ಕಾಂಗ್ರೆಸ್ ತೊರೆದಿದ್ದ ಎಚ್.ವಿಶ್ವನಾಥ್ ಜೆಡಿಎಸ್ ಗೆ ಅಧಿಕೃತ ಸೇರ್ಪಡೆ
ಬೆಂಗಳೂರು, ಜುಲೈ 4 : ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ತಮ್ಮ ಅಪಾರ ಅಭಿಮಾನಿಗಳೊಂದಗೆ ಇಂದು (ಮಂಗಳವಾರ) ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು.
ಬೆಂಗಳೂರಿನ ಜೆಡಿಎಸ್ ಕಚೇರಿ ಜೆ ಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ವಿಶ್ವನಾಥ್ ಜೆಡಿಎಸ್ ಸೇರಿದರು.

ಇದಕ್ಕೂ ಮುನ್ನ ವಿಶ್ವನಾಥ್, ಬಸವನಗುಡಿಯ ದೊಡ್ಡ ಗಣಪತಿ ದೇವಾಲಯದಲ್ಲಿ ವಿಶೇಷ ಸಲ್ಲಿಸಿ ಬಳಿಕ ಜೆಡಿಎಸ್ ಪಕ್ಷದ ಕಚೇರಿಗೆ ತೆರಳಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದ ವಿಶ್ವನಾಥ್ ಇತ್ತೀಚೆಗೆ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.












Click it and Unblock the Notifications