ಬೆಂಗಳೂರಿನ ನಿವಾಸಿಗಳಿಗೆ ಗುಡ್ನ್ಯೂಸ್ ಕೊಟ್ಟ ಗ್ರೇಟರ್ ಬೆಂಗಳೂರು ಪ್ರಾಧಿಕಾರ!
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಮುಖ ಪಾಲಿಕೆಯೊಂದು ಸಾರ್ವಜನಿಕರಿಗೆ ಭರ್ಜರಿ ಗುಡ್ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಮೇಲೆ ಐದು ಹೊಸ ಪಾಲಿಕೆಗಳ ರಚನೆ ಆಗಿದೆ. ಇದಾದ ನಂತರ ಒಂದೊಂದು ಪಾಲಿಕೆಯಲ್ಲೂ ಕೆಲವೊಂದು ಮಹತ್ವದ ಯೋಜನೆಗಳನ್ನು ರೂಪಿಸಲಾಗುತ್ತಿದೆ.
ಇದೀಗ ಬೆಂಗಳೂರಿನ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರಕ್ಕೊದೊಂದು ವಾರ್ಡ್ ಗೆ ಭೇಟಿ ನೀಡಿ ನಿವಾಸಿಗಳ ಅಹವಾಲುಗಳ ಆಲಿಸಲಾಗುವುದೆಂದು ಆಯುಕ್ತರಾದ ಕೆ.ಎನ್ ರಮೇಶ್ ಅವರು ತಿಳಿಸಿದ್ದಾರೆ. ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ಅಸೋಸಿಯೇಷನ್, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ನಿವಾಸಿಗಳ ಕುಂದುಕೊರತೆಗಳನ್ನು ಆಲಿಸಿದ ಬಳಿಕ ಅವರು ಮಾತನಾಡಿದ್ದಾರೆ.

ದಕ್ಷಿಣ ನಗರ ಪಾಲಿಕೆಯಲ್ಲಿ 72 ವಾರ್ಡ್ ಗಳು ಬರಲಿದ್ದು, ವಾರಕ್ಕೆ ಒಂದು ವಾರ್ಡ್ ಗೆ ತೆರಳಿ ನಾಗರಿಕರ ಸಮಸ್ಯೆಗಳನ್ನು ಖುದ್ದು ಆಲಿಸಿ, ಸ್ಥಳಿಯವಾಗಿರುವ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡುವುದಾಗಿ ಅವರು ತಿಳಿಸಿದ್ದಾರೆ. ಅದರಂತೆ, ನಾಗರಿಕರ ಅಹವಾಲುಗಳಿಗೆ ವಾರ್ಡ್ ಹಂತದಲ್ಲಿಯೇ ಪರಿಹಾರ ಸೂಚಿಸಲು ಅಧಿಕಾರಿಗಳ ನಿಯೋಗದೊಂದಿಗೆ ಪ್ರತಿ ವಾರ ಖುದ್ದಾಗಿ ವಾರಕ್ಕೊಮ್ಮೆ ಒಂದೊಂದು ವಾರ್ಡ್ ಗೆ ಭೇಟಿ ನೀಡಿ ನಿವಾಸಿಗಳ ಅಹವಾಲುಗಳನ್ನು ಆಲಿಸಲಾಗುವುದೆಂದು ಭರವಸೆ ನೀಡಿದ್ದಾರೆ.
ನಾಗರಿಕರು ಮಳೆ ನೀರುಗಾಲುವೆ ಒತ್ತುವರಿ, ಪಾದಚಾರಿ ಮಾರ್ಗ ಒತ್ತುವರಿ, ಬೀದಿ ದೀಪ ಸಮಸ್ಯೆ, ಘನ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ, ರಸ್ತೆ ಗುಂಡಿ, ಕಾನೂನಿಗೆ ವ್ಯತಿರಿಕ್ತವಾದ ಕಟ್ಟಡಗಳ ನಿರ್ಮಾಣ, ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳು, ಸಾರ್ವಜನಿಕ ಶೌಚಾಲಯ ನಿರ್ವಹಣೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತು ಅಹವಾಲುಗಳನ್ನು ಹೇಳಿಕೊಂಡರು.
ನಾಗರಿಕರಿಂದ ಸಮಸ್ಯೆಗಳನ್ನು ಆಲಿಸಿದ ನಂತರ, ಕೆಲವೊಂದು ಸಮಸ್ಯೆಗಳಿಗೆ ಮೈಕ್ರೋ ಹಂತದಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಇದಕ್ಕೆ ನಾಗರಿಕರ ಸಹಕಾರ ಕೂಡಾ ಅಗತ್ಯವಿರುತ್ತದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಯಲಚೇನಹಳ್ಳಿ, ಕೋಣನಕುಂಟೆ, ಜೆಪಿ ನಗರ, ಬಿಟಿಎಂ ಲೇಔಟ್, ಹೆಚ್.ಎಸ್.ಆರ್. ಲೇಔಟ್, ಪುಟ್ಟೇನಹಳ್ಳಿ ಹಾಗೂ ಇನ್ನಿತರ ಪ್ರದೇಶಗಳ ಅಪಾರ್ಟ್ಮೆಂಟ್ ಅಸೋಸಿಯೇಷನ್, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪ್ರತಿನಿಧಿಗಳು ಹಾಜರಾಗಿದ್ದರು.
ಡಬ್ಬಲ್ ಡೆಕ್ಕರ್ ಮೇಲ್ಸೇತುವೆ ನಿರ್ಮಾಣ
ನಗರದಲ್ಲಿ ರಸ್ತೆ ಅಗಲೀಕರಣದ ವೇಳೆ ಸ್ವತ್ತುಗಳಿಗೆ ಟಿ.ಡಿ.ಆರ್ ನೀಡಿ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲು ಹೆಚ್ಚು ಹಣದ ಅವಶ್ಯಕತೆಯಿದೆ. ಈ ಕಾರಣದಿಂದಾಗಿ ಡಬ್ಬಲ್ ಡೆಕ್ಕರ್ ಕೈಗೆತ್ತಿಕೊಳ್ಳಲಾಗುತ್ತಿದೆ. ಈಗಾಗಲೇ ರಾಗಿಗುಡ್ಡದಲ್ಲಿ ಡಬ್ಬಲ್ ಡೆಕ್ಕರ್ ನಿರ್ಮಾಣ ಕೂಡಾ ಮಾಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ 9,000 ಕೋಟಿ ರೂ.ಗಳ ಮೊತ್ತದಲ್ಲಿ 40 ಕಿ.ಮೀ ಉದ್ದದ ಮೆಟ್ರೋ ಸಂಯೋಜಿತ ಡಬ್ಬಲ್ ಡೆಕ್ಕರ್ ಮೇಲ್ಸೇತುವೆಗಳನ್ನು ನಿರ್ಮಾಣ ಮಾಡಲು ಉದ್ಧೇಶಿಸಲಾಗಿದೆ. ಈ ಸಂಬಂಧ ಮೆಟ್ರೋ ವತಿಯಿಂದ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲಾಗುತ್ತಿದೆ. ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.
ಐದು ಪಾಲಿಕೆಗಳಲ್ಲೂ ಕಾರ್ಯಾಚರಣೆ: ಇನ್ನು ಬೆಂಗಳೂರಿನಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡಿರುವವರ ಕಟ್ಟಡಗಳ ತೆರವು ಕಾರ್ಯಾಚರಣೆ ಭರ್ಜರಿಯಾಗಿ ನಡೆದಿದೆ. ಬೆಂಗಳೂರಿನ ಐದೂ ಪಾಲಿಕೆಗಳ ವ್ಯಾಪ್ತಿಯಲ್ಲೂ ಈ ಕಾರ್ಯಾಚರಣೆ ನಡೆಯುವ ಸಾಧ್ಯತೆ ಇದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications