Prajwal Revanna: ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗತ್ತೆ ಎಂದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ
ಬೆಂಗಳೂರು, ಜೂನ್. 18: ದೇಶಾದ್ಯಂತ ಸದ್ದು ಮಾಡಿದ್ದ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ಎಸ್‌ಐಟಿ ಕಸ್ಟಡಿ ಅವಧಿ ಅಂತ್ಯ ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ನ್ಯಾಯಾಲಯವು ಪ್ರಜ್ವಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಹೀಗಾಗಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ ಕರೆದುಕೊಂಡು ಹೋಗಲಾಗಿದೆ.

ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗತ್ತೆ!
ಈ ವೇಳೆ ಮತ್ತೊಮ್ಮೆ ಪುರುಷತ್ವ ಪರೀಕ್ಷೆಗೆ ಮನವಿ ಮಾಡಿರುವುದ್ದಕ್ಕೆ ಪ್ರಜ್ವಲ್ ರೇವಣ್ಣ ನ್ಯಾಯಾಲಯದ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ. "ನಾನು ಎರಡು ಪ್ರಕರಣದಲ್ಲಿ ಒಪ್ಪಿಕೊಂಡು ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಪುರುಷತ್ವ ಪರೀಕ್ಷೆ ತುಂಬಾ ಮುಜುಗರ ಆಗುತ್ತೆ. ಈಗಾಗಲೇ ಎರಡು ಕೇಸ್‌ನಲ್ಲಿ ಪುರುಷತ್ವ ಪರೀಕ್ಷೆ ಆಗಿದೆ ಎಂದು ನ್ಯಾಯಾಧೀಶರ ಮುಂದೆ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದನ್ನು ಕೇಳಿ ನ್ಯಾಯಾಧೀಶರು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಇನ್ನು, ಸಿಐಡಿಯಲ್ಲಿ ದಾಖಲಾಗಿರುವ ಮತ್ತೊಂದು ಪ್ರಕರಣದಲ್ಲಿ ಎಸ್‌ಐಟಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವನ್ನು ಕಸ್ಟಡಿಗೆ ಪಡೆಯಲು ಚಿಂತಿಸುತ್ತಿದೆ. ಇತ್ತೀಚೆಗೆ 3 ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಕೆ ಮಾಡಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಎಸ್‌ಐಟಿ ಮತ್ತೆ ಪ್ರಜ್ವಲ್ ರೇವಣ್ಣರನ್ನು ತಮ್ಮ ವಶಕ್ಕೆ ಪಡೆದಿತ್ತು.












Click it and Unblock the Notifications