H.D Kumaraswamy: ಡಿನೋಟಿಫಿಕೇಷನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಹೆಚ್‌ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಇಂದು ಲೋಕಾಯುಕ್ತ ಕಚೇರಿಗೆ ಆಗಮಿಸಿ ವಿಚಾರಣೆಗೆ ಒಳಗಾಗಿದ್ದಾರೆ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತರು ನೋಟಿಸ್ ಜಾರಿ ಮಾಡಿದ್ದರಿಂದ ಹೆಚ್‌ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ. ಮತ್ತೊಬ್ಬ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೂ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದು, ಅವರು ಈಗಾಗಲೇ ವಿಚಾರಣೆಗೆ ಹಾಜರಾಗಿದ್ದರು.

ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿ ಹೆಚ್‌.ಡಿ ಕುಮಾರಸ್ವಾಮಿ ಅಲ್ಲಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ತೆರಳಿದರು. ಸೋಮವಾರ ವಿಚಾರನೆಗೆ ಹಾಜರಾಗಲು ಲೋಕಾಯುಕ್ತ ಪೊಲೀಸರು ನೋಟಿಸ್‌ನಲ್ಲಿ ತಿಳಿಸಿದ್ದರು, ಆದರೆ ಸೋಮವಾರ ಬೇರೆ ಕೆಲಸ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗುವುದಾಗಿ ಲೋಕಾಯುಕ್ತ ಪೊಲೀಸರಿಗೆ ಮಾಹಿತಿ ನೀಡಿದ್ದರು.

H D Kumaraswamy Appears at Lokayukta Office for Gangenahalli Denotification Case Investigation

ಹೆಚ್‌ಡಿ ಕುಮಾರಸ್ವಾಮಿ ಸಿಎಂ ಆಗಿದ್ದ ಅವಧಿಯಲ್ಲಿ ಗಂಗೇನಹಳ್ಳಿಯಲ್ಲಿರುವ ನೂರಾರು ಕೋಟಿ ಮೌಲ್ಯದ ಜಮೀನನ್ನು ಡಿನೋಟಿಫಿಕೇಷನ್ ಮಾಡಲು ಯತ್ನಿಸಿದ್ದರು, ಅಷ್ಟರಲ್ಲಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ, ಬಿಎಸ್‌ ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಡಿನೋಟಿಫಿಕೇಷನ್ ಮಾಡಿದ್ದು, ಹೆಚ್‌ಡಿ ಕುಮಾರಸ್ವಾಮಿ ತಮ್ಮ ಸಂಬಂಧಿಯ ಲಾಭಕ್ಕಾಗಿ, ಬಿಡಿಎ ಆಸ್ತಿಯನ್ನು ನಿಯಮ ಮೀರಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಡಿವೈಎಸ್​ಪಿ ಬಸವರಾಜ್ ಮುಗುದಂ ಹೆಚ್‌ಡಿ ಕುಮಾರಸ್ವಾಮಿಯವರನ್ನು ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ಹೆಚ್‌. ಡಿ ಕುಮಾರಸ್ವಾಮಿ ನಾನು ಯಾವ ತಪ್ಪೂ ಮಾಡಿಲ್ಲ, ಸರ್ಕಾರ ನಾನು ಕೇಂದ್ರ ಸಚಿವನಾಗಿದ್ದನ್ನು ಸಹಿಸದೆ ಈ ರೀತಿ ಪ್ರಕರಣ ದಾಖಲಿಸಿದೆ ಎಂದು ಆರೋಪಿಸಿದ್ದಾರೆ. ಎಲ್ಲವೂ ಕಾನೂನು ಪ್ರಕಾರನವೇ ನಡೆದಿದೆ, ಸಿಎಂ ಸಿದ್ದರಾಮಯ್ಯ ಕುಡ ಬಿಡಿಎ ಸೇರಿದಂತೆ ಹಲವು ಸರ್ಕಾರಿ ಜಾಗಗಳನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಮೇಲೆ ಪ್ರಕರಣ ದಾಖಲಾಗಿರುವುದರಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ವಿಪಕ್ಷ ನಾಯಕರ ಹಳೆಯ ಪ್ರಕರಣಗಳನ್ನು ಕೆದಕಿ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+