ಬಿಡಿಎ ಪ್ರಕರಣ ತ್ವರಿತ ವಿಲೇವಾರಿಗೆ ಹೈಕೋರ್ಟ್ ಸೂಚನೆ

ಬೆಂಗಳೂರು, ಏಪ್ರಿಲ್ 11: ಬಿಡಿಎ ವಿರುದ್ಧ ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳ ತ್ವರಿತ ವಿಲೇವಾರಿಗಾಗು ಪ್ರಾಧಿಕಾರ ಪ್ರತಿನಿಧಿಸುವ ವಕೀಲರಿಗೆ ಅಗತ್ಯ ಮಾಹಿತಿ ಹಾಗೂ ಆಕ್ಷೇಪಣೆ ಸಲ್ಲಿಸಲು ಕಾರ್ಯತಂತ್ರ ರೂಪಿಸುವಂತೆ ಬಿಡಿಎ ಆಯುಕ್ತ ರಾಕೇಶ್ ಸಿಂಗ್ ಗೆ ಹೈಕೋರ್ಟ್ ನಿರ್ದೇಶಿಸಿದೆ.

ಕೆ. ನಾರಾಯಣಪುರ ಗ್ರಾಮದ ಎಚ್‌.ಎಂ. ಸುಬ್ರಮಣಿ ಎಂಬುವರು ಸಲಲ್ಇಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಪೀಠ, ಪ್ರಕರಣದ ವಿಚಾರಣೆಯಲ್ಲಿ ಬಿಡಿಎ ಪರ ವಕೀಲರಿಂದ ಸೂಕ್ತ ಸಹಕಾರ ಸಿಗದಿದ್ದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿತ್ತು. ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಬಿಡಿಎ ಆಯುಕ್ತರಿಗೆ ನಿರ್ದೇಶಿಸಿತ್ತು.

ಅದರಂತೆ ಮಂಗಳವಾರ ಆಯುಕ್ತ ರಾಕೇಶ್ ಸಿಂಗ್ ನ್ಯಾಯಪೀಠದ ಮುಂದೆ ಹಾಜರಿದ್ದರು. ಬಿಡಿಎ ವಿರುದ್ಧ ದಾಖಲಾಗಿರುವ ಬಹುತೇಕ ಪ್ರಕರಣಗಳಲ್ಲಿ ಅಧಿಕಾರಿಗಳು ವಕೀಲರಿಗೆ ಸೂಕ್ತ ಮಾಹಿತಿ ನೀಡುತ್ತಿಲ್ಲ. ಇದರಿಂದಾಗಿ ಹಲವು ಪ್ರಕರಣಗಳಲ್ಲಿ ವರ್ಷಗಳಿಂದ ಆಕ್ಷೇಪಣೆಗಳನ್ನೇ ಸಲ್ಲಿಸಲಾಗಿಲ್ಲ. ಈ ಸಮ್ಯೆಗೆ ತಕ್ಷಣ ಪರಿಹಾರ ಕಂಡುಹಿಡಿಯಬೇಕು ಎಂದು ನ್ಯಾಯಮೂರ್ತಿಗಳು ಸಲಹೆ ನೀಡಿದರು.

HC directs BDA to strengthen its own legal cell

ಇನ್ನುಮುಂದೆ ಪ್ರಕರಣಗಳ ಶಿಘ್ರ ವಿಲೇವಾರಿಗೆ ಎಲ್ಲ ರೀತಿಯ ಸಹಕಾರವನ್ನು ವಕೀಲರಿಗೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ಆಯುಕ್ತರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+