ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ
ಬೆಂಗಳೂರು, ಡಿಸೆಂಬರ್ 09: ಸೇನಾ ಹೆಲಿಕಾಪ್ಟರ್ ಪತನದ ಬಳಿಕ ಪವಾಡಸದೃಶದಂತೆ ಬದುಕುಳಿದ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲಾಗುತ್ತಿದೆ.
ತಮಿಳುನಾಡಿನ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಏಕೈಕ ಯೋಧ, ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ರನ್ನು ತಮಿಳುನಾಡಿನ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಿಂದ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗುತ್ತಿದೆ ಎಂದು ಅವರ ತಂದೆ ಮಾಹಿತಿ ನೀಡಿದ್ದಾರೆ.
ವರುಣ್ ಸಿಂಗ್ರನ್ನು ಬೆಂಗಳೂರಿಗೆ ಶಿಫ್ಟ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದಿದ್ದಾರೆ. ಹೇಗಿದ್ದಾರೆ ನಿಮ್ಮ ಮಗ ಎಂದು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಈಗಲೇ ಏನೂ ಹೇಳಲಾರೆ. ಯಾವುದೂ ಖಚಿತವಿಲ್ಲ ಎಂದಿದ್ದಾರೆ.

ಘಟನೆ ನಡೆದಾಗ ವರುಣ್ ಸಿಂಗ್ ತಂದೆ ಕೆ.ಪಿ.ಸಿಂಗ್ ಮತ್ತು ಅವರ ಪತ್ನಿ ಇಬ್ಬರೂ ಮುಂಬೈನಲ್ಲಿ, ತಮ್ಮ ಕಿರಿಯ ಮಗ ತನುಜ್ ಮನೆಯಲ್ಲಿ ಇದ್ದರು. ತನುಜ್ ಕೂಡ ಭಾರತೀಯ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಕಮಾಂಡರ್ ಆಗಿದ್ದಾರೆ.
ನಾನು ಫೋನ್ ಮಾಡಿ ಕೆ.ಪಿ.ಸಿಂಗ್ ಬಳಿ ಮಾತನಾಡಿದ್ದೇನೆ ಎಂದಿದ್ದಾರೆ. ಹಾಗೇ, ಕೆ.ಪಿ.ಸಿಂಗ್ ಅವರಿಗೆ ತಮ್ಮ ಪುತ್ರ ವರುಣ್ ಸಿಂಗ್ ಬಗ್ಗೆ ಹೆಮ್ಮೆಯಿದೆ. ಆತ ಫೈಟರ್ ಮತ್ತು ಈ ಜೀವನ್ಮರಣದ ಹೋರಾಟದಲ್ಲೂ ಗೆದ್ದು ಬರುತ್ತಾನೆ ಎಂಬ ನಂಬಿಕೆಯಿದೆ ಎಂದು ಅವರು ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ತೇಜಸ್ ಏರ್ಕ್ರಾಫ್ಟ್ ಟೆಸ್ಟ್ ಹಾರಾಟ ನಡೆಸುತ್ತಿದ್ದ ವೇಳೆ ಕೂಡ ವರುಣ್ ಸಿಂಗ್ ಜೀವಕ್ಕೆ ಅಪಾಯ ಎದುರಾಗಿತ್ತು. ಅಂದು ಬದುಕಿ ಬಂದಿದ್ದ ಅವರ ಶೌರ್ಯಕ್ಕೆ ತಕ್ಕನಾಗಿ ಶೌರ್ಯಚಕ್ರ ಪ್ರಶಸ್ತಿ ಕೊಟ್ಟು ಪುರಸ್ಕರಿಸಲಾಗಿದೆ.
ತಮಿಳುನಾಡಿನ ಕೂನೂರ್ ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್ ಬಿಪಿನ್ ರಾವತ್, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್ ಸಿಂಗ್. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.
ಪೈಲಟ್ ವರುಣ್ ಅವರು ಶೇ. 45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿರುವ ಏರ್ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಶಿಫ್ಟ್ ಮಾಡುವ ಬಗ್ಗೆ ಚರ್ಚೆಗಳು ತೀವ್ರವಾಗಿ ನಡೆಯುತ್ತಿವೆ.
ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ 14 ಜನರ ಪೈಕಿ CDS ಬಿಪಿನ್ ರಾವತ್ ಸೇರಿ 13 ಜನ ಮೃತಪಟ್ಟಿದ್ದರು.
ಮೃತರ ಹೆಸರುಗಳು:
1. ಸಿಡಿಎಸ್ ಬಿಪಿನ್ ರಾವತ್
2. ಸಿಡಿಎಸ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್
3. ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್
4. ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್
5. ವಿಂಗ್ ಕಮಾಂಡರ್ ಪಿ.ಎಸ್.ಚೌಹಾಣ್
6. ಸ್ಕ್ವಾಡ್ರನ್ ಲೀಡರ್ ಕೆ.ಸಿಂಗ್
7. ಜೂನಿಯರ್ ವಾರಂಟ್ ಆಫೀಸರ್ ದಾಸ್
8. ಜೂನಿಯರ್ ವಾರಂಟ್ ಆಫೀಸರ್ ಪ್ರದೀಪ್ ಎ.
9. ಹವಾಲ್ದಾರ್ ಸತ್ಪಾಲ್ ರೈ,
10. ನಾಯಕ್ ಗುರುಸೇವಕ್ ಸಿಂಗ್
11. ನಾಯಕ್ ಜಿತೇಂದರ್ ಕುಮಾರ್
12. ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಮತ್ತು
13. ಲ್ಯಾನ್ಸ್ ನಾಯಕ್ ಸಾಯಿತೇಜ
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications