ರಸ್ತೆ ಗುಂಡಿ: 4 ವಾರದಲ್ಲಿ ಅರ್ಜಿ ಪರಿಶೀಲಿಸಲು ಹೈಕೋರ್ಟ್ ನಿರ್ದೇಶನ
ಬೆಂಗಳೂರು, ಜನವರಿ 12: ನಗರದಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಅರ್ಜಿದಾರರ ಮನವಿಯನ್ನು ನಾಲ್ಕು ವಾರದೊಳಗೆ ಪರಿಶೀಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ.
ರಸ್ತೆ ಗುಂಡಿಗಳ ಸಮಸ್ಯೆ ಕುರಿತಂತೆ ಡವ್ ಡ್ರೈವ್ ವಿಥೌಟ್ ಬಾರ್ಡರ್ಸ್ ಫೌಂಡೇಶನ್ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ವಿಲೇವಾರಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರರ ವಕೀಲ ಬಿ.ವಿಕಾರ್ ಅಹಮದ್ ನಗರದಲ್ಲಿ ರಸ್ತೆಗಳು ಗುಂಡಿ ಹೆಚ್ಚಿದ್ದು ವಾಹನ ಅಪಘಾತ ಹೆಚ್ಚುತ್ತಿದ್ದು ಜನರ ಪ್ರಾಣಕ್ಕೆ ಕುತ್ತಾಗಿ ಪರಿಣಮಿಸಿವೆ. ಆದ್ದರಿಂದ ಗುಂಡಿಗಳನ್ನು ಮುಚ್ಚಲು, ರಸ್ತೆ ಉಬ್ಬು ಹಾಗೂ ವಿಭಜಕಗಳನ್ನು ಸೂಕ್ತ ರೀತಿಯಲ್ಲಿ ನಿರ್ಮಿಸಲು ಬಿಬಿಎಂಪಿಗೆ ನಿರ್ದೇಶಿಸಬೇಕು ಎಂದು ಕೋರಿದರು.

ಇದಕ್ಕೆ ಬಿಬಿಎಂಪಿ ಪರ ವಕೀಲರು ಈ ಕುರಿತು ಅಗತ್ಯ ಕ್ರಮ ಜರುಗಿಸಲು ಕಾಲಾವಕಾಶ ಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ರಸ್ತೆ ಗುಂಡಿಗಳನ್ನು ಮುಚ್ಚಲು ನ್ಯಾಯಾಲಯ ನಿಮಗೆ ಈಗಾಗಲೇ ಸಾಕಷ್ಟು ಸಮಯ ನೀಡಿದೆ. ಆದರೂ ಏಕೆ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ











Click it and Unblock the Notifications