ಸೋನಿಯಾ ಅವರಿಂದ ಶೋಕ ಸಂದೇಶ ಹೊತ್ತು ತಂದ ಗುಲಾಂನಬಿ
ಬೆಂಗಳೂರು, ನವೆಂಬರ್ 26: ಏಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಕಳಿಸಿದ ಶೋಕ ಸಂದೇಶವನ್ನು ಹಿರಿಯ ನಾಯಕ ಗುಲಾಂ ನಬಿ ಆಜಾದ್ ತಲುಪಿಸಿದ್ದಾರೆ.
ನಟ, ಮಾಜಿ ಸಚಿವ ಅಂಬರೀಶ್ ಹಾಗೂ ಮಾಜಿ ಸಚಿವ ಜಾಫರ್ ಷರೀಫ್ ನಿಧನರಾಗಿದ್ದು ಕರ್ನಾಟಕದ ಜನತೆ ಶೋಕಸಾಗರದಲ್ಲಿ ಮುಳುಗಿದೆ. ಅಂಬರೀಶ್ ಅಂತಿಮ ದರ್ಶನ ಪಡೆಯಲು ಚಿತ್ರರಂಗದ ದಿಗ್ಗಜರು, ರಾಜಕಾರಣಿಗಳು ಈಗಾಗಲೇ ಬಂದು ಹೋಗಿದ್ದಾರೆ. ಇದೀಗ ಕಂಠೀರವ ಕ್ರೀಡಾಂಗಣದಿಂದ ಕಂಠೀರವ ಸ್ಟುಡಿಯೋಗೆ ಅಂತಿಮ ಯಾತ್ರೆ ತೆರಳುತ್ತಿದೆ.
ಕಾಂಗ್ರೆಸ್ ನಾಯಕರಾದ ಗುಲಾಂ ನಬಿ ಆಜಾದ್ ಹಾಗೂ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅಂಬರೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರನ್ನು ಭೇಟಿಮಾಡಿ ಚರ್ಚೆ ನಡೆಸಿದ್ದಾರೆ.
In Pics : 'ದಿಗ್ಗಜ'ನನ್ನು ಕಳೆದುಕೊಂಡು ಕಂಬನಿ ಮಿಡಿಯುತ್ತಿರುವ ಚಿತ್ರರಂಗ

ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಶೋಕ ಸಂದೇಶದ ಪತ್ರವನ್ನು ಅಂಬರೀಶ್ ಪುತ್ರ ಅಭಿಷೇಕ್ ಗೌಡ ಅವರಿಗೆ ಹಸ್ತಾಂತರಿಸಲಾಯಿತು. ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಸಂದರ್ಭದಲ್ಲಿ ಹಾಜರಿದ್ದರು.












Click it and Unblock the Notifications