ಗ್ರೇಟರ್ ಬೆಂಗಳೂರು ಚುನಾವಣೆ 2026: ಕರಡು ಮತದಾರರ ಪಟ್ಟಿ ದೂರು ಸಲ್ಲಿಕೆ ಅವಧಿ ವಿಸ್ತರಣೆ, ಅಂತಿಮ ಪಟ್ಟಿ ಮುಂದೂಡಿಕೆ
Greater Bengaluru: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ, ದೂರು ಹಾಗೂ ಆಕ್ಷೇಪಣೆ ಸಲ್ಲಿಕೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ಚುನಾವಣಾ ಆಯೋಗದ ನಿರ್ದೇಶನದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆ-2026ರ ಸಂಬಂಧ ವಾರ್ಡ್ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ದಿನಾಂಕ 09.03.2026 ರಂದು ಪ್ರಕಟಿಸಲಾಗಿತ್ತು. ಈ ಕರಡು ಮತದಾರರ ಪಟ್ಟಿಯ ಪ್ರತಿಗಳು ಎಲ್ಲ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ವಾರ್ಡ್ ಕಚೇರಿಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತವೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೇ ಮಾಹಿತಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ನಲ್ಲಿಯೂ https://gba.karnataka.gov.in/electoral2026 ಲಭ್ಯವಾಗುವಂತೆ ಮಾಡಲಾಗಿದೆ. ಮತದಾರರು ತಮ್ಮ ಹೆಸರನ್ನು Search by Name ಅಥವಾ Search by EPIC Number ಆಯ್ಕೆಗಳ ಮೂಲಕ ಪರಿಶೀಲಿಸಿಕೊಳ್ಳಬಹುದು. ಪರಿಷ್ಕೃತ ಕರಡು ಮತದಾರರ ಪಟ್ಟಿಯ ಕುರಿತು ದೂರುಗಳು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 10.03.2026 ರಿಂದ 20.03.2026 ರವರೆಗೆ ಕಾಲಾವಕಾಶ ನೀಡಲಾಗಿತ್ತು. ನಂತರ ಈ ಕುರಿತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಭಾಗವಹಿಸಿದ ಪ್ರತಿನಿಧಿಗಳು ದೂರು ಹಾಗೂ ಆಕ್ಷೇಪಣೆ ಸಲ್ಲಿಕೆ ಅವಧಿಯನ್ನು ವಿಸ್ತರಿಸಲು ಒಕ್ಕೊರಲಿನಿಂದ ಮನವಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಕರ್ನಾಟಕ ಚುನಾವಣಾ ಆಯೋಗಕ್ಕೆ ಅವಧಿ ವಿಸ್ತರಣೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದನ್ನು ಪರಿಗಣಿಸಿದ ಆಯೋಗವು ಸಾರ್ವಜನಿಕರು ಹಾಗೂ ಮತದಾರರಿಗೆ ಅನುಕೂಲವಾಗುವಂತೆ ದೂರು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ದಿನಾಂಕ: 30.03.2026 ರವರೆಗೆ ವಿಸ್ತರಿಸಿದೆ. ಇದೇ ವೇಳೆ, ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ದಿನಾಂಕವನ್ನು ದಿನಾಂಕ: 06.04.2026 ರಿಂದ 18.04.2026 ರವರೆಗೆ ಮುಂದೂಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral











Click it and Unblock the Notifications