ಹ್ಯಾಕರ್ ಶ್ರೀಕೃಷ್ಣ ಸಿಸಿಬಿ ಕಸ್ಟಡಿ ಡಿ. 1 ರ ವರೆಗೆ ವಿಸ್ತರಣೆ
ಬೆಂಗಳೂರು, ನವೆಂಬರ್ 26: ಡ್ರಗ್ ಜಾಲ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಹ್ಯಾಕರ್ ಶ್ರೀಕೃಷ್ಣ ಸಿಸಿಬಿ ಪೊಲೀಸರ ವಿಚಾರಣೆಯಲ್ಲಿ ಸ್ಫೋಟಕ ವಿಚಾರಗಳನ್ನು ಹೊರ ಹಾಕಿದ್ದಾನೆ. ಗ್ಯಾಂಬ್ಲಿಂಗ್ ಗೆ ಸಂಬಂಧಿಸಿದ 30 ಕ್ಕೂ ಹೆಚ್ಚು ವೆಬ್ ತಾಣಗಳನ್ನು ಹ್ಯಾಕ್ ಮಾಡಿ ಬಿಟ್ ಕಾಯಿನ್ ಮೂಲಕ ಹಣ ವಸೂಲಿ ಮಾಡಿದ್ದ. ಡಿಸೆಂಬರ್ 1 ರ ವರೆಗೂ ಪೊಲೀಸರ ಕಸ್ಟಡಿ ಅವಧಿ ವಿಸ್ತರಿಸಿ ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ .
ಕೆ.ಜಿ.ನಗರ ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಶ್ರೀಕೃಷ್ಣನ ಹ್ಯಾಕಿಂಗ್ ಅವತಾರ ನೋಡಿ ಸಿಸಿಬಿ ಪೊಲೀಸರೇ ದಂಗಾಗಿದ್ದಾರೆ. ಗ್ಯಾಂಬ್ಲಿಂಗ್ ಗೆ ಸಂಬಂಧಿಸಿದ ಮೂವತ್ತಕ್ಕೂ ಹೆಚ್ಚು ವೆಬ್ ತಾಣಗಳನ್ನು ಹ್ಯಾಕ್ ಮಾಡಿರುವುದು ಈತ ತಪ್ಪೊಪ್ಪಿಕೊಂಡಿದ್ದಾನೆ. ಹ್ಯಾಕ್ ಮಾಡಿದ ವೆಬ್ ತಾಣ ಮಾಲೀಕರಿಂದ ಬಿಟ್ ಕಾಯಿನ್ ರೂಪದಲ್ಲಿ ಹಣ ಪಡೆದು ಅದನ್ನು ಡ್ರಗ್ ಜಾಲಕ್ಕೆ ಬಳಸುತ್ತಿದ್ದ.
ಶ್ರೀಕೃಷ್ಣ ಹ್ಯಾಂಕಿಂಗ್ ಬಗ್ಗೆ ವಿವರ ನೀಡಿರುವ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಶ್ರೀಕೃಷ್ಣ ಹ್ಯಾಕಿಂಗ್ ಮಾಡಿರುವ ವೆಬ್ ತಾಣಗಳ ಬಗ್ಗೆ ತಾಂತ್ರಿಕ ಸಾಕ್ಷಾಧಾರಗಳನ್ನು ಸಂಗ್ರಹಿಸುತ್ತಿದ್ದೇವೆ. ಆರೋಪಿ ಸಾಕಷ್ಟು ಅಕ್ರಮಗಳನ್ನು ಎಸಗಿ 30 ಕ್ಕೂ ಹೆಚ್ಚು ವೆಬ್ ತಾಣ ಹ್ಯಾಕ್ ಮಾಡಿರುವುದನ್ನು ತಪ್ಪೊಪ್ಪಿಕೊಂಡಿದ್ದಾನೆ. ಗೇಮ್ ಮತ್ತು ಪೋಕರ್ ಸಂಬಂಧಿಸಿದ ವೆಬ್ ತಾಣಗಳನ್ನು ಹ್ಯಾಕ್ ಮಾಡಿದ್ದು, ಬಿಟ್ ಕಾಯಿನ್ ರೂಪದಲ್ಲಿ ಹಣ ಪಡೆದಿದ್ದಾನೆ. ಹ್ಯಾಕಿಂಗ್ ಪ್ರಕರಣಗಳ ಮಾಹಿತಿ ಪಡೆದು ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಆರೋಪಿ ಶ್ರೀಕೃಷ್ಣನನ್ನು ಡ್ರಗ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಇತರೆ ಆರೋಪಿಗಳಾದ ಸುನೀಶ್ ಹೆಗ್ಡೆ ಮತ್ತು ಪ್ರಸಿದ್ಧ್ ಶೆಟ್ಟಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಡಿಸೆಂಬರ್ 1 ರ ವರೆಗೂ ಸಿಸಿಬಿ ಪೊಲೀಸರ ವಶದಲ್ಲಿದ್ದು ವಿಚಾರಣೆ ಎದುರಿಸಲಿದ್ದಾನೆ.
ಎರಡು ಪ್ರಕರಣದಲ್ಲಿ ವಶಕ್ಕೆ: ಶ್ರೀಕೃಷ್ಣ ಬಂಧನದಿಂದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಆತ ಪೊಲೀಸರಿಗೆ ಬೇಕಾಗಿದ್ದು, ಎರಡೂ ಪ್ರಕರಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಯು.ಬಿ. ಸಿಟಿಯಲ್ಲಿ ಉದ್ಯಮಿಯ ಪುತ್ರ ವಿದ್ವತ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಶ್ರೀಕೃಷ್ಣ ಮೂರನೇ ಆರೋಪಿ. ಘಟನೆ ಬಳಿಕ ಪೋನ್ ಬಳಸದೇ ತಲೆ ಮರೆಸಿಕೊಂಡು ತಿರುಗಾಡುತ್ತಿದ್ದ. ಡ್ರಗ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದ ಬಳಿಕವೇ ಈ ವಿಷಯ ಬಹಿರಂಗವಾಗಿತ್ತು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಲಿದ್ದಾನೆ.
ಇನ್ನು ಕರ್ನಾಟಕ ಇ ಟೆಂಡರ್ ಪೋಟ್ರಲ್ ಹ್ಯಾಕ್ ಮಾಡಿ ಹನ್ನೊಂದು ಕೋಟಿ ರೂಪಾಯಿ ಎಗರಿಸಿದ ಪ್ರಕರಣ ಸಂಬಂಧ ಸಿಐಡಿ ಸೈಬರ್ ಘಟಕದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೆಬ್ ತಾಣ ಹ್ಯಾಕ್ ಮಾಡಿ ಇಎಂಡಿ ಮೊತ್ತವನ್ನು ಎನ್‌ಜಿಓ ಖಾತೆಗೆ ರವಾನಿಸಲಾಗಿತ್ತು. ಈ ಸಂಬಂಧ ಸೈಬರ್ ಠಾಣೆ ಪೊಲೀಸರು ಶ್ರೀಕೃಷ್ಣನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಮತ್ತಷ್ಟು ಮಾಹಿತಿ ಹೊರ ಬರಲಿದ್ದು, ಹ್ಯಾಕ್ ವಿವರಗಳನ್ನು ಸಂಬಂಧಪಟ್ಟ ರಾಜ್ಯ ಪೊಲೀಸರ ಜತೆ ಸಿಸಿಬಿ ಪೊಲೀಸರು ಹಂಚಿಕೊಳ್ಳಲಿದ್ದು, ಸರಣಿ ಪ್ರಕರಣಗಳಲ್ಲಿ ಶ್ರೀಕೃಷ್ಣ ಸಿಕ್ಕಿ ಹಾಕಿಕೊಳ್ಳುವ ಲಕ್ಷಣ ಗೋಚರಿಸುತ್ತಿದೆ.
-
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ









Click it and Unblock the Notifications