ಅರ್ಕಾವತಿ ಬಡಾವಣೆ: ಅನುಷ್ಠಾನ ವರದಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಏಪ್ರಿಲ್ 18: ಅರ್ಕಾವತಿ ಬಡಾವಣೆ ನಿರ್ಮಾಣ ಸಂಬಂಧ 2010ರಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅನುಷ್ಠಾನದ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ಹೈಕೋರ್ಟ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.
ವಿವಾದಿತ ಬಡಾವಣೆ ಬೂ ಸ್ವಾಧೀನ ಕುರಿತಂತೆ ಎಚ್ ಬಿ ಶಿವರಾಂ ಮತ್ತಿತರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ. ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಸುಪ್ರೀಂಕೋರ್ಟ್ ಆದೇಶ ಆಧರಿಸಿ ಹೆಬ್ಬಾಳ-ಕೆಂಪಾಪುರ ಪ್ರದೇಶಗಳಲ್ಲಿ ದ್ವೀಪಗಳಂತಿದ್ದ ಪ್ರದೇಶದಲ್ಲಿ ಎಷ್ಟು ಭೂಮಿಯನ್ನು ಸ್ವಾಧೀನದಿಂದ ಕೈಬಿಡಲಾಗಿದೆ. ಎಷ್ಟು ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ ಎಷ್ಟು ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಬಗ್ಗೆ ಎಲ್ಲ ವಿವರಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಅರ್ಜಿದಾರರು, ಸುಪ್ರೀಂಕೋರ್ಟ್ ಆದೇಶದಂತೆ ದ್ವೀಪದಂತಿದ್ದ ತಮ್ಮ 20 ಗುಂಟೆ ಭೂಮಿಯನ್ನು ಸ್ವಾಧೀನದಿಂದ ಕೈಬಿಡಬೇಕೆಂದು ಮನವಿ ಸಲ್ಲಿಸಿದರೂ ಅದನ್ನು ಬಿಡಿಎ ಪರಿಗಣಿಸುತ್ತಿಲ್ಲ ಎಂದು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಬಡಾವಣೆ ನಿರ್ಮಾಣ ಯೋಜನೆಗೆ ತಮ್ಮ ಜಾಗ ಯೋಗ್ಯವಲ್ಲ ಎಂದು ವರದಿ ನೀಡಿದ್ದರೂ ತಮ್ಮ ಭೂಮಿಯನ್ನು 2014ರ ಜೂ.18ರಂದು ಹೊರಡಿಸಿರುವ ಪರಿಷ್ಕೃತ ಅಂತಿಮ ಅಧಿಸೂಚನೆಯಲ್ಲಿ ಸೇರಿಸಲಾಗಿದೆ.
ತಮ್ಮ ಭೂಮಿಯ ಅಕ್ಕ-ಪಕ್ಕದ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಡಲಾಗಿದೆ.ಆದರೆ ತಮ್ಮ ಭೂಮಿಯನ್ನು ಅಧಿಸೂಚನೆಯಲ್ಲಿ ಸೇರ್ಪಡೆ ಮಾಡಲಾಗಿದೆ. ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.












Click it and Unblock the Notifications