Get Updates
Get notified of breaking news, exclusive insights, and must-see stories!

ದ್ವೇಷದ ಭಾಷಣ: ರಾಜ್ಯ ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು ಏಪ್ರಿಲ್ 6: ಇತ್ತೀಚೆಗೆ ತಮ್ಮ ಕ್ಷೇತ್ರದಲ್ಲಿ ಕ್ರಿಶ್ಚಿಯನ್ನರ ವಿರುದ್ಧ ದ್ವೇಷದ ಭಾಷಣ ಮಾಡಿದ್ದಕ್ಕಾಗಿ ತೋಟಗಾರಿಕಾ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುನಿರತ್ನ ಅವರು ಆರ್.ಆರ್.ನಗರದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರುವಾಗ ಕ್ರಿಶ್ಚಿಯನ್ನರ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ. ಬಳಿಕ ಖಾಸಗಿ ಕನ್ನಡ ಸುದ್ದಿ ವಾಹಿನಿಯೊಂದರಲ್ಲಿ ಮಾತನಾಡುತ್ತಾ, "ಸ್ಲಂಗಳಲ್ಲಿ ಮತಾಂತರ ಚಟುವಟಿಕೆಗಳು" ನಡೆಯುತ್ತಿವೆ ಎಂದು ಆರೋಪಿಸಿದರು. "ಅಂತವರನ್ನು ಹೊಡೆದು ವಾಪಸ್ ಕಳುಹಿಸಬೇಕು" ಎಂದು ಜನರಿಗೆ ಕರೆ ನೀಡಿದರು. ಇದರಿಂದ ಯಾವುದೇ ಪರಿಣಾಮಗಳಾಗದಂತೆ ನೋಡಿಕೊಳ್ಳಿ ಎಂದು ಜನರಿಗೆ ಹೇಳಿದ್ದಾರೆ.

Hate speech: FIR filed against state minister Munirath

ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಮುನಿರತ್ನ ಕರೆ ನೀಡಿದ್ದರು. ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ಆರೋಪದ ಮೇರೆಗೆ ಚುನಾವಣಾಧಿಕಾರಿ ಮನೋಜ್ ಕುಮಾರ್ ದೂರು ನೀಡಿರುವ ಹಿನ್ನೆಲೆ ಆರ್ ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್-11 ರ ತಂಡದ ನಾಯಕ ಮನೋಜ್ ಕುಮಾರ್ ಅವರು ಸಚಿವರ ವಿರುದ್ಧ ದೂರು ನೀಡಿದ್ದಾರೆ. ಅದರ ಆಧಾರದ ಮೇಲೆ ಆರ್.ಆರ್.ನಗರ ಪೊಲೀಸರು ಮುನಿರತ್ನ ಅವರ ವಿರುದ್ಧ 1950 ಪ್ರಜಾಪ್ರತಿನಿಧಿ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಮತ್ತು ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕನ್ನಡಿಗರು ತಮಿಳಿಗರ ಮಧ್ಯೆ ಮುನಿರತ್ನ ಕಿಡಿ

ಅಷ್ಟಕ್ಕೂ ಮುನಿರತ್ನ ವಿರುದ್ಧ ಇದೇ ಮೊದಲು ಆರೋಪ ಕೇಳಿ ಬರುತ್ತಿಲ್ಲ ಈ ಹಿಂದೆ ಮುನಿರತ್ನ ವಿರುದ್ಧ ದೂರು ದಾಖಲಿಸಲಾಗಿತ್ತು. ಬೆಂಗಳೂರು ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ಹಾಲಿ ತೋಟಗಾರಿಕೆ ಸಚಿವ ಮುನಿರತ್ನ ಅವರು ಸಾರ್ವಜನಿಕ ವೇದಿಕೆ ಮೇಲೆ ಕನ್ನಡಿಗರು ಮತ್ತು ತಮಿಳರ ಮಧ್ಯೆ ಸಂಘರ್ಷಕ್ಕೆ ದಾರಿಯಾಗುವಂತೆ ಮಾತನಾಡಿದ್ದರು. ಹೀಗೆಂದು ಆರೋಪಿಸಿರುವ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿಯಾದ ಕುಸುಮಾ ಹನುಮಂತರಾಯಪ್ಪ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು.

Hate speech: FIR filed against state minister Munirath

ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಮೊನೆಯನ್ನಷ್ಟೇ ದಿನಾಂಕ ಘೋಷಣೆಯಾಗಿದೆ. ಹೇಗಾದರೂ ಮಾಡಿ ಆಡಳಿತ ಚುಕ್ಕಾಣಿ ಹಿಡಿಯಲು ಉಭಯ ಪಕ್ಷಗಳು ಹರಸಾಹಸ ನಡೆಸುತ್ತಿದೆ. ಇದೀಗ ರಾಜರಾಜೇಶ್ವರಿ ನಗರದ ಸಚಿವ ಮುನಿರತ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆ ಆರೋಪಿಸಿ, ಕಾಂಗ್ರೆಸ್​ ನಾಯಕಿ ಕುಸುಮಾ ಅವರು ಬೆಂಗಳೂರು ನಗರ ಪೊಲೀಸ್​ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.

ಕುಸುಮಾ ಅವರ ಆರೋಪವೇನು? ತೋಟಗಾರಿಕೆ ಸಚಿವ ಮುನಿರತ್ನ ಅವರು ಸಾರ್ವಜನಿಕ ವೇದಿಕೆಯೊಂದರಲ್ಲಿ ತಮಿಳಿನಲ್ಲಿ ಮಾತನಾಡುತ್ತ 'ತಮಿಳು ಭಾಷಿಕರು ಕನ್ನಡ ಭಾಷಿಕರ ಮೇಲೆ ಹಲ್ಲೆ ಮಾಡುವಂತೆ' ಸೂಚನೆ ನೀಡುವಂತೆ ಮಾತನಾಡಿದ್ದಾರೆ. ಅವರು ಈ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ತಮಿಳು ಮತ್ತು ಕನ್ನಡಿಗರ ನಡುವೆ ಸಂಘರ್ಷಕ್ಕೆ ಎಡೆಮಾಡಿ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ತಮ್ಮ ದೂರಿನಲ್ಲಿ ಆರೋಪ ಮಾಡಿದ್ದರು. ಕಾಂಗ್ರೆಸ್ ಕೂಡ ಹಿಂಸೆಗೆ ಪ್ರಚೋದಿಸುವ ಮುನಿರತ್ನ ವಿರುದ್ಧ ಚುನಾವಣಾ ಆಯೋಗ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತ್ತು.

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರುತ್ತಿರುವಾಗಲೇ ಮುನಿರತ್ನ ವಿರುದ್ಧ ದೂರು ದಾಖಲೆಯಾಗಿರುವುದು ರಾಜಕೀಯ ಹಿನ್ನಡೆಗೆ ಕಾರಣವಾಗುವ ಸಾಧ್ಯತೆಗಳಿವೆ. ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಏಪ್ರಿಲ್ 13 ರಂದು ಚುನಾವಣೆಗೆ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಏಪ್ರಿಲ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನೂ ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+