ಹನೂರು 3 ಸಾವು ಪ್ರಕರಣಕ್ಕೆ ಟ್ವಿಸ್ಟ್: "ಇದು ಕೋಲ್ಡ್ ಬ್ಲಡೆಡ್ ಮರ್ಡ*': SIT, ನ್ಯಾಯಾಂಗ ತನಿಖೆಗೆ ಒತ್ತಾಯ

​ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್‌ನಲ್ಲಿ ಮೂವರು ಅಮಾಯಕರು ಹತ್ಯೆಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಈ ಘಟನೆಯ ಕುರಿತು ಸ್ಥಳೀಯ ಜನರು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಅರಣ್ಯ ಪ್ರದೇಶದಲ್ಲಿ ಸ್ಥಳೀಯರಿಗೆ ಮತ್ತು ಅರಣ್ಯ ಇಲಾಖೆಗೆ ನಿರಂತರವಾಗಿ ಸಂಪರ್ಕವಿರುತ್ತದೆ. ಆದರೆ ಈ ರೀತಿಯ ಹತ್ಯೆ ಘಟನೆಗಳು ಸಂಭವಿಸಿರುವುದು ಹಾಗೂ ಬೆದರಿಸುವ ಕೆಲಸಗಳು ನಡೆಯುತ್ತಿರುವುದು ತೀವ್ರ ಆತಂಕಕಾರಿ ಸಂಗತಿಯಾಗಿದೆ ಎಂದರು.

Hanur Forest Shootout

ಅರಣ್ಯ ಇಲಾಖೆ ಹಾಗೂ ಸ್ಥಳೀಯ ಜನರ ನಡುವೆ ನಿಕಟವಾದ ಸಂಬಂಧವಿರುತ್ತದೆ. ಸ್ಥಳೀಯ ಗಾರ್ಡ್ಸ್‌ ಹಾಗೂ ಕೆಳಹಂತದ ಅರಣ್ಯ ಅಧಿಕಾರಿಗಳಿಗೆ ಪ್ರತಿಯೊಬ್ಬರ ಬಗ್ಗೆಯೂ ಮಾಹಿತಿ ಇರುತ್ತದೆ. ಹೀಗಿರುವಾಗ ಅತ್ಯಂತ ಕಡಿಮೆ ಅಂತರದಿಂದ ಮೂವರು ವ್ಯಕ್ತಿಗಳ ಮೇಲೆ ಗುಂಡು ಹಾರಿಸಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಆರೋಪಿಸಿದರು.

​ಕಾರಣಗಳು ಸುಳ್ಳು

ಇಲಾಖೆಯ ಅಧಿಕಾರಿಗಳು ನೀಡುತ್ತಿರುವ ಸಮರ್ಥನೆಗಳು ಹಾಗೂ ಕಾರಣಗಳು ನಂಬಲು ಸಾಧ್ಯವಿಲ್ಲದ್ದು ಮತ್ತು ಸತ್ಯಕ್ಕೆ ದೂರವಾದವು. ಈ ಪ್ರಕರಣದ ತನಿಖೆ ಕೆಳಹಂತದ ಅಧಿಕಾರಿಗಳಿಂದ ನಡೆದರೆ ಸತ್ಯ ಹೊರಬರಲು ಸಾಧ್ಯವಿಲ್ಲ. ಆದ್ದರಿಂದ ನಿಷ್ಪಕ್ಷಪಾತ ಹಾಗೂ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು. ಮೃತರ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ಅವರಿಗೆ ನ್ಯಾಯ ಒದಗಿಸಬೇಕು. ​ಘಟನೆಯ ಹಿಂದಿನ ನೈಜ ಸತ್ಯಾಂಶಗಳನ್ನು ಹೊರತಂದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಅಧಿಕಾರಿಗಳ ಅಮಾನತು

ಈ ಘಟನೆಯಲ್ಲಿ ಭಾಗಿಯಾದ ಹಾಗೂ ನಿರ್ಲಕ್ಷ್ಯ ವಹಿಸಿದ ಎಲ್ಲಾ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸರ್ಕಾರ ಅಮಾನತು ಶಿಕ್ಷೆ ನೀಡಬೇಕು. ಬೇರೆ ಬೇರೆ ಪ್ರಕರಣಗಳಿಗೆ ಸರ್ಕಾರ ಎಸ್‌ಐಟಿ ರಚನೆ ಮಾಡುವಂತೆ, ಈ ಘಟನೆಗೂ ನ್ಯಾಯಾಲಯದ ನೇರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಎಸ್‌ಐಟಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

​ಕೋಲ್ಡ್ ಬ್ಲಡೆಡ್ ಮರ್ಡರ್ ಆರೋಪ

ಘಟನೆಯ ಹಿಂದಿನ ಸತ್ಯಾಂಶ ಹೊರಬರದಿದ್ದರೆ ಇದು 'ಕೋಲ್ಡ್ ಬ್ಲಡೆಡ್ ಮರ್ಡರ್' (ಯೋಜಿತ ಹತ್ಯೆ) ಎಂದು ಬಿಂಬಿತವಾಗುತ್ತದೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯೊಂದೇ ಸತ್ಯವನ್ನು ಹೊರತ ಬರಲು ಸಾಧ್ಯ. ​ಸರ್ಕಾರ ತಕ್ಷಣವೇ ಹೆಚ್ಚೆತ್ತುಕೊಂಡು ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಹೇಳಿದರು.

ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಆರ್. ಆಶೋಕ್

ಅರಣ್ಯದಲ್ಲಿ ಕಾಡು ಪ್ರಾಣಿಗಳ ಕೊಂದು ಮಾಂಸ ಮಾರಾಟಕ್ಕೆ ಬಂದಿದ್ದಾರೆಂದು ಶಂಕಿಸಿ ಪೊಲೀಸರು ಗುಂಡಿನ ದಾಳಿ ಮಾಡಿದ್ದಾಗಿ ತಿಳಿಸಿದ್ದಾರೆ. ಮೃತರ ಕುಟುಂಬಸ್ಥರು ಇದೆಲ್ಲ ಸುಳ್ಳು. ಇದು ನಕಲಿ ಶೂಟೌಟ್ ಎಂದು ಹೇಳಿದ್ದಾರೆ. ಈ ಘಟನೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಆರ್.ಅಶೋಕ್ ಅವರು ಸತ್ಯಾಸತ್ಯತೆ ತಿಳಿಯಲು ಕೂಡಲೇ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ಭಾನುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ಪ್ರಕರಣದಲ್ಲಿ ಮೂವರ ಸಾವಾಗಿದೆ. ಆದರೆ ರಾಜ್ಯ ಸರ್ಕಾರ, ಅರಣ್ಯಾಧಿಕಾರಿಗಳು ನೀಡುತ್ತಿರುವ ಹೇಳಿಕೆಗಳು ತಾಳೆ ಆಗುತ್ತಿಲ್ಲ. ಶೂಟೌಟ್ ಬಗ್ಗೆ ಅರಣ್ಯಾಧಿಕಾರಿಗಳು ಒಂದು ಹೇಳಿದರೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತೊಂದು ರೀತಿಯಾಗಿ ಹೇಳಿಕೆ ನೀಡುತ್ತಿದ್ದಾರೆ. ಸಾರ್ವಜನಿಕರು ಇದು ನಕಲಿ ಶೂಟೌಟ್, ಅಮಾಯಕರನ್ನು ಹತ್ಯೆ ಮಾಡಲಾಗಿದೆ ಎಂದು ದೂರಿದ್ದಾರೆ. ಕೂಡಲೇ ನ್ಯಾಯಾಂಗ ತನಿಖೆಗೆ ನೀಡಿ ಸತ್ಯವನ್ನು ಬಹಿರಗಂಗೊಳಿಸುವಂತೆ ಸರ್ಕಾರಕ್ಕೆ ಅವರು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+