ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಸ್‌ನಿಂದ ಲೈಂಗಿಕ ಕಿರುಕುಳ, ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವತಿ

|
Google Oneindia Kannada News

ಬೆಂಗಳೂರು, ಮಾರ್ಚ್ 2: ಬಾಸ್‌ನಿಂದ ಲೈಂಗಿಕ ಕಿರುಕುಳ ತಾಳಲಾರದೆ ಕಚೇರಿಯಲ್ಲೇ ಯುವತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ಸೀಲಿಂಗ್ ಫ್ಯಾನ್‌ಗೆ ನೇಣುಹಾಕಿಕೊಳ್ಳಲು ಯತ್ನಿಸಿದ್ದಾರೆ, ಬಳಿಕ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ ಆರೋಪಿ ಕಿರಣ್‌ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ ಬುದ್ಧಿಮಾಂದ್ಯ ಬಾಲಕಿಯರಿಗೆ ಲೈಂಗಿಕ ಕಿರುಕುಳ, ಆರೋಪಿ ಬಂಧನ

ಕಿರಣ್ ಕುಮಾರ್ ವಿವಾಹಿತನಾಗಿದ್ದು ಒಂದು ಮಗು ಕೂಡ ಇದೆ, ದೊಮ್ಮಲೂರಿನ ಬಿಡಿಎ ಲೇಔಟ್‌ನಲ್ಲಿ ವಾಸವಿದ್ದಾರೆ. ಕಿರಣ್ ಕುಮಾರ್ ಕಚೇರಿಯಲ್ಲಿಯೇ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಹಾಗೆಯೇ ಲೈಂಗಿಕ ಕಿರುಕುಳವನ್ನೂ ನೀಡುತ್ತಿದ್ದ ಈ ಹಿಂಸೆಯನ್ನು ತಾಳಲಾರದೆ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಳು ಎನ್ನುವ ಮಾಹಿತಿ ಲಭ್ಯವಾಗಿದೆ.

Harassed by boss, she tried to kill self at work

ಕಿರಣ್ ಕುಮಾರ್ ಅವರು ನನ್ನ ಮನೆಗೆ ಬಂದು ತಂದೆ-ತಾಯಿ ಬಳಿ ನಿಮ್ಮ ಮಗಳನ್ನು ಮದುವೆ ಮಾಡಿಕೊಡುತ್ತೀರಾ ಎಂದು ಕೇಳಿದ್ದ, ಈಗಾಗಲೇ ಮದುವೆಯಾಗಿ ಮಗು ಇರುವ ಕಾರಣ ತಮ್ಮ ಮಗಳನ್ನು ಕೊಡುವುದಿಲ್ಲ ಎಂದು ನಿರಾಕರಿಸಿದ್ದರು. ಆಕೆಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ ರಿಯಲ್‌ ಎಸ್ಟೇಟ್‌ ಉದ್ಯಮಿಯಿಂದ ಯುವತಿಗೆ ಲೈಂಗಿಕ ಕಿರುಕುಳ: ಬಂಧನ

ಕಿರುಕುಳ ತಾಳಲಾರದೆ ಕಚೇರಿಯಲ್ಲೇ ದುಪ್ಪಟ್ಟದಿಂದ ನೇಣು ಹಾಕಿಕೊಳ್ಳಲು ಯತ್ನಿಸಿದ್ದಳು ಬಳಿಕ ಅಲ್ಲಿಯೇ ಕೆಲಸ ಮಾಡುತ್ತಿದ್ದ ಉಳಿದ ನೌಕರರೆಲ್ಲಾ ಸೇರಿ ಆಕೆಯನ್ನು ಬಚಾವ್ ಮಾಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

English summary
Upset about being harassed by her boss and being forced to marry him. a 22 year old woman has attempted suicide. The victim tried to hang herself from a ceiling fan inside her office premises.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X