ಆರ್‌ಬಿಐ ಜೊತೆ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಸಭೆ

ಬೆಂಗಳೂರು, ಜನವರಿ 13 : ಆರ್‌ಬಿಐ ನೋಟಿಸ್ ಬಳಿಕ ಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಗ್ರಾಹಕರು ಕಂಗಾಲಾಗಿದ್ದಾರೆ. ಗ್ರಾಹಕರ ಜೊತೆ ಸೋಮವಾರ ಸಹಕಾರ ಬ್ಯಾಂಕ್ ಸಿಬ್ಬಂದಿಗಳು ಸಭೆ ನಡೆಸಿದ್ದಾರೆ.

ಜನವರಿ 14ರ ಮಂಗಳವಾರ ಆರ್ ಅಧಿಕಾರಿಗಳ ಜೊತೆ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಸಿಬ್ಬಂದಿಗಳ ಸಭೆ ನಿಗದಿಯಾಗಿದೆ. ಗ್ರಾಹಕರ ಆತಂಕ ದೂರ ಮಾಡಲು ಸಭೆಯಲ್ಲಿ ಯಾವ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕಾದು ನೋಡಬೇಕಿದೆ.

ಸುಮಾರು 2400 ಕೋಟಿ ರೂ. ವಹಿವಾಟು ನಡೆಸುವ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ಗೆ ಜನವರಿ 10ರಂದು ಆರ್‌ಬಿಐ ನೋಟಿಸ್ ಜಾರಿ ಮಾಡಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಯಾವುದೇ ಗ್ರಾಹಕರು ಹಣ ಡ್ರಾ ಮಾಡಬಾರದು ಎಂದು ಸೂಚಿಸಲಾಗಿದೆ.

Guru Raghavendra Sahakara Bank Officials To Visit RBI

ಆರ್‌ಬಿಐ ನೋಟಿಸ್ ನೀಡುತ್ತಿದ್ದಂತೆ ನೂರಾರು ಗ್ರಾಹಕರು ಬ್ಯಾಂಕ್ ಮುಂದೆ ಜಮಾಯಿಸಿದ್ದರು. ತಮ್ಮ ಠೇವಣಿ ಹಣವನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದರು. ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಸುಮಾರು 2400 ಕೋಟಿ ವಹಿವಾಟು ನಡೆಸುವ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ 6 ಶಾಖೆಗಳನ್ನು ಹೊಂದಿದೆ. ವಹಿವಾಟಿನಲ್ಲಿ ಅಕ್ರಮ ಕಂಡು ಬಂದ ಹಿನ್ನಲೆಯಲ್ಲಿ ಆರ್‌ಬಿಐ ನೋಟಿಸ್ ನೀಡಿದೆ. ಇದರಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ.

ಬ್ಯಾಂಕ್ ಆಡಳಿತ ಮಂಡಳಿ ಈಗಾಗಲೇ ನೋಟಿಸ್ ಕುರಿತು ಸ್ಪಷ್ಟನೆ ನೀಡಿದ್ದು, ಬ್ಯಾಂಕ್‌ನಿಂದ ಸಾಲಪಡೆದವರ ಖಾತೆಯಲ್ಲಿ ಆರ್‌ಬಿಐ ಕೆಲವು ಲೋಪ ಗುರುತಿಸಿದೆ. ಈ ಕಾರಣದಿಂದ ಪ್ರತಿ ಖಾತೆಯಿಂದ ಕೇವಲ 35 ಸಾವಿರ ರೂ. ಮಾತ್ರ ಡ್ರಾ ಮಾಡಲು ಸೂಚಿಸಿದೆ ಎಂದು ಹೇಳಿದೆ.

ಸೋಮವಾರ ಗ್ರಾಹಕರ ಜೊತೆ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಸಿಬ್ಬಂದಿಗಳು ಸಭೆಯನ್ನು ನಡೆಸಿದ್ದಾರೆ. ಸಭೆಗೆ ಅಧ್ಯಕ್ಷರು ಗೈರಾಗಿದ್ದಕ್ಕೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+