ನೌಕರರ ಬಾಕಿ ವೇತನ ಪಾವತಿಗೆ 24 ತಾಸು ಗಡುವು ನೀಡಿದ ಹೈಕೋರ್ಟ್

ಬೆಂಗಳೂರು, ಮೇ 28: ರಾಜ್ಯ ಹೈಕೋರ್ಟ್ ನೌಕರರಿಗೆ ನೀಡಬೇಕಿರುವ 2 ತಿಂಗಳ ವೇತನ ಹಾಗೂ ಬಾಕಿಯನ್ನು ಮಂಗಳವಾರದೊಳಗೆ ಪಾವತಿ ಮಾಡುವುದಾಗಿ ರಾಜ್ಯ ಹಣಕಾಸು ಇಲಾಖೆ ಕಾರ್ಯದರ್ಶಿ ಎಸ್.ಎನ್. ಪ್ರಸಾದ್ ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.

ಹೈಕೋರ್ಟ್ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ವೇತನಶ್ರೇಣಿಯ ಅನುಸಾರ ವೇತನ ನಿಗದಿಪಡಿಸುವಂತೆ ಸುಪ್ರೀಂಕೋರ್ಟ್ ಆದೇಶವಿದ್ದರೂ ಸರ್ಕಾರ ತಮ್ಮ ವೇತನ ಪರಿಷ್ಕರಣೆ ಮಾಡಿಲ್ಲ ಎಂದು ಆರೋಪಿಸಿ ಹೈಕೋರ್ಟ್ ನೌಕರರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಈ ಕುರಿತು ಪ್ರಮಾಣಪತ್ರ ಸಲ್ಲಿಸಿದರು.

HC directs state govt to give salary for employees

ಇದೇ ವೇಳೆ, ಪರಿಷ್ಕೃತ ವೇತನದ ಬಾಕಿಯನ್ನು ಜೂನ್ ಅಂತ್ಯದೊಳಗೆ ಪಾವತಿಸುವುದಾಗಿಯೂ ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ. ಜೂ. 30ರಂದು ವರದಿ ಸಲ್ಲಿಸುವಂತೆ ಸೂಚಿಸಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+