• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರೀತಿಯ ಅಕ್ಕ ಶೋಭಾ ಕರಂದ್ಲಾಜೆ ಹೇಳಿಕೆಗೆ ಕುಸುಮಾ ಪ್ರತಿಕ್ರಿಯೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 11: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದೆ. ಕಾಂಗ್ರೆಸ್ ಕುಸುಮಾ ಹನುಮಂತರಾಯಪ್ಪ ಅಭ್ಯರ್ಥಿ ಘೋಷಣೆ ಮಾಡಿದೆ. ಬಿಜೆಪಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಲು ಪರದಾಡುತ್ತಿದೆ. ಆದರೆ, ಪ್ರಚಾರ ಕಾರ್ಯಕ್ಕೆ ಕಿಚ್ಚು ಹಚ್ಚಿದೆ.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕುಸುಮಾ ಪತಿ, ಐಎಎಸ್ ಅಧಿಕಾರಿಯಾಗಿದ್ದ ದಿ. ಡಿ. ಕೆ. ರವಿ ಹೆಸರನ್ನು ಪ್ರಸ್ತಾಪಿಸಿದ್ದರು. "ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ" ಎಂದು ಹೇಳಿಕೆ ನೀಡಿದ್ದರು.

ಉಪ ಚುನಾವಣೆಯಲ್ಲಿ ಡಿ. ಕೆ. ರವಿ ಹೆಸರು ಬಳಕೆ; ಕುಸುಮಾ ಸ್ಪಷ್ಟನೆ ಉಪ ಚುನಾವಣೆಯಲ್ಲಿ ಡಿ. ಕೆ. ರವಿ ಹೆಸರು ಬಳಕೆ; ಕುಸುಮಾ ಸ್ಪಷ್ಟನೆ

ಫೇಸ್ ಬುಕ್ ಪೋಸ್ಟ್ ಮೂಲಕ ಕುಸುಮಾ ಅವರು ಶೋಭಾ ಕರಂದ್ಲಾಜೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. "ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಎನ್ನುವುದನ್ನು ಇಡೀ ದೇಶವೇ ನೋಡಿದೆ, ನೋಡುತ್ತಿದೆ" ಎಂದು ಹೇಳಿದ್ದಾರೆ.

ಆರ್. ಆರ್. ನಗರ ಟಿಕೆಟ್ ಘೋಷಣೆ; ಕುಸುಮಾ ಫೇಸ್‌ ಬುಕ್ ಪೋಸ್ಟ್ ಆರ್. ಆರ್. ನಗರ ಟಿಕೆಟ್ ಘೋಷಣೆ; ಕುಸುಮಾ ಫೇಸ್‌ ಬುಕ್ ಪೋಸ್ಟ್

"ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ ನೊಂದವರ ನೋವ ನೋಯದವರೆತ್ತ ಬಲ್ಲರೊ? ಎಂಬ ವಚನ ನೆನಪಿಗೆ ಬರುತಿದೆ. ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ!. ಇದು ನಿಮಗೆ ನೀವೇ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು" ಎಂದು ಪೋಸ್ಟ್ ಹಾಕಿದ್ದಾರೆ.

ಉಪ ಚುನಾವಣೆಗೆ ಡಿ. ಕೆ. ರವಿ ಪತ್ನಿ ಸ್ಪರ್ಧೆ; ಗೌರಮ್ಮ ಆಕ್ರೋಶ ಉಪ ಚುನಾವಣೆಗೆ ಡಿ. ಕೆ. ರವಿ ಪತ್ನಿ ಸ್ಪರ್ಧೆ; ಗೌರಮ್ಮ ಆಕ್ರೋಶ

ಮಾಧ್ಯಮಗಳ ಜೊತೆ ಮಾತನಾಡಿದ್ದ ಶೋಭಾ ಕರಂದ್ಲಾಜೆ, "ಡಿ. ಕೆ. ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿ. ಕೆ. ರವಿ ಓರ್ವ ದಕ್ಷ ಅಧಿಕಾರಿಯಾಗಿದ್ದರು. ಆದರೆ, ಇಂದು ಅವರು ನಮ್ಮ ಜೊತೆ ಇಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆಯದಾಗಲ್ಲ" ಎಂದು ಹೇಳಿದ್ದರು.

"ರವಿ ಅವರ ಹೆಸರು ಪ್ರಸ್ತಾಪಿಸದೆ ಇರುವುದು ಒಳ್ಳೆಯದು. ರವಿ ಅವರ ಪತ್ನಿಯ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಡಿ. ಕೆ. ರವಿ ಸಾವಿನಿಂದ ಅವರ ತಂದೆ ತಾಯಿಗೆ ಆದ ಅವಮಾನ ಅವರ ಕೆಟ್ಟ ಪರಿಸ್ಥಿತಿ ಎಲ್ಲವೂ ಚರ್ಚೆಯ ವಿಷಯವಾಗಿದೆ" ಎಂದು ಶೋಭಾ ಕರಂದ್ಲಾಜೆ ಮಾತನಾಡಿದ್ದರು.

   ಮನೆ ಮುಂದೆ ಗಾಂಜಾ ಗಿಡ, ಖತರ್ನಾಕ್ ಕಳ್ಳರು | Oneindia Kannada
   English summary
   Rajarajeshwari Nagar by elections Congress candidate Kusuma Hanumantharayappa face book post for the BJP MP Shobha Karandlaje who used late D. K. Ravi name during her comment on by elections.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X