ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ 8ರಂದು ಹಮಾಲಿ ಕಾರ್ಮಿಕರ ಪ್ರತಿಭಟನೆ

By Ashwath
|
Google Oneindia Kannada News

ಬೆಂಗಳೂರು, ಜು.2: ಕೃಷಿ ಉತ್ಪನ್ನಗಳ ಮಾರುಕಟ್ಟೆ ಸಮಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಮಾಲಿಗಳ ಬಗ್ಗೆ ಸರಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಒಕ್ಕೂಟ ಜು.8ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶ್ರಮಿಕ ಶಕ್ತಿ ಸಂಚಾಲಕ ವಾಸು ಎಚ್‌‌.ವಿ ಮಾತನಾಡಿ ಹಮಾಲಿಗಳಿಗೆ ಕನಿಷ್ಠ ಮೂಲಸೌಕರ್ಯ ಒದಗಿಸಿಲ್ಲ. ಕೃಷಿ ಮಾರುಕಟ್ಟೆಗಳಲ್ಲಿ ಹಮಾಲಿಗಳಿಗೆ ಗುರುತಿನ ಚೀಟಿ ನೀಡಲು ಆಧಿಕಾರಿಗಳು ಹಿಂದೇಟು ಹಾಕುತ್ತಿರುವ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Hamali protest

ಎಲ್ಲಾ ಸಂಸ್ಥೆಗಳು ತನ್ನ ಕೆಲಸಗಾರರಿಗೆ ದುಡಿಯುವ ಸಮಯವನ್ನು ನಿಗದಿ ಮಾಡಿದೆ. ಆದರೆ ಹಮಾಲಿಯವರಿಗೆ ಇದುವರೆಗೂ ಇದುವರೆಗೂ ದುಡಿಯುವ ಸಮಯವನ್ನು ನಿಗದಿ ಮಾಡಿಲ್ಲ. ಅಷ್ಟೇ ಅಲ್ಲದೇ ಇಎಸ್‌ಐ ಮತ್ತು ಭವಿಷ್ಯ ನಿಧಿಯಂತಹ ಸಾಮಾಜಿಕ ಭದ್ರತಾ ಯೋಜನೆಗಳಿಂದ ವಂಚಿತರಾಗಿದ್ದಾರೆ ಎಂದು ವಾಸು ಎಚ್‌‌.ವಿ ಹೇಳಿದ್ದಾರೆ.[ರೈತರ ಪ್ರತಿಭಟನೆ ವೇಳೆ ಹಿಂದಕ್ಕೆ ಚಲಿಸಿದ ಬಿಎಂಟಿಸಿ ಬಸ್‌]

ರಾಜ್ಯ ಸರ್ಕಾರ ಇವರ ವೇತನವನ್ನು ಹೆಚ್ಚಿಸಿದರೂ ರಾಜ್ಯ ಸರ್ಕಾರ ಹೊಸ ವ್ಯವಸ್ಥೆಯ ಹೆಸರು ಹೇಳಿ ಇವರನ್ನು ಕೆಲಸದಿಂದಲೇ ಕಿತ್ತು ಹಾಕುವ ಪ್ರಯತ್ನ ನಡೆಯುತ್ತಿದೆ. ಒಂದು ವೇಳೆ ಹೊಸ ವ್ಯವಸ್ಥೆಯ ಹೆಸರು ಹೇಳಿ ಕೆಲಸದಿಂದ ಕಿತ್ತು ಹಾಕಿದರೆ ಇದೇ ವೃತ್ತಿಯನ್ನು ನಂಬಿಕೊಂಡಿರುವ ಸಾವಿರಾರು ಕುಟುಂಬಗಳು ಬೀದಿಪಾಲಾಗಲಿವೆ ಆತಂಕ ವ್ಯಕ್ತಪಡಿಸಿದ್ದಾರೆ.

English summary
Hamalis (loading and unloading workers) employed in godowns run by the State government will stage an indefinite protest from July 8 at Freedom Park in Bangalore seeking fulfilment of various demands
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X