ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆ ಮುಂದೂಡುವ ಸರ್ಕಾರದ ಪ್ರಯತ್ನಕ್ಕೆ ಹೈಕೋರ್ಟ್ ಕಿಡಿ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು.ಸೆ.30.ನಾಲ್ಕು ತಿಂಗಳು ಬಿಬಿಎಂಪಿ ಚುನಾವಣೆಯನ್ನು ಮುಂದೂಡುವ ಸರ್ಕಾರದ ಪ್ರಯತ್ನಕ್ಕೆ ಹೈಕೋರ್ಟ್ ಕಿಡಿಕಾರಿದೆ.

ಅಲ್ಲದೆ, ಡಿ.31, 2022 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಲೇಬೇಕು ಎಂದು ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಖಡಕ್ ಆದೇಶ ನೀಡಿದೆ.

ಮೀಸಲು ನಿಗದಿ ಪ್ರಶ್ನಿಸಿ ಸಲ್ಲಿಸಿದ್ದ ನ್ಯಾ.ಹೇಮಂತ್ ಚಂದನ್ ಗೌಡರ್ ಅವರಿದ್ಧ ಏಕಸದಸ್ಯಪೀಠ ಈ ಆದೇಶವನ್ನು ನೀಡಿದೆ.

ಅಲ್ಲದೆ, ರಾಜ್ಯ ಸರ್ಕಾರಕ್ಕೆಬಿಬಿಎಂಪಿ ವಾರ್ಡ್ ವಾರು ಮೀಸಲಾತಿ ಪಟ್ಟಿ ರದ್ದುಪಡಿಸಿದ ನ್ಯಾಯಾಲಯ ಸರ್ಕಾರ ಒಬಿಸಿ ಆಯೋಗಕ್ಕೆ ಅಂಕಿ ಅಂಶ ಒದಗಿಸಬೇಕು, ನ.30 ರೊಳಗೆ ಮೀಸಲಾತಿ ಪ್ರಕಟಿಸಬೇಕು. ಡಿ.31 ರೊಳಗೆ ಬಿಬಿಎಂಪಿ ಚುನಾವಣೆ ನಡೆಸಲೇಬೇಕು ಎಂದು ಆದೇಶ ನೀಡಿದೆ.

ಇದರಿಂದಾಗಿ ಬಹುತೇಕ ಚುನಾವಣೆ ನಡೆಯುವುದು ನಿಶ್ಚಿತವಾಗಿದೆ, ಆದರೆ ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಕೆಯಾದರೆ ಚುನಾವಣೆ ಮತ್ತೆ ವಿಳಂಬವಾಗುವ ಸಾಧ್ಯತೆಯೂ ಇದೆ. ಶೀಘ್ರ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿತು.

HC came down heavily against state for postponeing elections

4 ತಿಂಗಳು ಸಮಯ ಕೋರಿಕೆ:

ಇದಕ್ಕೂ ಮುನ್ನ ಪ್ರಮಾಣಪತ್ರ ಸಲ್ಲಿಸಿದ ಸರ್ಕಾರ, ಒಬಿಸಿ ಸೇರಿಸಿ ಹೊಸ ಮೀಸಲಾತಿ ಪಟ್ಟಿ ನಿಗದಿ ಮಾಡಲು 16 ವಾರ ಕಾಲಾವಕಾಶ ನೀಡಬೇಕೆಂದು ಕೋರಿತು.

ಚೆಕ್‌ಗೆ ಸಹಿ ಹಾಕಲು ಮುರುಘಾ ಸ್ವಾಮೀಜಿಗೆ ಹೈಕೋರ್ಟ್ ಅನುಮತಿ ಚೆಕ್‌ಗೆ ಸಹಿ ಹಾಕಲು ಮುರುಘಾ ಸ್ವಾಮೀಜಿಗೆ ಹೈಕೋರ್ಟ್ ಅನುಮತಿ

ಅದಕ್ಕೆ ಸಿಟ್ಟಿದ ನ್ಯಾಯಮೂರ್ತಿಗಳು, ಹೀಗೆ ಚುನಾವಣೆ ವಿಳಂಬ ಮಾಡುವುದನ್ನು ಸಹಿಸಲಾಗದು. ಇಷ್ಟು ಸಮಯ ಕೇಳಿದರೆ ತಕ್ಷಣ ಚುನಾವಣೆಗೆ ಆದೇಶಿಸಬೇಕಾದೀತು. ಸರ್ಕಾರದ ಪ್ರಮಾಣಪತ್ರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೂ ಮುನ್ನ ಬುಧವಾರ ನ್ಯಾಯಪೀಠ ಹೊಸದಾಗಿ ಮೀಸಲು ಕಲ್ಪಿಸಲು ಎಷ್ಟು ಸಮಯಬೇಕು ಎಂಬ ಕುರಿತು ಸರ್ಕಾರದ ನಿಲುವನ್ನು ಕೇಳಿತ್ತು.

ಈ ಮಧ್ಯೆ, 'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ಸಿದ್ಧಪಡಿಸಲಾಗಿರುವ 243 ವಾರ್ಡ್‌ಗಳ ಮೀಸಲು ಪಟ್ಟಿಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲು ಕಲ್ಪಿಸಲಾಗಿಲ್ಲ ಎಂದ ದೂರಿದ್ದರು.

ಈಜಿಪುರದ ಕೆ.ಮಹದೇವ, ಕಮ್ಮನಹಳ್ಳಿಯ ಪಳನಿ ದಯಾಳನ್, ದೊಡ್ಡಬಾಣಸವಾಡಿಯ ವಿ.ಶ್ರೀನಿವಾಸ್ ಮತ್ತು ನಾಗನಾಥಪುರದ ಕೆ.ಚಂದ್ರಶೇಖರ್ ಹಾಗೂ ಇತರರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

English summary
The High Court has criticized the government's attempt to postpone the BBMP elections by four months. Also, the High Court has ordered the state government and the Election Commission to hold the BBMP elections by December 31, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X