ವಿಧಾನದ ಸೌಧದ ಲಿಫ್ಟ್ ಗಳಲ್ಲಿ 'ಹಚ್ಚೇವು ಕನ್ನಡದ ದೀಪ' ಕಂಪು
ಬೆಂಗಳೂರು, ಡಿಸೆಂಬರ್ 16 : ವಿಧಾನ ಸೌಧದ ಲಿಫ್ಟ್ ಗಳಲ್ಲಿ ಇನ್ನುಮುಂದೆ ಹಚ್ಚೇವು ಕನ್ನಡದ ದೀಪ ಭಾವಗೀತೆಯ ಇಂಪಾದ ಗಾಯನವನ್ನು ಕೇಳಬಹುದು.
ಡಿ.ಎಸ್. ಕರ್ಕಿಯವರ ಹಚ್ಚೇವು ಕನ್ನಡದ ದೀಪ ಭಾವಗೀತೆಯ ಕಂಪು ಇದೀಗ ಆಡಳಿತ ಶಕ್ತಿ ಕೇಂದ್ರವಾದ ವಿಧಾನಸೌಧದ ಲಿಫ್ಟ್ ಗಳಲ್ಲೂ ಪಸರಿಸುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಒತ್ತಾಸೆ ಮೇರೆಗೆ ಸರ್ಕಾರ ಇದೀಗ ವಿಧಾನ ಸೌಧದ ಲಿಫ್ಟ್ ಗಳಲ್ಲೂ ಕನ್ನಡ ಅನುಷ್ಠಾನಕ್ಕೆ ಮುಂದಾಗಿದೆ.

ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಸಂಗೀತ ನಿರ್ದೇಶನದಲ್ಲಿ ಪತ್ನಿ ಲತಾ ಹಂಸಲೇಖ ಹಾಡಿರುವ ಹಚ್ಚೇವು ಕನ್ನಡದ ದೀಪ ಭಾವಗೀತೆ ಲಿಫ್ಟ್ ನಲ್ಲಿ ಕೇಳಿಸುತ್ತಿದೆ. ಜನವರಿ ವೇಳೆಗೆ ಪಕ್ಕದ ವಿಕಾಸ ಸೌಧ, ಬಹುಮಹಡಿ ಕಟ್ಟಡ ಹಾಗೂ ವಿಶ್ವೇಶ್ವರಯ್ಯ ಗೋಪುರಗಳ ಕಟ್ಟಡದ ಲಿಫ್ಟ್ ಗಳಲ್ಲೂ ಇಂಪಾದ ಭಾವಗೀತೆಯನ್ನು ನೌಕರರು ಕೇಳಬಹುದು.
ರಾಜ್ಯದ ಆಡಳಿತ ಭಾಷೆ ಕನ್ನಡ ಎಲ್ಲ ಇಲಾಖೆಗಳಲ್ಲೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಬೇಕಾದರೆ ವಿಧಾನಸೌಧವೂ ಕನ್ನಡಮಯಗೊಳ್ಳಬೇಕು. ವಿಧಾನಸೌಧ ಪ್ರವೇಶಿಸುವ ಲಿಫ್ಟ್‌ಗಳಿಂದಲೇ ಅದು ಆರಂಭವಾಗಬೇಕು. ನಮ್ಮ ಈ ಪ್ರಯತ್ನಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸರಕಾರ ಲಿಫ್ಟ್‌ಗಳಿಂದಲೇ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಿದೆ,'' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications