ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

362 ಗೆಜೆಟೆಡ್ ಅಧಿಕಾರಿಗಳ ನೇಮಕಾತಿ ರದ್ದುಗೊಳಿಸಿದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಮಾರ್ಚ್ 09: ಕಳೆದ 2011 ನೇ ಸಾಲಿನಲ್ಲಿ ಕೆಪಿಎಸ್ಸಿ ನೇಮಕಾತಿ ನಡೆಸಿದ್ದ 362 ಹುದ್ದೆಗಳ ನೇಮಕಾತಿಯನ್ನು ಹೈಕೋರ್ಟ್ ಶುಕ್ರವಾರ ರದ್ದುಪಡಿಸಿದೆ.

ರಾಜ್ಯ ಸಾರ್ಕಾರ ಈ ಮೊದಲು ನೇಮಕಾತಿ ರದ್ದುಪಡಿಸಿತ್ತು. ಆದರೆ ಆಯ್ಕೆಯಾದ ಅಭ್ಯರ್ಥಿಗಳು ಕೆಎಟಿ ಮೊರೆ ಹೋದಾಗ ಕೆಎಟಿ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಕೆಎಟಿ ಆದೇಶದ ವಿರುದ್ಧ ಅವಕಾಶ ವಂಚಿತ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ನೇಮಕಾತಿ ರದ್ದುಗೊಳಿಸಿದೆ.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

HC cancels 372 Gazetted officers appointment

ಎಲ್ಲ 362 ಹುದ್ದೆಗಳ ನೇಮಕಾತಿ ರದ್ದು. ಈಗಾಗಲೇ 70 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಮಾಡಿದ್ದು, ನೇಮಕಾತಿ ಪ್ರಕ್ರಿಯೆ ಕಾನೂನು ಬಾಹಿರವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

2011ರ ಕೆಪಿಎಸ್ ಸಿ ನೇಮಕಾತಿಗೆ ಹೈಕೋರ್ಟ್ ತಡೆಯಾಜ್ಞೆ2011ರ ಕೆಪಿಎಸ್ ಸಿ ನೇಮಕಾತಿಗೆ ಹೈಕೋರ್ಟ್ ತಡೆಯಾಜ್ಞೆ

ಕೆಎಟಿ ಆದೇಶದ ಅನ್ವಯ ನೇಮಕಾತಿಗೆ ಮುಂದಾಗಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೇಟ್ಟಿಲೇರಿದ್ದ ಉದ್ಯೋಗ ವಂಚಿತ ಅಭ್ಯರ್ಥಿ ಗಳು. ಈ ಹಿಂದೆ ಹೈಕೋರ್ಟ್ ಕೆಎಟಿ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

2011ರಲ್ಲಿ ಕೆಪಿಎಸ್ಸಿ ನಡೆಸಿದ 362 ಗೆಜೆಟೆಡ್ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆಸಿದೆ ಎಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಈ ಕುರಿತು ಸಿಐಡಿ ತನಿಖೆ ನಡೆಸಿತ್ತು.

2011ರ ಕೆಪಿಎಸ್‌ಸಿ ನೇಮಕಾತಿಗೆ ಸಚಿವ ಸಂಪುಟ ಸಮ್ಮತಿ2011ರ ಕೆಪಿಎಸ್‌ಸಿ ನೇಮಕಾತಿಗೆ ಸಚಿವ ಸಂಪುಟ ಸಮ್ಮತಿ

ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ತನಿಖೆಯಲ್ಲಿ ದೃಢಪಟ್ಟಿತ್ತು. ಸಿಐಡಿ ವರದಿ ಆಧರಿಸಿ ರಾಜ್ಯ ಸರ್ಕಾರ ನೇಮಕಾತಿ ರದ್ದುಪಡಿಸಿತ್ತು. ಆದರೆ ಇದಕ್ಕೆ ಕೆಎಟಿ ತಡೆಯಾಜ್ಞೆ ನೀಡಿತ್ತು. ಇದೀಗ ಹೈಕೋರ್ಟ್ ನೇಮಕಾತಿ ರದ್ದುಪಡಿಸಿದೆ.

English summary
Karnataka High court has cancelled 372 Gezetted officer recruitment which was done in 2011 through KPSC on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X