ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿ ನೋಟಿಫಿಕೇಷನ್: ವಿಡಿಯೋ ಕಾನ್ಫರೆನ್ಸ್ ಮೂಲಕ ಎಚ್‌ಡಿಕೆ ಕೋರ್ಟ್‌ಗೆ ಹಾಜರು

|
Google Oneindia Kannada News

ಬೆಂಗಳೂರು, ಏಪ್ರಿಲ್ 17: ಹಲಗೇವಡೇರಹಳ್ಳಿ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು. ಕೋವಿಡ್ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಖಾಸಗಿ ಹೋಟೆಲ್‌ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿತ್ತು.

ಹಲಗೇವಡೇರಹಳ್ಳಿ ಡಿ ನೋಟಿಫಿಕೇಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ಎದುರಿಸುವಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಕಳೆದ ಜನವರಿಯಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ನಿರ್ದೇಶನ ನೀಡಿದ್ದರು. ಆದರೆ ಕುಮಾರಸ್ವಾಮಿ ನ್ಯಾಯಾಲಯದ ಮುಂದೆ ಹಾಜರಾಗಿರಲಿಲ್ಲ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ಮುಂದಿನ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಿದ್ದರು. ಶನಿವಾರ ಕೋರ್ಟ್‌ಗೆ ಹಾಜರಾಗುವಂತೆ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು.

ಕೊರೋನಾ ಪಾಸಿಟೀವ್ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ವಿನಾಯಿತಿ ನೀಡುವಂತೆ ಕುಮಾರಸ್ವಾಮಿ ಪರ ವಕೀಲರು ಮನವಿ ಮಾಡಿದರು. ವಿನಾಯಿತಿ ನೀಡಲು ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು, ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಸೂಚನೆ ನೀಡಿದರು. ಈ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್‌ನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಜರಾಗಿದ್ದು, ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯ ಮುಂದೂಡಿದೆ.

Halagevaderahalli De notification case: HD Kumaraswamy appears before the court via video video conference

ಏನಿದು ಅಕ್ರಮ: ಎಚ್‌.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ ಉತ್ತರಹಳ್ಳಿ ಹೋಬಳಿಯ ಹಲಗೆ ವಡೇರಹಳ್ಳಿ ಸರ್ವೆ ನಂ 128, 137 ರಲ್ಲಿನ 2 ಎಕರೆ 24 ಗುಂಟೆ ಜಮೀನನ್ನು ಕಾನೂನು ಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ ಆರೋಪ ಕೇಳಿ ಬಂದಿತ್ತು. ಬನಶಂಕರಿ ಲೇ ಔಟ್ ನಿರ್ಮಾಣಕ್ಕೆ ಬಿಡಿಎ 1989 ರಲ್ಲಿ ಸ್ವಾಧೀನ ಪಡಿಸಿಕೊಂಡಿತ್ತು. 1995 ರಲ್ಲಿ ಅಂತಿಮ ಆದೇಶ ಹೊರಡಿಸಿತ್ತು.

ಭೂಮಿಯನ್ನು ಸ್ವಾಧೀನದಿಂದ ಕೈ ಬಿಡುವಂತೆ ಭೂ ಮಾಲೀಕರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ರದ್ದು ಪಡಿಸಿತ್ತು.ಇದಾದ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಇದೇ ಭೂಮಿಯನ್ನು ಡಿ ನೋಟಿಫಿಕೇಷನ್ ಮಾಡಿ ಆದೇಶ ಹೊರಡಿಸಿದ್ದರು. ಈ ಕುರಿತ ದಾಖಲೆಗಳ ಸಮೇತ ಮಹದೇವಸ್ವಾಮಿ ಅವರು 2012 ರಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಖಾಸಗಿ ದೂರನ್ನು ತನಿಖೆ ನಡೆಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಅದರಂತೆ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಬಿ. ವರದಿಯನ್ನು ಸಲ್ಲಿಸಿದ್ದರು.

Recommended Video

RCB ಪರ ಕೇವಲ ಮೂರೇ ಫಾರಿನ್ ಆಟಗಾರರು ಆಡಿದ್ದೇಕೆ | Oneindia Kannada

ಲೋಕಾಯುಕ್ತ ಪೊಲೀಸರ ಬಿ ವರದಿಯನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನೋಟಸ್ ನ್ನು ಪ್ರಶ್ನಿಸಿ ಕುಮಾರಸ್ವಾಮಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಕೂಡ ಕುಮಾರಸ್ವಾಮಿ ಅವರ ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಕೂಡ ವಿಚಾರಣೆ ಎದುರಿಸುವಂತೆ ಕುಮಾರಸ್ವಾಮಿಗೆ ಸೂಚಿಸಿತ್ತು. ಇದೀಗ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಂತಾಗಿದೆ.

English summary
Halagevaderahalli De notification case: Former chief minister HD Kumaraswamy appears before the special court of people's representatives through video conferencing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X