ಬೆಂಗಳೂರಿಗರಿಗೆ ಹೊಸ ಬಿಬಿಎಂಪಿ ಆಯುಕ್ತರಿಂದ ಭರ್ಜರಿ ಗುಡ್‌ನ್ಯೂಸ್!
ಬೆಂಗಳೂರಿಗರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಮಂಗಳವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ರಸ್ತೆ, ಸಬ್ ಆರ್ಟಿರಿಯಲ್ ರಸ್ತೆಗಳಿಗೆ ಮೊದಲ ಆದ್ಯತೆ ನೀಡಿ ಮಳೆ ಪ್ರಾರಂಭವಾಗುವುದಕ್ಕೂ ಮುನ್ನ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚಲು ಕಾರ್ಯಪ್ರವೃತ್ತರಾಗಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಳೆಯಾಗುವ ಸಂದರ್ಭದಲ್ಲಿ ಕೋಲ್ಡ್ ಮಿಕ್ಸ್ ಬಳಸಿಕೊಂಡು ರಸ್ತೆಗುಂಡಿಗಳನ್ನು ಮುಚ್ಚಬೇಕು. ಡಾಂಬರೀಕರಣ ಕೈಗೆತ್ತಿಕೊಂಡಿರುವ ರಸ್ತೆಗಳಿಗೆ ತ್ವರಿತಗತಿಯಲ್ಲಿ ಡಾಂಬರೀಕರಣ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಸಾಯಿ ಲೇಔಟ್ ಸಮಸ್ಯೆ ಬಗೆಹರಿಸಿ: ಸಾಯಿ ಲೇಔಟ್‌ನಲ್ಲಿ ಜಲಾವೃತವಾಗುವುದನ್ನು ತಪ್ಪಿಸುವ ಉದ್ದೇಶದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಈಗಾಗಲೇ ಜಾಕ್ ವೆಲ್ ನಿರ್ಮಾಣ ಮಾಡಲಾಗಿದೆ. ಅದರ ಮೂಲಕ ನೀರನ್ನು ಹೊರ ಹಾಕುವ ವ್ಯವಸ್ಥೆ ಮಾಡಲಾಗಿದೆ. ಅದರ ಜೊತೆಗೆ ಪಾಲಿಕೆ ವತಿಯಿಂದ ಪಂಪ್ ಸೆಟ್‌ಗಳನ್ನು ಸ್ಥಳದಲ್ಲಿ ಶಾಶ್ವತವಾಗಿಟ್ಟು, ಜಲಾವೃತವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ಇನ್ನು ರೈಲ್ವೆ ವೆಂಟ್ ಕಾಮಗಾರಿಗೆ ವೇಗ ನೀಡಿ ತ್ವರಿತವಾಗಿ ಪೂರ್ಣಗೊಳಿಸುವ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾವಹಿಸಿ: ನಗರಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದ್ದು, ಪ್ರವಾಹಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾವಹಿಸಬೇಕು. ಆ ಸ್ಥಳದಲ್ಲಿ ಏನಾದರೂ ಸಮಸ್ಯೆ ಇದ್ದರೆ ಅದಕ್ಕೆ ಶಾಶ್ವತ ಪರಿಹಾರ ನೀಡಿ ಯಾವುದೇ ರೀತಿಯ ಸಮಸ್ಯೆಗಳಾಗಂದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ಸಣ್ಣ ಅರಣ್ಯಗಳ ನಿರ್ಮಾಣಕ್ಕೆ ಜಾಗ ಗುರುತಿಸಿ: ನಗರದಲ್ಲಿ ಸಾರ್ವಜನಿಕ ಸ್ಥಳಗಳನ್ನು ಗುರುತಿಸಿ ಸಣ್ಣ ಅರಣ್ಯಗಳನ್ನು ನಿರ್ಮಾಣ ಮಾಡಲು ಕ್ರಮವಹಿಸಬೇಕು. ಈ ಸಂಬಂಧ ಸ್ಥಳಗಳನ್ನು ಗುರುತಿಸಿದ ಬಳಿಕ ಸಣ್ಣ ಅರಣ್ಯ ನಿರ್ಮಾಣ ಮಾಡಲು ಸೂಕ್ತ ಕ್ರಮಗಳನ್ನು ವಹಿಸಲು ಸೂಚಿಸಿದರು.
ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸದ ಸಮಸ್ಯೆ, ಬೀದಿ ದೀಪ, ರಸ್ತೆ ಗುಂಡಿ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಸಹಾಯವಾಣಿ ಸಂಖ್ಯೆ, ವ್ಯಾಟ್ಸಪ್ ಸಂಖ್ಯೆಗೆ, ಸಹಾಯ 2.0 ಗೆ ಬರುವ ದೂರುಗಳಿಗೆ ಸ್ಪಂದಿಸಿ ಶೀಘ್ರ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.












Click it and Unblock the Notifications