ಬೆಂಗಳೂರಿನ ಪಿಜಿಗಳಿಗೆ ಬಿಗ್ ಶಾಕ್ ಕೊಟ್ಟ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಈ ನಿಯಮಗಳ ಪಾಲನೆ ಕಡ್ಡಾಯ!
PGs in Bengaluru: ಬೆಂಗಳೂರಿನಲ್ಲಿ ಪಿಜಿಗಳಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಯೊಂದರಿಂದ ಮಹತ್ವದ ಸೂಚನೆ ನೀಡಲಾಗಿದೆ. ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ ಎಂದು ಹೇಳಲಾಗಿದೆ. ಇದರ ಸಂಪೂರ್ಣ ವಿವರ ಈ ಲೇಖನದಲ್ಲಿದೆ.
ಬೆಂಗಳೂರಿನಲ್ಲಿ ಆಸ್ತಿಗಳು ಹಾಗೂ ಉದ್ದಿಮೆಗಳಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಆಡಳಿತವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ಉದ್ದಿಮೆ ಪರವಾನಗಿ ಇಲ್ಲದೆ ವಾಹಿವಾಟು ಮಾಡುತ್ತಿರುವ PG ಮಾಲೀಕರಿಗೆ ದಂಡ ವಿಧಿಸಿ ಉದ್ದಿಮೆಗೆ ಬೀಗ ಮುದ್ರೆ ಹಾಕಲಾಗುವುದು ಎನ್ನುವ ಗಂಭೀರವಾದ ಎಚ್ಚರಿಕೆಯನ್ನು ಕೊಡಲಾಗಿದೆ.

ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳ ಉದ್ದಿಮೆದಾರರಿಗೆ ಅಂತಿಮ ಎಚ್ಚರಿಕೆಯನ್ನು ಕೊಡಲಾಗಿದೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಅನೇಕ PG ಗಳು ಉದ್ದಿಮೆ ಪರವಾನಗಿ ಪಡೆಯದೆ ಹಾಗೂ ಸ್ಥಾಪಿತ ಮಾನದಂಡಗಳನ್ನು ಉಲ್ಲಂಘಿಸಿ ವಾಹಿವಾಟು ಮಾಡುತ್ತಿರುವ ದೂರು ಬಂದಿರುತ್ತದೆ ಎಂದು ಪಾಲಿಕೆಯ ಅಧಿಕಾರಿಗಳು ಹೇಳಿದ್ದಾರೆ.
ಪ್ರದೇಶದ ಪ್ರಮುಖ ಉಲ್ಲಂಘನೆಗಳಲ್ಲಿ:-
1. ವಸತಿ ವಲಯಗಳಲ್ಲಿ ಅನುಮತಿಯಿಲ್ಲದೆ ವಾಹಿವಾಟು ಮಾಡುತ್ತಿರುವುದು.
2. ಮೂಲಭೂತ ಸುರಕ್ಷತೆ ಮತ್ತು ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸದೇ ಇರುವುದು.
3. ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದು
4. ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸದಿರುವುದು ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆಗಿದೆ.
ಈ ಅನಧಿಕೃತ ಪೇಯಿಂಗ್ ಗೆಸ್ಟ್(PG)/ ವಸತಿ ಗೃಹಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಹೊಂದಿಲ್ಲದೇ ಸಾರ್ವಜನಿಕ ಆರೋಗ್ಯಕ್ಕೆ, ರಕ್ಷಣೆಗಳಿಗೆ ಅಪಾಯಕ್ಕೆ ಕಾರಣವಾಗುವ ಹಿನ್ನಲೆಯಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ (ಬಿಇಸಿಸಿ) ವ್ಯಾಪ್ತಿಯಲ್ಲಿ ಅಂತಹ ಅನಧಿಕೃತ PG ವಸತಿಗೃಹಗಳನ್ನು ನಿಯಂತ್ರಿಸುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ 07 ದಿನಗಳಲ್ಲಿ ಬೆಂಗಳೂರು ಪೂರ್ವ ನಗರ ಪಾಲಿಕೆ (ಬಿಇಸಿಸಿ) ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಇಲ್ಲದೆ ವಾಹಿವಾಟು ಮಾಡುತ್ತಿರುವ PG ಮಾಲೀಕರಿಗೆ ದಂಡ ವಿಧಿಸಿ ಉದ್ದಿಮೆಗೆ ಬೀಗ ಮುದ್ರೆ ಹಾಕಲಾಗುವುದು ಎಂದು ಸೂಚನೆ ನೀಡಲಾಗಿದೆ.
ಅಲ್ಲದೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ 2024ರ ಮಾರ್ಗಸೂಚಿಗಳನ್ನು ಪಾಲಿಸದ ಮತ್ತು ಅಗತ್ಯ ಪರವಾನಗಿಗಳನ್ನು ಪಡೆಯದೇ ಇರುವ ಪೇಯಿಂಗ್ ಗೆಸ್ಟ್ (PG)/ ವಸತಿ ಗೃಹಗಳಿಗೆ, ಬೆಂಗಳೂರು ಗೌವರ್‌ನನ್ಸ್ ಕಾಯ್ದೆ 2024ರ ರೀತ್ಯಾ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಅಭಿವೃದ್ಧಿ ಆಯುಕ್ತರಾದ ಲೋಖಂಡೆ ಸ್ನೇಹಲ್ ಸುಧಾಕರ್ ಅವರು ತಿಳಿಸಿದ್ದಾರೆ.
-
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications