ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಹೆಚ್ ಡಿ ಕುಮಾರಸ್ವಾಮಿ ನೀಡಿದ ಸಂದೇಶವೇನು?
ಬೆಂಗಳೂರು, ಜುಲೈ 27: ಕರ್ನಾಟಕದ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭಾಷಯ ಕೋರಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು. ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ pic.twitter.com/MrlF5ae6Uz
— H D Kumaraswamy (@hd_kumaraswamy) July 27, 2021
"ಪ್ರಸ್ತುತ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿರುವ ರಾಜ್ಯಕ್ಕೆ ಪರಿಹಾರಾತ್ಮಕವಾಗಿ ಕೆಲಸ ಮಾಡುವಿರೆಂದು ನಿರೀಕ್ಷಿಸುವೆ. ನೀರಾವರಿ ವಿಚಾರಗಳಲ್ಲಿ ತಮಗೆ ಜ್ಞಾನವುಂಟು. ಅಣೆಕಟ್ಟು ನಿರ್ಮಾಣದಂಥ ವಿಷಯದಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳತ್ತ ತಾವು ಗಮನಹರಿಸುವಿರೆಂದು ಭಾವಿಸುವೆ," ಎಂದು ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆಯಲ್ಲಿ ಬಸವರಾಯ ಬೊಮ್ಮಾಯಿರನ್ನು ರಾಜ್ಯದ ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿಯಿತು. ಸಿಎಂ ಆಯ್ಕೆ ದಿನವೇ ರಾಜ್ಯದಲ್ಲಿ ಮೂವರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಗೋವಿಂದ ಕಾರಜೋಳ, ಆರ್ ಅಶೋಕ್ ಹಾಗೂ ಶ್ರೀರಾಮುಲುರಿಗೆ ಉಪ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಗಿದೆ.

ಬುಧವಾರ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ:
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಸವರಾಜ ಬೊಮ್ಮಾಯಿರನ್ನು ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಹ್ವಾನಿಸಿದ್ದಾರೆ. ಕರ್ನಾಟಕ ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಜುಲೈ 28ರ ಬೆಳಗ್ಗೆ 11 ಗಂಟೆಗೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
-
Viral : ರ್ಯಾಪಿಡೋ ಬುಕ್ ಮಾಡಿದವನಿಗೆ ಕಾದಿತ್ತು ಬಿಗ್ ಶಾಕ್: ತನ್ನ ಶಾಲೆಯ 'ಕ್ಲಾಸ್ ಟಾಪರ್' ಈಗ ರ್ಯಾಪಿಡೋ ರೈಡರ್ -
PV Sindhu: ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಪತಿ ಸ್ವಿಮ್ಮಿಂಗ್ ಪೂಲ್ನಲ್ಲಿ ಈಜು ಸಾಹಸ: ಫಿಟ್ನೆಸ್ ತಜ್ಞರು ಹೇಳಿದ್ದೇನು? -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು?












Click it and Unblock the Notifications