ಇ - ಖಾತಾ ಮಹತ್ವದ ಹೊಸ ಅಪ್ಡೇಟ್ಸ್ ಕೊಟ್ಟ ಗ್ರೇಟರ್ ಬೆಂಗಳೂರು ಪ್ರಾಧಿಕಾರ
ಬೆಂಗಳೂರು: ಬೆಂಗಳೂರಿನ ಆಸ್ತಿದಾರರಿಗೆ ಇ - ಖಾತಾಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮತ್ತೊಂದು ಗುಡ್‌ನ್ಯೂಸ್ ನೀಡಿದೆ. ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಇ ಖಾತಾ ಪಡೆಯುವುದರಲ್ಲಿ ಸಮಸ್ಯೆ ಆಗುತ್ತಿತ್ತು. ಇದೀಗ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮಹತ್ವದ ಅಪ್ಡೇಟ್ಸ್ ನೀಡಿದೆ.
ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಇ - ಖಾತಾ ನೀಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ಫಿಪೊ(First In - First Out) ವ್ಯವಸ್ಥೆಯನ್ನು ಈಗಾಗಲೇ ಜಾರಿಗೆ ತರಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ / ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇ-ಖಾತ (eKhata)ಗಾಗಿ ವಿಶೇಷ ಕಾಲ್ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದು, ಅದರ ದೂರವಾಣಿ ಸಂಖ್ಯೆ 94806 83695 ಆಗಿದೆ. ದಯವಿಟ್ಟು ನಿಮ್ಮ ಸಮಸ್ಯೆಯನ್ನು ಅಲ್ಲಿ ನೋಂದಾಯಿಸಿ. ಆತಂಕಪಡಬೇಕಾಗಿಲ್ಲ, ಪ್ರತಿದಿನವೂ ಫಾಲೋಅಪ್ ಮಾಡಲಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇ ಖಾತಾಗೆ ಸಂಬಂಧಿಸಿದ ಪ್ರತಿ ಪ್ರಕರಣವನ್ನು ಸಹಾಯ ತಂತ್ರಾಂಶದ ಮೂಲಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ / ಬೆಂಗಳೂರು ನಗರ ಪಾಲಿಕೆಯ ಆಂತರಿಕ ದೂರುಗಳ ಟ್ರ್ಯಾಕಿಂಗ್ ವ್ಯವಸ್ಥೆ ಮೂಲಕ ಸಂಬಂಧಿಸಿದ ಎಆರ್‌ಒ / ಅಧಿಕಾರಿಗಳಿಗೆ ಕಳುಹಿಸಲಾಗುತ್ತದೆ.
ಪ್ರತಿ ದಿನ ಬೆಳಿಗ್ಗೆ, ಬಂದಿರುವಂತಹ ಎಲ್ಲಾ ಪ್ರಕರಣಗಳು ತ್ವರಿತವಾಗಿ ಇತ್ಯರ್ಥವಾಗುವಂತೆ ಖಚಿತಪಡಿಸಿಕೊಳ್ಳಲು, ವಿಶೇಷ ಆಯುಕ್ತರು ಸ್ವತಃ ಎಲ್ಲಾ 64 ಸಹಾಯಕ ಕಂದಾಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡುತ್ತೇನೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು ಹೇಳಿದ್ದಾರೆ.
ಅರ್ಜಿಗಳು ಸ್ವೀಕರಿಸಿದ ಕ್ರಮದಲ್ಲೇ ಇತ್ಯರ್ಥವಾಗುವಂತೆ ಫಿಪೊ (First In - First Out) ಮೊದಲು ಬಂದವರಿಗೆ ಮೊದಲ ಆದ್ಯತೆ ಎನ್ನುವ ವ್ಯವಸ್ಥೆಯನ್ನು ಈಗಾಗಲೇ ಅಳವಡಿಸಲಾಗಿದೆ. ದಯವಿಟ್ಟು ವ್ಯವಸ್ಥೆಯ ಮೂಲಕವೇ ಮತ್ತು ಇ-ಖಾತಾ ಹೆಲ್ಪ್ ಲೈನ್ ಮೂಲಕವೇ ಕಾರ್ಯನಿರ್ವಹಿಸಿ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
1. ಯಾವುದೇ ಜಿಬಿಎ ಅಥವಾ ನಗರ ನಿಗಮದ ಕಚೇರಿಗಳಿಗೆ ಭೇಟಿ ನೀಡಬೇಡಿ.
2. ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಿ.
3. ಸಮಸ್ಯೆ ಇದ್ದಲ್ಲಿ ಇ-ಖಾತಾ ಹೆಲ್ಪ್‌ಲೈನ್ 94806 83695 ಗೆ ದೂರು ದಾಖಲಿಸಿ.
ಅದರ ನಂತರ ಸ್ವಲ್ಪ ಸಮಯ ಕಾಯಿರಿ - ನಿಮ್ಮ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುತ್ತದೆ.
ನಂತರ ನೀವು
1. ಹೆಲ್ಪ್‌ಲೈನ್ ಮೂಲಕ ಅನುಸರಣೆ ಮಾಡಬಹುದು ಅಥವಾ
2. ನಿಮ್ಮ ಇ-ಖಾತಾ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು:
https://bbmpeaasthi.karnataka.gov.in/citizen_core/Final_eKhatha_Status_based_on_ePID
3. FAQs (ಪದೇಪದೇ ಕೇಳುವ ಪ್ರಶ್ನೆಗಳು) ನೋಡಲು:
https://bbmpeaasthi.karnataka.gov.in/subpage.html? sid=U2FsdGVkX1%2BWw3w1xmXXcdfXaKbwZgDi%2FzpquzY0OdM%3D
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications