Gruha Lakshmi: ಲಕ್ಷಾಂತರ ಗೃಹಿಣಿಯರಿಗೆ ಬದುಕಿಗೆ ಭರವಸೆಯ ಬೆಳಕು ತಂದ ಯೋಜನೆ: ಸಿದ್ದರಾಮಯ್ಯ
ಬೆಂಗಳೂರು: ಅಧಿಕಾರಕ್ಕೆ ತರುತ್ತಿದ್ದಂತೆ ಜಾರಿಗೆ ತಂದ ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಜಾರಿಗೆ ತರಲಾಯಿತು. ಯೋಜನೆ ಲಕ್ಷಾಂತರ ಗೃಹಲಕ್ಷ್ಮಿಯರ ಬದುಕಿನಲ್ಲಿ ಭರವಸೆಯ ಬೆಳಕಾಗಿದೆ. ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆ, ಆರೋಗ್ಯ, ಹೀಗೆ ತಮ್ಮ ಕುಟುಂಬದ ಅಗತ್ಯಗಳಿಗೆ ತಾವೇ ನಿರ್ಧಾರ ತೆಗೆದುಕೊಳ್ಳುವ ಆರ್ಥಿಕ ಶಕ್ತಿಯನ್ನು ಈ ಯೋಜನೆ ಮಹಿಳೆಯರಿಗೆ ನೀಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಗಳಲ್ಲಿ ಒಂದಾಗಿರುವ ಗೃಹ ಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದು ಮೂರು ವರ್ಷಗಳಾಗಿವೆ. ಈ ಸಂಬಂಧ ಪ್ರತಿಕ್ರಿಯಿಸಿ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, 'ಮೂರು ವರ್ಷಗಳ ಹಿಂದೆ ಇದೇ ದಿನ, ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಗೆ ಚಾಲನೆ ನೀಡಿದ್ದೆ ಎಂದು ನೆನೆಯಲು ಹೆಮ್ಮೆಯೆನಿಸುತ್ತದೆ' ಎಂದು ಯೋಜನೆ ಆರಂಭದ ದಿನಗಳನ್ನು ಸ್ಮರಿಸಿದ್ದಾರೆ.

ಚುನಾವಣೆಯ ಸಂದರ್ಭದಲ್ಲಿ ನಾವು ನೀಡಿದ್ದ ಭರವಸೆಯನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿಗೆ ತರುವ ಸಂಕಲ್ಪ ಮಾಡಿದ್ದೆ. ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ನಮ್ಮ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದು, ರಾಜ್ಯದ ಪ್ರತಿಯೊಬ್ಬ ಅರ್ಹ ಮಹಿಳೆಗೆ ಪ್ರತಿ ತಿಂಗಳು ₹2,000 ನೀಡುವ ಭರವಸೆಯನ್ನು ಈಡೇರಿಸಿದೆವು ಎಂದು ಹೇಳಿದರು.
ಗೃಹಿಣಿಯರಿಗೆ ಆರ್ಥಿಕ ಸ್ವಾತಂತ್ರ್ಯ
ರಾಜ್ಯದ ಲಕ್ಷಾಂತರ ಗೃಹಲಕ್ಷ್ಮಿಯರ ಬದುಕಿನಲ್ಲಿ ಈ ಯೋಜನೆ ಭರವಸೆಯ ಬೆಳಕಾಗಿದೆ. ಕುಟುಂಬದ ನಿರ್ವಹಣೆಯಲ್ಲಿ ಈ ಹಣ ಉಪಯುಕ್ತವಾಗಿ ಬಳಕೆ ಆಗುತ್ತಿದೆ. ಒಬ್ಬ ತಾಯಿಯ ಮುಖದಲ್ಲಿ ಮೂಡುವ ನೆಮ್ಮದಿ, ಒಬ್ಬ ಗೃಹಿಣಿಗೆ ಸಿಕ್ಕಿರುವ ಆರ್ಥಿಕ ಸ್ವಾತಂತ್ರ್ಯ, ಮಕ್ಕಳ ಭವಿಷ್ಯದ ಬಗ್ಗೆ ಒಂದು ಕುಟುಂಬದಲ್ಲಿ ಮೂಡುವ ವಿಶ್ವಾಸ ಇವೇ ಗೃಹಲಕ್ಷ್ಮಿಯ ನಿಜವಾದ ಯಶಸ್ಸು ಎಂದು ಸಿದ್ದರಾಮಯ್ಯ ಅವರು ಬಣ್ಣಿಸಿದರು.
ಕೋಟ್ಯಂತರ ಮನೆ ಮನಗಳಲ್ಲಿ ಸಂತೋಷ, ನೆಮ್ಮದಿ ಮತ್ತು ಆತ್ಮವಿಶ್ವಾಸದ ದೀಪ ಬೆಳಗುತ್ತಿರುವುದನ್ನು ನೋಡಲು ನನಗೆ ಸಂತೋಷವಾಗುತ್ತಿದೆ. ಗೃಹಲಕ್ಷ್ಮಿ ಕೇವಲ ಒಂದು ಯೋಜನೆಯಲ್ಲ. ಅದು ಮಹಿಳೆಯರ ಮೇಲಿನ ನಮ್ಮ ನಂಬಿಕೆ, ಗೌರವ ಮತ್ತು ಬದ್ಧತೆಯ ಪ್ರತೀಕವಾಗಿದೆ.
ಭರವಸೆಗಳು ರಾಜಕಾರಣವಲ್ಲ. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ನಿಜವಾದ ಜನಸೇವೆ. ಗೃಹಲಕ್ಷ್ಮಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು' ಎಂದು ಅವರು ತಿಳಿಸಿದ್ದಾರೆ.
ವಾರ್ಷಿಕ 24,00 ರೂಪಾಯಿ
ರಾಜ್ಯ ಸರ್ಕಾರ ಪ್ರತಿ ತಿಂಗಳು ಕುಟುಂಬ ಒಬ್ಬ ಗೃಹಿಣಿ/ಯಜಮಾನಿಗೆ 2000 ರೂಪಾಯಿ ಹಣವನ್ನು ಖಾತೆಗೆ ಜಮೆ ಮಾಡುತ್ತಿದೆ. ತಿಂಗಳಿಗೆ 2000 ರೂ.ನಂತೆ ವರ್ಷಕ್ಕೆ 24 ರೂ. ಜಮೆ ಮಾಡುತ್ತಾ ಬಂದಿದೆ. ಸದ್ಯ ಯೋಜನೆಗೆ ಮೂರು ವರ್ಷಗಳು ಪೂರೈಸಿದ್ದು, ಇದು ಜನಪರ ಯೋಜನೆ ಎಂದು ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಯೋಜನೆಯಡಿ ಅನರ್ಹ ಫಲಾನುಭವಿಗಳಿಗೆ ಹಣ ಹೋಗದಂತೆ ಎಚ್ಚರಿಕೆ ವಹಿಸಿರುವ ಸರ್ಕಾರ, ದಾಖಲಾತಿ ಪರಿಶೀಲನೆ, ಆಧಾರ್ ದೃಢೀಕರಣದಂತಹ ಕ್ರಮ ಕೈಗೊಂಡಿದೆ.


Click it and Unblock the Notifications
