ಗುರುವಂದನಾ - ಬಸವರಾಜ ರಾಜಗುರುವಿಗೆ ನಮನ
ಬೆಂಗಳೂರು, ಮಾ.20: ಪದ್ಮಭೂಷಣ ವಿಜೇತ, ಹಿಂದೂಸ್ತಾನಿ ಸಂಗೀತ ಕ್ಷೇತ್ರದ ದಿಗ್ಗಜ ಪಂಡಿತ ಬಸವರಾಜ ರಾಜಗುರು ಅವರ ಸ್ಮರಣಾರ್ಥ ಗೆಳೆಯರ ಬಳಗ ಸಂಸ್ಥೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ಶನಿವಾರ(ಮಾ.21) ಹಮ್ಮಿಕೊಂಡಿದೆ. ಇದೇ ಸಂದರ್ಭದಲ್ಲಿ ಹೆಸರಾಂತ ಗಾಯಕ ಪಂ. ಪರಮೇಶ್ವರ ಹೆಗಡೆ ಅವರ ಸಂಗೀತ ಕಛೇರಿ ಆಯೋಜಿಸಲಾಗಿದೆ.
ಮಲ್ಲೇಶ್ವರದ ಸೇವವಾಸದನದಲ್ಲಿ ಸಂಜೆ 4.30ಕ್ಕೆ ನಡೆಯುವ ಈ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಲ್ಲಿ; ನಾಗರಾಜ್ ಶಿರನಾಲಾ ಅವರ ಬಾನ್ಸುರಿ ವಾದನ ಹಾಗೂ ಯುವ ಗಾಯಕ ಹರೀಶ್ ಹೆಗಡೆ ಹಳವಳ್ಳಿ ಅವರ ಗಾಯನ ನಡೆಯಲಿದೆ.
ಈ ಕಲಾವಿದರಿಗೆ ಸಹವಾದನದಲ್ಲಿ ಪಂ. ಗೋಪಾಲಕೃಷ್ಣ ಹೆಗಡೆ ಕಲಭಾಗ, ಗುರುಮೂರ್ತಿ ವೈದ್ಯ, ಶೌರಿ ಶಾನಭೋಗ್ (ತಬಲಾ) ಹಾಗೂ ಮಧುಸೂದನ ಭಟ್ (ಹಾರ್ಮೋನಿಯಂ) ಸಾಥ್ ನೀಡಲಿದ್ದಾರೆ.
ಪ್ರವೇಶ ಉಚಿತ. ಹೆಚ್ಚಿನ ವಿವರಗಳಿಗೆ ಸಂಪರ್ಕ: +9180953 04253
ಸ್ಥಳ: ಸೇವಾಸದನ, 14ನೇ ಕ್ರಾಸ್, ಮಲ್ಲೇಶ್ವರ.
ಸಮಯ: ಶನಿವಾರ ಸಂಜೆ 4.30.
ಬಸವರಾಜ ಮಹಾಂತಸ್ವಾಮಿ ರಾಜಗುರು: ಸುರ್ ಕಾ ಬಾದಶಾಹ ಎಂದು ಖ್ಯಾತರಾದ ಬಸವರಾಜ ಮಹಾಂತಸ್ವಾಮಿ ರಾಜಗುರು ಧಾರವಾಡ ಜಿಲ್ಲೆಯ ಎಲಿವಾಳ ಗ್ರಾಮದಲ್ಲಿ ಜನಿಸಿದರು. 1917 ಆಗಸ್ಟ್ 24ರಂದು ಜನಿಸಿದರು.
ಬಸವರಾಜ ರಾಜಗುರು ಅವರು ಆರಂಭದಲ್ಲಿ ರಂಗಗೀತೆಗಳನ್ನು ಕಲಿತು ಹಾಡಿದರೂ ಗದಗಿನ ಅಂಧ ಗಾನಯೋಗಿ ಪಂಚಾಕ್ಷರಿ ಗವಾಯಿಗಳ ಸಂಪರ್ಕದಿಂದ ಶಾಸ್ತ್ರೀಯ ಗಾಯನ ವೃತ್ತಿಗೆ ಬಂದರು.
