GBA Elections: ಬೆಂಗಳೂರಿನ 5 ಪಾಲಿಕೆಗಳ ಚುನಾವಣೆ: ಮತದಾರರ ಪಟ್ಟಿ ಪರಿಷ್ಕರಣೆ ಅವಧಿ ವಿಸ್ತರಣೆ
GBA Elections: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್‌ವಾರು ಮತದಾರರ ಪಟ್ಟಿ ತಯಾರಿಸುವ ಅವಧಿ ವಿಸ್ತರಣೆ ಮಾಡಲಾಗಿದೆ. ಏಪ್ರಿಲ್ 6 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಆಗಲಿದೆ ಎಂದು ಹೇಳಲಾಗಿದೆ.
ಕರ್ನಾಟಕ ಚುನಾವಣಾ ಆಯೋಗವು ಭಾರತ ಸಂವಿಧಾನದ ಪರಿಚ್ಛೇದ 243-ZA ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಪ್ರಕರಣ 35 ರಂತೆ ಹಾಗೂ ಗ್ರೇಟರ್ ಬೆಂಗಳೂರು ಆಡಳಿತ (ಚುನಾವಣೆ) ನಿಯಮಗಳು, 2025ರ ನಿಯಮ 3 ಮತ್ತು 4ರಲ್ಲಿ ಉಲ್ಲೇಖವಾಗಿರುವ ಅಧಿಕಾರವನ್ನು ಚಲಾಯಿಸಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ ಬರುವ 5 ನಗರ ಪಾಲಿಕೆಗಳಿಗೆ ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು, 2025ರ ನಿಯಮ 3ರಂತೆ ತತ್ಕಾಲದಲ್ಲಿ ಜಾರಿಯಲ್ಲಿರುವ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ವಾರ್ಡುವಾರು ಮತದಾರರ ಪಟ್ಟಿಯನ್ನು ತಯಾರಿಸುವ ಸಲುವಾಗಿ ಸೂಚನೆಯನ್ನು ನೀಡಲಾಗಿದೆ.

ಇದರ ಅನ್ವಯ ಬೆಂಗಳೂರಿನ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಮತದಾರರ ನೋಂದಣಿ ಅಧಿಕಾರಿಗಳು 1-10-2025ರ ಅರ್ಹತಾ ದಿನಾಂಕದವರೆಗಿನ ವಿಧಾನಸಭಾ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ದಿನಾಂಕ: 19-01-2026 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ದಿನಾಂಕ 19-01-2026 ರಂದು ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯ ಕುರಿತು ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರಿಂದ ಹಲವಾರು ದೂರುಗಳು ಸ್ವೀಕೃತಗೊಂಡ ಹಿನ್ನೆಲೆಯಲ್ಲಿ "ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು, 2025ರ ನಿಯಮ 30" ರನ್ವಯ ತತ್ಕಾಲದಲ್ಲಿ ಜಾರಿಯಲ್ಲಿರುವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಿಗೆ ವಾರ್ಡ್‌ವಾರು ಮತದಾರರ ಪಟ್ಟಿಯನ್ನು ತಯಾರಿಸುವುದು ಸೂಕ್ತವೆಂದು ಅಭಿಪ್ರಾಯಿಸಿ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಲಾಗಿದೆ.
ಅಲ್ಲದೆ ಕರಡು ಮತದಾರರ ಪಟ್ಟಿಯನುಸಾರ ವಾರ್ಡ್‌ವಾರು ವಿಂಗಡಣೆಗೊಂಡಿರುವ ವಿಧಾನಸಭಾ ಕ್ಷೇತ್ರದ ಮತಗಟ್ಟೆಗಳ ಪ್ರದೇಶ ಮತ್ತು ಮತದಾರರನ್ನು ಭೌತಿಕವಾಗಿ ಪರಿಶೀಲನೆ ಮಾಡಿದಾಗ ಕೆಲವು ಪ್ರದೇಶಗಳಲ್ಲಿ ಮತದಾರರ ವಿವರಗಳು ಅದಲು-ಬದಲು ಆಗಿದ್ದು, ಭೌಗೋಳಿಕವಾಗಿ ಒಂದು ವಾರ್ಡಿನಲ್ಲಿ ವಾಸವಾಗಿರುವ ಮತದಾರರು ಮತ್ತೊಂದು ವಾರ್ಡಿನ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿರುವುದು ಹಾಗೂ ಮತಗಟ್ಟೆಗಳ ಕೊಠಡಿ ಸಂಖ್ಯೆಗಳು ನಮೂದಿಸುವಲ್ಲಿ ತಪ್ಪುಗಳಾಗಿದ್ದು, ಸದರಿ ಲೋಪದೋಷಗಳನ್ನು From to Matrix ನಲ್ಲಿ ಸರಿಪಡಿಸಲು ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು.
ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು, 2025ರ ನಿಯಮ, 19 ಮತ್ತು 20 ರನ್ವಯ ಮತದಾರರ ಪಟ್ಟಿಯನ್ನು ಅಂತಿಮವಾಗಿ ಪ್ರಕಟಿಸುವ ಮೊದಲು ಲೋಪದೋಷಗಳನ್ನು ಸರಿಪಡಿಸಲು ಅವಕಾಶವಿದ್ದು, ಅದರಂತೆ ನಿಯಮಾನುಸಾರ ಕ್ರಮ ಕೈಗೊಂಡು From to Matrix ಪ್ರಕ್ರಿಯೆಯನ್ನು ದಿನಾಂಕ: 16-02-2026 ರಿಂದ 20-02-2026 ರವರೆಗೆ ನಡೆಸಲು ಆಯೋಗವು ಅವಕಾಶ ಕಲ್ಪಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳಿಗೆ ಮತದಾರರ ಪಟ್ಟಿಯಲ್ಲಿ ಅಗತ್ಯ ಬದಲಾವಣೆಗಳ ನಂತರದ ಕಾರ್ಯಗಳನ್ನು ನಿರ್ವಹಿಸುವ ಸಲುವಾಗಿ ಈ ಕೆಳಕಂಡಂತೆ ಪರಿಷ್ಕೃತ ಕಾರ್ಯಕ್ರಮ ಪಟ್ಟಿಯನ್ನು ರೂಪಿಸಲಾಗಿದೆ.
1. ಮುದ್ರಕರು From to Matrix ನಂತೆ E-Roll ಜನರೇಟ್ ಮಾಡುವುದು: 25-02-26 ರಿಂದ 01-03-2026 ರವರೆಗೆ
2. ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯ ಮುದ್ರಣ: 02-03-26 ರಿಂದ 08-03-2026ರವರೆಗೆ
3. ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಿಸುವುದು: 09-03-2026
4. ಆಕ್ಷೇಪಣೆ ಮತ್ತು ದೂರು ಸಲ್ಲಿಸಲು ಅವಕಾಶ: 10-03-26 ರಿಂದ 16-03-2026 ರವರೆಗೆ
5. ಯಾವುದಾದರು ತಿದ್ದುಪಡಿ ಇದ್ದಲ್ಲಿ From to Matrix ನಲ್ಲಿ ಅಳವಡಿಸುವುದು: 17-03-26 ರಿಂದ 18-03-2026 ರವರೆಗೆ
6. ಪರಿಶೀಲಿಸಿದ ನಂತರ ಬದಲಾವಣೆ ಇದ್ದಲ್ಲಿ ಮ್ಯಾಟ್ರಿಕ್ಸ್ ಸಾಫ್ಟ್‌ವೇರ್‌ನಲ್ಲಿ (From to Matrix) ಸೇರಿಸುವುದು: 20-03-26 ರಿಂದ 22-03-2026 ರವರೆಗೆ.
7. ಮುದ್ರಕರು ಅಂತಿಮ ಮತದಾರರ ಪಟ್ಟಿಯ E-Roll ಜನರೇಟ್ ಮಾಡುವುದು 23-03-2026 ರಿಂದ 27-03-2026 ರವರೆಗೆ
8. ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯ ಮುದ್ರಣ: 28-03-26 ರಿಂದ 04-04-2026 ರವರೆಗೆ
9. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆ: 06-04-2026
-
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications