Hamsa Moily: ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರ ಪುತ್ರಿ, ಖ್ಯಾತ ಡ್ಯಾನ್ಸರ್ ಹಂಸ ಮೊಯ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. 46 ವರ್ಷದ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ ಭರತನಾಟ್ಯದಿಂದ ಸಾಕಷ್ಟು ಹೆಸರು ಮಾಡಿದ್ದರು. ಭಾನುವಾರ ಜೂನ್ 30ರಂದು ಬೆಂಗಳೂರಿನಲ್ಲಿ ಕೊನೆಯುಸಿರು ಎಳೆದಿದ್ದಾರೆ.

Hamsa Moily Dancer and Daughter of Veerappa Moily Dies at 46

ಭರತನಾಟ್ಯ ನೃತ್ಯಗಾರ್ತಿಯಾಗಿದ್ದ ಅವರು ಪ್ರಾಯೋಗಿಕ ನೃತ್ಯ ಸಂಯೋಜಕಿ ಕೂಡ ಆಗಿದ್ದರು. ದೇವದಾಸಿಯರ ಜೀವನಾಧಾರಿತ ತಮಿಳು ಚಿತ್ರ 'ಶೃಂಗಾರಂ'ನಲ್ಲಿ ಕೂಡ ನಟಿಸಿ ಗಮನ ಸೆಳೆದಿದ್ದರು.

ಶನಿವಾರ ರಾತ್ರಿಯೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹಂಸ ಮೊಯ್ಲಿ ಮೃತಪಟ್ಟಿದ್ದು, ಮಗಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ವೀರಪ್ಪ ಮೊಯ್ಲಿ ಛತ್ತೀಸ್‌ಘಡದಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಂಸ ಮೊಯ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಮೂರನೇ ಮಗಳಾಗಿದ್ದಾರೆ. ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತಮ್ಮದೇ ರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+