ಕಿರಾಣಾ, ಗ್ವಾಲಿಯರ ಹಾಗು ಪತಿಯಾಳಾ ಘರಾಣಾಗಳ ಆಳ ಜ್ಞಾನ ಉಳ್ಳವರಾಗಿದ್ದರು. ಈ ಮೂರೂ ಘರಾಣಾಗಳ ಶ್ರೇಷ್ಠ ಅಂಶಗಳನ್ನು ಒಳಗೊಂಡ ಸಂಗೀತ ಅವರದಾಗಿತ್ತು.

ಕಲಾವಿದರ ಕಿರು ಪರಿಚಯ : ಪಂ. ಪರಮೇಶ್ವರ ಹೆಗಡೆ
ಪಂ. ಬಸವರಾಜ ರಾಜಗುರು ಅವರ ಪ್ರಮುಖ ಶಿಷ್ಯರಲ್ಲೊಬ್ಬರು ಪಂ. ಪರಮೇಶ್ವರ ಹೆಗಡೆ. ಉತ್ತರ ಕನ್ನಡದ ಹೊನ್ನಾವರದ ಕಲಭಾಗ ಎಂಬ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಪರಮೇಶ್ವರ ಹೆಗಡೆ, ಎಸ್. ಎಂ. ಭಟ್ ಅವರ ಬಳಿ ಸಂಗೀತಾಭ್ಯಾಸ ಪ್ರಾರಂಭಿಸಿದರು. ನಂತರ ಧಾರವಾಡದ ಪಂ. ಚಂದ್ರಶೇಖರ ಪುರಾಣಿಕಮಠರ ಬಳಿ ಸಂಗೀತ ಕಲಿಕೆಯನ್ನು ಮುಂದುವರಿಸಿದರು.
ಬಳಿಕ ಸ್ವತಃ ಪುರಾಣಿಕಮಠ ಅವರೇ ಹೆಚ್ಚಿನ ಸಂಗೀತಾಭ್ಯಾಸಕ್ಕೆಂದು ಹೆಗಡೆಯವರನ್ನು ಬಸವರಾಜ ರಾಜಗುರು ಅವರ ಬಳಿಗೆ ಕಳಿಸಿದರು. ಹಲವು ವರ್ಷಗಳ ಕಾಲ ರಾಜಗುರುಗಳ ಬಳಿ ಸಂಗೀತಾಭ್ಯಾಸ ಮಾಡಿರುವ ಪಂ. ಪರಮೇಶ್ವರ ಹೆಗಡೆಯ, ದೇಶವಿದೇಶಗಳಲ್ಲಿ ಸಂಗೀತ ಕಛೇರಿಗಳನ್ನು ನೀಡಿದ್ದಾರೆ.

ಕಲಾವಿದರ ಕಿರು ಪರಿಚಯ ನಾಗರಾಜ್ ಶಿರನಾಲಾ
ಪಂ. ವೆಂಕಟೇಶ್ ಗೋಡ್ಖಿಂಡಿ, ಟಿ. ವಿ. ಚೌಹಾಣ್ ಅವರ ಬಳಿ ಬಾನ್ಸುರಿ ಅಭ್ಯಾಸ ಮಾಡಿರುವ ನಾಗರಾಜ್, ಸದ್ಯ ಖ್ಯಾತ ಸಿತಾರ್ ವಾದಕ ಉಸ್ತಾದ್ ಶಾಹೀದ್ ಪರ್ವೇಜ್ ಅವರ ಬಳಿ ತಮ್ಮ ಅಭ್ಯಾಸವನ್ನು ಮುಂದುವರಿಸುತ್ತಿದ್ದಾರೆ.
ಆಕಾಶವಾಣಿ 'ಹೈ ಗ್ರೇಡ್' ಕಲಾವಿದರಾದ ಅವರು, ಹಲವು ಸಂಗೀತ ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಪಡೆದಿದ್ದಾರೆ. ದೇಶದ ನಾನಾ ಭಾಗಗಳಲ್ಲಿ ಹಾಗೂ ವಿದೇಶಗಳಲ್ಲೂ ಸಂಗೀತ ಕಛೇರಿ ನೀಡಿರುವ ನಾಗರಾಜ್, ಕಳೆದ ಹತ್ತು ವರ್ಷಗಳಿಂದ ಆಸಕ್ತ ವಿದ್ಯಾರ್ಥಿಗಳಿಗೆ ಸಂಗೀತಪಾಠ ಮಾಡುತ್ತಿದ್ದಾರೆ.

