Gruha Jyothi Scheme: ಉಚಿತ ವಿದ್ಯುತ್ ಯೋಜನೆ: ಬೆಂಗಳೂರಿನ ಬಾಡಿಗೆದಾರರಿಗೆ ಬೆಸ್ಕಾಂ ಗುಡ್‌ನ್ಯೂಸ್

Gruha Jyothi Scheme: ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಜನರಿಗೆ ಕೊನೆಗೂ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಬೆಂಗಳೂರಿನಲ್ಲಿ ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗುವ ಆತಂಕದಲ್ಲಿ ಬಾಡಿಗೆದಾರರು ಇದ್ದರು. ಬೆಂಗಳೂರಿನಲ್ಲಿ ಲಕ್ಷಾಂತರ ಜನ ಬಾಡಿಗೆ ಮನೆಯಲ್ಲಿದ್ದಾರೆ. ಹಲವರು ಬಾಡಿಗೆ ಮನೆಗಳನ್ನು ಖಾಲಿ ಮಾಡುವುದು ಸಹ ಇದೆ. ಆದರೆ, ಇದೀಗ ಸರ್ಕಾರ ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ನಡೆಸುತ್ತಿದ್ದು, ಗೃಹಜ್ಯೋತಿ ಯೋಜನೆಯಿಂದ ವಂಚಿತರಾಗುವ ಆತಂಕ ಜನರಲ್ಲಿ ಮೂಡಿತ್ತು. ಇದೀಗ ಈ ಗೊಂದಲಗಳಿಗೆ ಕೊನೆಗೂ ತೆರೆ ಎಳೆಯಾಗಲಿದೆ. ನೀವು ಬೆಂಗಳೂರಿನಲ್ಲಿ ಬಾಡಿಗೆ ಮನೆಯನ್ನು ಬದಲಾಯಿಸಿದ್ದರೂ ಆತಂಕ ಬೇಡ ಎಂದು ಹೇಳಲಾಗಿದೆ.

ಗೃಹಜ್ಯೋತಿ ಯೋಜನೆಯ ಪರಿಷ್ಕರಣೆ ಅಥವಾ ಫಲಾನುಭವಿಗಳ ಮಾಹಿತಿ ಪರಿಶೀಲನೆ ವೇಳೆ ಆಧಾರ್ ಮಾಹಿತಿ ಅಪ್‌ಲೋಡ್ ಕುರಿತು ಬಾಡಿಗೆದಾರರು ಗೊಂದಲ, ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಈ ನಿಟ್ಟಿನಲ್ಲಿ ಕೆಲವೊಂದು ಸರಳ ವಿಧಾನಗಳನ್ನು ಅನುಸರಿಸಿದರೆ ಸಾಕು ಎಂದು ಬೆಸ್ಕಾಂ ಸ್ಪಷ್ಟನೆ ನೀಡಿದೆ. ಈ ಹಿಂದೆ ವಾಸವಿದ್ದ ಬಾಡಿಗೆದಾರರ ಆಧಾರ್ ಮಾಹಿತಿ ತೆಗೆದರೆ ಈಗ ಇರುವ ಬಾಡಿಗೆ ಮನೆಗೆ ಗೃಹಜ್ಯೋತಿ ಯೋಜನೆ ಸಿಗುವುದಿಲ್ಲವೇ ಎನ್ನುವ ಪ್ರಶ್ನೆ ಹಲವರಲ್ಲಿ ಇತ್ತು.

Gruha Jyothi Scheme

ಇದೀಗ ಈ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಬೆಸ್ಕಾಂ ಮಾಡಿದ್ದು, ಕೆಲವೊಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದೆ. ಬೆಸ್ಕಾಂನ ಮೀಟರ್‌ಡರ್‌ ಹಾಗೂ ಸಿಬ್ಬಂದಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಳೆಯ ಬಾಡಿಗೆದಾರರ ಆಧಾರ್ ವಿವರ ತೆಗೆದು, ಈಗ ವಾಸವಿರುವ ಬಾಡಿಗೆದಾರರ ಆಧಾರ್‌ ವಿವರಗಳನ್ನು ಅಪ್‌ಡೇಟ್ ಮಾಡಲಿದ್ದಾರೆ. ಈ ರೀತಿ ಮಾಡುವುದರಿಂದ ಯೋಜನೆ ಸ್ಥಗಿತಗೊಳ್ಳಲಿದೆಯೇ ಎನ್ನುವ ಆತಂಕ ಸಾರ್ವಜನಿಕರಿಗೆ ಬೇಡ ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರಿನ ಬಾಡಿಗೆದಾರರು ಏನು ಮಾಡಬೇಕು

ಇನ್ನು ಬೆಂಗಳೂರಿನಲ್ಲಿ ಬಾಡಿಗೆದಾರರು ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಯ ಭಾಗವಾಗಿ ಯಾವುದೇ ಕಚೇರಿಗೆ ಹೋಗುವ ಅವಶ್ಯಕತೆ ಇಲ್ಲ ಎಂದು ಹೇಳಲಾಗಿದೆ. ಬಾಡಿಗೆದಾರರು ತಮ್ಮ ವಿವರಗಳನ್ನು ಬದಲಾಯಿಸಲು ಯಾವುದೇ ಕಚೇರಿಗೆ ಹೋಗುವ ಅವಶ್ಯಕತೆ ಇಲ್ಲ. ಬೆಸ್ಕಾಂ ಸಿಬ್ಬಂದಿಯೇ ಮನೆಗೆ ಬಂದು ಆಧಾರ್ ಮತ್ತು ಬಾಡಿಗೆದಾರರ ರೆಂಟಲ್ ಅಗ್ರಿಮೆಂಟ್ ವಿವರಗಳನ್ನು ಅಪ್‌ಡೇಟ್ ಮಾಡಿಕೊಳ್ಳಲಿದ್ದಾರೆ. ಗೃಹಜ್ಯೋತಿ ಯೋಜನೆಯಲ್ಲಿ ದಾಖಲೆಗಳ ಪರಿಶೀಲನೆಯು ಸಾಮಾನ್ಯ ಪ್ರಕ್ರಿಯೆ ಆಗಿದೆ. ಬೆಸ್ಕಾಂ ಸಿಬ್ಬಂದಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಹಕರಿಸಬೇಕು.

Gruha Jyothi Scheme: ಉಚಿತ ವಿದ್ಯುತ್ ಯೋಜನೆ: ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವುದು ಹೇಗೆ, ಹೊಸ ದಾಖಲೆಗಳ ವಿವರ
Gruha Jyothi Scheme: ಉಚಿತ ವಿದ್ಯುತ್ ಯೋಜನೆ: ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವುದು ಹೇಗೆ, ಹೊಸ ದಾಖಲೆಗಳ ವಿವರ

ಮುಂದುವರಿದು ಮನೆಯ ಮಾಲೀಕರು ಅಥವಾ ಆಸ್ತಿದಾರರು ಆಯಾ ಮನೆಗಳಲ್ಲಿ ಇರುವ ಬಾಡಿಗೆದಾರರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸಹಕರಿಸಬೇಕು ಎಂದೂ ಬೆಸ್ಕಾಂ ಮನವಿ ಮಾಡಿದೆ. ಗೃಹಜ್ಯೋತಿ ಯೋಜನೆಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಕ್ಕೆ ಸಂಪರ್ಕಿಸಬಹುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+