಲಾಗಿದೆ. ಇನ್ನುಳಿದ ಭಾಗದಲ್ಲಿ ಡೌನ್ ರ‍್ಯಾಂಪ್ ಕಾಮಗಾರಿ ಪ್ರಗತಿಯಲಿದೆ. ಸರ್ವೀಸ್ ರಸ್ತೆಯ ಅಗಲೀಕರಣ ಮಾಡುವ ವಿಚಾರವಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರ ಮುಗಿಸಿಕೊಂಡು ಸಂಚಾರ ಪೊಲೀಸ್ ವಿಭಾಗದ ಜೊತೆ ಮಾತನಾಡಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಹೇಳಲಾಗಿದೆ ಅಂತ ತಿಳಿಸಿದ್ದಾರೆ.

ನಾಯಂಡಹಳ್ಳಿ ಜಂಕ್ಷನ್ : ಇನ್ನು ನಾಯಂಡಹಳ್ಳಿ ಜಂಕ್ಷನ್ ಬಳಿಯ ಸರ್ವೀಸ್ ರಸ್ತೆಯಲ್ಲಿ ಬರುವ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಳ್ಳಲಾಗಿದ್ದು, ಇದನ್ನು ಕೂಡಲೇ ತೆರವು ಮಾಡಬೇಕು. ಅಲ್ಲದೇ ಆ ಮೇಲೆ ಮೇಲ್ಸೇತುವೆಯ ಕೆಳಭಾಗದಲ್ಲಿ ಅನಧಿಕೃತವಾಗಿ ಪಾರ್ಕಿಂಗ್ ಮಾಡಿರುವು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಾಯಂಡಹಳ್ಳಿ ಜಂಕ್ಷನ್ ಬಳಿ ವೃಷಭಾವತಿ ವ್ಯಾಲಿ ಮೇಲ್ಬಾಗದಲ್ಲಿ ಹೆಚ್ಚುವರಿಯಾಗಿ ಬ್ರಿಡ್ಜ್ ವೆಂಟ್ ನಿರ್ಮಿಸುವ ವಿಚಾರವಾಗಿ, ವರ್ಲ್ಡ್ ಬ್ಯಾಂಕ್ ನಿಂದ ನೀಡುತ್ತಿರುವ ಅನುದಾನದಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಸಂಬಂಧ ಅನುದಾನ ಬಂದ ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿಕೊಂಡು ಕಾಮಗಾರಿಯನ್ನು ಪ್ರಾರಂಭಿಸಿ ನಿಗದಿತ ಸಮಯದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Great good news for Bengaluru residents This junction work will be completed in 3 months

ರಾಜಕಾಲುವೆ ಹಾಗೂ ಸೈಡ್ ಡ್ರೈನ್ ಗಳಲ್ಲಿ ಹೂಳು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವ ವ್ಯವಸ್ಥೆ ಮಾಡಲು ನಿರ್ದೇಶನ ನೀಡಿದರು. ನಾಯಂಡಹಳ್ಳಿ ಜಂಕ್ಷನ್ ಬಳಿ ರಾಜಕಾಲುವೆ ಪಕ್ಕದಲ್ಲಿರುವ ಖಾಲಿ ಜಾಗವು ಪಾಲಿಕೆಯದ್ದಾಗಿದ್ದರೆ ಅದನ್ನು ಪರಿಶೀಲನೆ ಮಾಡಿ ಸ್ವಚ್ಛತೆಗೆ ಆದ್ಯತೆ ಕೊಡಿ ಎಂದು ಹೇಳಲಾಗಿದೆ.

ವೃಷಭಾವತಿ ವ್ಯಾಲಿಯಲ್ಲಿ ದೊಡ್ಡದಾದ ಸೀವೇಜ್ ಪೈಪ್ ಲೈನ್ ಹಾದು ಹೋಗುತ್ತಿದ್ದು, ಪೈಪ್ ಲೈನ್ ನಿಂದ ಸೋರಿಕೆ ಆಗುತ್ತಿರುವುದನ್ನು ಗಮನಿಸಿ ಕೂಡಲೆ ಜಲಮಂಡಳಿ ಅಧಿಕಾರಿಗಳ ಜೊತೆ ಮಾತನಾಡಿ ಸೀವೇಜ್ ರಾಜಕಾಲುವೆಗೆ ಹೋಗದಂತೆ ಸೋರಿಕೆ ತಡೆಯಲು ಹೇಳಲಾಗಿದೆ.

ಗೋಪಾಲನ್ ಆರ್ಚ್ ಬಳಿಯ ಮೇಲ್ಸೇತುವೆ: ಮೈಸೂರು ರಸ್ತೆ ಗೋಪಾಲನ್ ಆರ್ಚ್ ಬಳಿ ಮೇಲ್ಸೇತುವೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಪ್ರಸ್ತುತ 33 ಆಸ್ತಿಗಳ ಭೂಸ್ವಾಧೀನ ಪ್ರಕ್ರಿಯಿಂದಾಗಿ ಕಾಮಗಾರಿ ಸ್ಥಗಿತವಾಗಿರುತ್ತದೆ. ಈ ಸಂಬಂಧ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಇತ್ಯರ್ಥ ಮಾಡಿಕೊಂಡು ಕಾಮಗಾರಿಯನ್ನು ಪುನರಾರಂಭಿಸಲು ಸೂಚಿಸಲಾಗಿದೆ. ಇದೇ ಸ್ಥಳದಲ್ಲಿ ರಾಜಕಾಲುವೆ ಒತ್ತುವರಿ ಆಗಿಯೇ ಇಲ್ಲವೇ ಎಂದು ಸರ್ವೇ ಮಾಡಿ, ಒತ್ತುವರಿಯಾಗಿದ್ದರೆ ಕೂಡಲೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲು ರಾಜಕಾಲುವೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದರು.

ಬಿ.ಹೆಚ್‌.ಇ.ಎಲ್ ಜಂಕ್ಷನ್: ಮೈಸೂರು ರಸ್ತೆ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದ ಬಳಿ ಇರುವ ಬಿ ಹೆಚ್‌ ಇ.ಎಲ್ ಜಂಕ್ಷನ್ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡು, ಸ್ಥಳ ಪರಿಶೀಲನೆ ನಡೆಸಿ ಶೀಘ್ರಗತಿಯಲ್ಲಿ ಬಾಕಿಯಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದಿದ್ದಾರೆ.

ಕೆ.ಆರ್‌ ಮಾರುಕಟ್ಟೆ ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚನೆ

ನಗರದ ಕೆ.ಆರ್. ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಈ ಸಂದರ್ಭದಲ್ಲಿ ಬೆಂಗಳೂರಿನ ವಿವಿಧ ಕಾಮಗಾರಿಗಳ ಬಗ್ಗೆ ಮಾತನಾಡಿದ್ದಾರೆ. ಕೆ.ಆರ್ ಮಾರುಕಟ್ಟೆಗೆ ಇಂದು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ ಅವರು, ಕೆ.ಆರ್ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶಗಳು ಮತ್ತು ರಸ್ತೆಗಳನ್ನು ಪ್ರೆಶರ್ ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛಗೊಳಿಸಲು ಸೂಚಿಸಿದ್ದಾರೆ.

ಮುಂದುವರಿದು ಮಾರುಕಟ್ಟೆಯಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಸಮರ್ಕವಾಗಿ ವಿಲೇವಾರಿ ಮಾಡಬೇಕು. ಎಲ್ಲಿಯೂ ತ್ಯಾಜ್ಯ ಬಿಸಾಡದಂತೆ ನೋಡಿಕೊಂಡು ಸದಾ ಸ್ವಚ್ಛತೆಯಿರುವಂತೆ ನೋಡಿಕೊಳ್ಳಲು ಮಾರ್ಷಲ್ ಮೇಲ್ವಿಚಾರಕರಿಗೆ ಸೂಚನೆ ನೀಡಲಾಗಿದೆ. ಮಳೆಯಿಂದಾಗಿ ಕೆ.ಆರ್‌ ಮಾರುಕಟ್ಟೆ ಹಾಗೂ ಮಾರುಕಟ್ಟೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅವ್ಯವಸ್ಥೆಯಿಂದ ಕೂಡಿದೆ. ಅಲ್ಲದೇ ಕೆಸರು ಹಾಗೂ ಕಸದಿಂದ ಜನ ಇಲ್ಲಿ ಓಡಾಡುವುದಕ್ಕೆ ಆಗದೆ ಪರದಾಡುತ್ತಿದ್ದಾರೆ.

ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುತ್ತಿರುವವರ ಸಮೀಕ್ಷೆ ಮಾಡಿ, ಹೆಚ್ಚುವರಿ ಜಾಗ ಆಕ್ರಮಿಸಿಕೊಂಡು ವ್ಯಾಪಾರ ಮಾಡದಂತೆ ಅಗತ್ಯ ಕ್ರಮವಹಿಸಬೇಕು. ಅಂಗಡಿಗಳ ನಡುವಿನ ಅಂತರಕ್ಕಾಗಿ ಮಾಸ್ಟರ್ ಪ್ಲಾನ್ ಮಾಡಲು ಕಮಿಷನರ್‌ ಅವರು ಸೂಚನೆ ನೀಡಿದ್ದಾರೆ.

ಸೀಜ್ ವಾಹನಗಳನ್ನು ಬೇರೆಡೆ ಸ್ಥಳಾಂತರಿಸಲು ಸೂಚನೆ: ಸಂಚಾರಿ ಪೊಲೀಸ್ ವಿಭಾಗದಿಂದ ಸೀಜ್/ವಶಪಡಿಸಿಕೊಂಡಿರುವ ವಾಹನಗಳನ್ನು ಕೆ.ಆರ್ ಮಾರುಕಟ್ಟೆಯ ಪಾರ್ಕಿಂಗ್ ಸ್ಥಳದಲ್ಲಿದೆ. ಅವುಗಳನ್ನು ಕೂಡಲೇ ತೆರವುಗೊಳಿಸಬೇಕು. ಜೊತೆಗೆ ತುಂಬಾ ದಿನಗಳಿಂದ ನಿಂತಿರುವ ವಾಹನಗಳನ್ನು ಗುರುತಿಸಿ ಸಂಚಾರಿ ಪೊಲೀಸ್ ಸಹಯೋಗದೊಂದಿಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ.

ಇನ್ನು ಮುಖ್ಯ ಆಯುಕ್ತರು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಪಶ್ಚಿಮ ವಲಯ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಮುಖ್ಯ ಅಭಿಯಂತರರಾದ ಲೋಕೇಶ್, ಬಸವರಾಜ್ ಕಬಾಡೆ, ರಾಜೇಶ್ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+