ಕಲಾವಿದರ ಕಿರು ಪರಿಚಯ ಹರೀಶ್ ಹೆಗಡೆ ಹಳವಳ್ಳಿ
ಹಿರಿಯ ಗಾಯಕ ಪಂ. ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಹಲವು ವರ್ಷಗಳಿಂದ ಸಂಗೀತಾಭ್ಯಾಸ ಮಾಡುತ್ತಿರುವ ಹರೀಶ್, ಭರವಸೆಯ ಯುವ ಕಲಾವಿದರಲ್ಲೊಬ್ಬರು.
ಸಂಗೀತದಲ್ಲಿ ಚಿನ್ನದ ಪದಕದೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ಹಲವಾರು ಕಡೆ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಪ್ರಸ್ತುತ ಅವರು ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಗೆಳೆಯರ ಬಳಗದ ಬಗ್ಗೆ
ಗೆಳೆಯರ ಬಳಗ'ವು ಪಂ. ಬಸವರಾಜ ರಾಜಗುರು ಅವರ ಸ್ಮರಣಾರ್ಥ ಕಳೆದ ಮೂರು ವರ್ಷಗಳಲ್ಲಿ; ವಿಖ್ಯಾತ ಗಾಯಕರಾದ ಪಂ. ಗಣಪತಿ ಭಟ್ ಹಾಸಣಗಿ, ಪಂ. ಶ್ರೀಪಾದ ಹೆಗಡೆ ಕಂಪ್ಲಿ, ಪಂ. ಎಂ. ಪಿ. ಹೆಗಡೆ ಪಡಿಗೇರಿ ಅವರ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಜೊತೆಗೆ ಉದಯೋನ್ಮುಖ ಗಾಯಕರಾದ ವಿಶಾಲ್ ಕಂಪ್ಲಿ, ರಘುನಂದನ್ ಬ್ರಹ್ಮಾವರ ಅವರೂ ಈ ಕಾರ್ಯಕ್ರಮಗಳಲ್ಲಿ ಗಾಯನವನ್ನು ಪ್ರಸ್ತುತಪಡಿಸಿದ್ದರು.

ಸಂಗೀತವನ್ನು ವಿದ್ಯಾರ್ಥಿಗಳಿಗೆ ಧಾರೆಯೆರೆದರು
ಬಸವರಾಜ ರಾಜಗುರು ತಮ್ಮ ಗುರು ಪಂಚಾಕ್ಷರಿ ಗವಾಯಿಗಳಿಗೆ ಕೊಟ್ಟ ಮಾತಿನಂತೆ, ತಮ್ಮ ಸಂಗೀತ ವಿದ್ಯೆಯನ್ನು ನಿರ್ವಂಚನೆಯಿಂದ ಅನೇಕ ವಿದ್ಯಾರ್ಥಿಗಳಿಗೆ ಧಾರೆಯರೆದರು.
ಸಂಗೀತ ಕ್ಷೇತ್ರದಲ್ಲಿ ಈಗ ಪ್ರಸಿದ್ಧರಾದ ಗಣಪತಿ ಭಟ್ಟ, ಪರಮೇಶ್ವರ ಹೆಗಡೆ, ಶಾಂತಾರಾಮ ಹೆಗಡೆ ಹಾಗು ನಚಿಕೇತ ಶರ್ಮಾ ಮೊದಲಾದವರು ರಾಜಗುರುಗಳ ಶಿಷ್ಯಂದಿರು. ಬಸವರಾಜ ರಾಜಗುರುಗಳಿಗೆ 1975ರಲ್ಲಿ ಪದ್ಮಶ್ರೀ ಪ್ರಶಸ್ತಿ ಹಾಗು 1991ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದವು. ಅಲ್ಲದೆ ಕರ್ನಾಟಕ ರಾಜ್ಯ ಹಾಗು ಕೇಂದ್ರದ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ ಸಹ ಲಭಿಸಿದ್ದವು.-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications