ರಾಜಕಾಲುವೆ ನಿರ್ವಹಣೆಗೆ ಸಮರ್ಪಕ ಯೋಜನೆ ರೂಪಿಸಿ: ಹೈಕೋರ್ಟ್‌

ಬೆಂಗಳೂರು, ಜು.3: ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ದುರಸ್ತಿ ಹಾಗೂ ನಿರ್ವಹಣೆ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಬಿಬಿಎಂಪಿ ಹೈಕೋರ್ಟ್‌ ತೀವ್ರ ತರಾಟೆ ತೆಗೆದುಕೊಂಡಿತ್ತು.

ರಾಜಕಾಲುವೆ ನಿರ್ವಹಣೆ ಕುರಿತಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ಪೀಠ, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ರಾಜಕಾಲುವೆ, ನದಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿಲ್ಲ, ಬಿಬಿಎಂಪಿಯು ಬೇಜವಾಬ್ದಾರಿಯನ್ನು ತೋರಿಸುತ್ತಿದೆ ಇದಕ್ಕೆ ಸಮಪರ್ಕ ಯೋಜನೆಯ ಅಗತ್ಯವಿದೆ ಮಳೆ ನೀರುಗಾಲುವೆ ನಿರ್ವಹಣೆಗೆ, ಬೆಂಗಳೂರು ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಸೇರಿ ರಾಜಕಾಲುವೆಯನ್ನು ಎರಡು ಭಾಗವಾಗಿ ವಿಂಗಡಿಸುವಂತೆ ಸೂಚನೆ ನೀಡಿದೆ.

ನಾಗರಿಕ ಪ್ರದೇಶ ಹಾಗೂ ಕೈಗಾರಿಕಾ ಪ್ರದೇಶ ವ್ಯಾಪ್ತಿಗಳ ಬಗ್ಗೆ ಸ್ಪಷ್ಟವಾದ ರೂಪುರೇಷೆ ಸಿದ್ಧಪಡಿಸಿಕೊಳ್ಳಬೇಕು, ಮಳೆಗಾಲ ಆರಂಭವಾಗಿದ್ದು, ಈ ಎಲ್ಲಾ ಕೆಲಸ ಮಾಡಲು ಇದು ಸೂಕ್ತ ಸಮಯವಾಗಿದೆ ಎಂದು ಅಭಿಪ್ರಾಯಪಟ್ಟಿತು.

HC insists BBMP to have proper planning for rain water drain

ಸಾರ್ವಜನಿಕರ ರಕ್ಷಣೆಗೆ ಬಿಬಿಎಂಪಿ ಮೊದಲ ಆದ್ಯತೆ ನೀಡಬೇಕು ಎಂದು ಬಿಬಿಎಂಪಿ ಪರ ವಕೀಲರಿಗೆ ನ್ಯಾಯಾಧೀಶರು ನಿರ್ದೇಶನ ನೀಡಿದರು. ವಿಚಾರಣೆಯನ್ನು ಆಗಸ್ಟ್ ಮೊದಲ ವಾರಕ್ಕೆ ಮುಂದೂಡಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+