ನಗರದಲ್ಲಿ ಅನಧಿಕೃತ ಜಾಹೀರಾತು ಹಾವಳಿ: ಬಿಡಿಎ, ಬಿಬಿಎಂಪಿಗೆ HC ಖಡಕ್ ಸೂಚನೆ

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವಲ್ಲಿ ಸ್ಥಳೀಯ ನಾಗರಿಕ ಸಂಸ್ಥೆ ಅಧಿಕಾರಿಗಳು ವಿಫಲವಾಗಿದ್ದಾರೆ. ಈ ಸಂಬಂಧ ಸೂಕ್ತ ಜರುಗಿಸಲು ಬಿಡಿಎ, ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ.

ಬೆಂಗಳೂರು, ಜನವರಿ 10: ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತುಗಳಿಗೆ ಕಡಿವಾಣ ಹಾಕುವಲ್ಲಿ ಸ್ಥಳೀಯ ನಾಗರಿಕ ಸಂಸ್ಥೆ ಅಧಕಾರಿಗಳು ವಿಫಲವಾಗಿದ್ದಾರೆ. ಈ ಸಂಬಂಧ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಬಿಬಿಎಂಪಿ ಮತ್ತು ಬಿಡಿಎಗೆ ಖಡಕ್ ನಿರ್ದೇಶನವೊಂದನ್ನು ನೀಡಿದೆ.

ಅನಧಿಕೃತ ಜಾಹೀರಾತು ಫಲಕಗಳ ಅಳವಡಿಕೆಗೆ ತೆರೆ ಬಿದ್ದಿಲ್ಲ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ವಿಫಲವಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಭಿವೃದ್ಧಿ ಪ್ರಾಧಿಕಾರ (BDA) ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಗೆ ಹೈಕೋರ್ಟ್ ಸೂಚನೆ ನೀಡಿದೆ.

ಅಷ್ಟೇ ಅಲ್ಲದೇ, ನಗರ ವ್ಯಾಪ್ತಿಯಲ್ಲಿ ಅನಧಿಕೃತ ಪೋಸ್ಟರ್, ಹೋರ್ಡಿಂಗ್, ಫ್ಲೆಕ್ಸ್, ಬ್ಯಾನರ್ ಅಳವಡಿಕೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಮಾರ್ಚ್ 6 ರೊಳಗೆ ಸಂಪೂರ್ಣ ವರದಿಯನ್ನು ಸಲ್ಲಿಸುವಂತೆ ಸಂಬಂಧಿಸಿದ ಈ ಎರಡು ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಹೈಕೋರ್ಟ್‌ ಕಟ್ಟು ನಿಟ್ಟಾಗಿ ಸೂಚನೆ ನೀಡಿದೆ. ಬಳಿಕ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳ ಮಾರ್ಚ್‌ 7ಕ್ಕೆ ಮುಂದೂಡಿತು.

HC instructed BDA BBMP Take Action Against Officers Failing Unauthorized Flex Banner Bengaluru

ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಫ್ಲೆಕ್ಸ್, ಬ್ಯಾನರ್, ಫಲಕಗಳ ಅಳವಡಿಕೆಯನ್ನು ಆಕ್ಷೇಪಿಸಿದ ಸರಸ್ವತಿಪುರಂನ ಮಾಯಿಗೇಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿ ವಿಚಾರಣಕ್ಕೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ (High Court CJ PB Varale ) ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯಪೀಠ ಈ ಮೇಲಿನಂತೆ ಸೂಚನೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್. ಮೋಹನ್ ಅವರು, ನಗರದಲ್ಲಿ ಅಳವಡಿಸಿದ ಜಾಹೀರಾತುಗಳ ಫೋಟೊ ಮತ್ತು ಅವುಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹೈಕೋರ್ಟ್‌ಗೆ ಸಲ್ಲಿಸಿದರು. ಜೊತೆಗೆ ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಜಾಹಿರಾತು ಅಳವಡಿಸಲಾಗಿದೆ. ಅಂತವರ ವಿರುದ್ಧ ಕಾನೂನಿನಡಿ ಸೂಕ್ತ ಕ್ರಮವಹಿಸಬೇಕು ಎಂದು ಅವರು ಮನವಿ ಮಾಡಿದರು. ಈ ಹಿಂದೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದರು, ಜಾಹೀರಾತುಗಳ ಹಾವಳಿ ನಿಂತಿಲ್ಲ ಎಂದು ತಿಳಿಸಿದರು.

HC instructed BDA BBMP Take Action Against Officers Failing Unauthorized Flex Banner Bengaluru

ಪ್ರಕರಣ ಸಂಬಂಧ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ವಿಕ್ರಂ ಹುಯಿಲಗೋಳ ಅವರು ನ್ಯಾಯಪೀಠಕ್ಕೆ ಜಾಹಿರಾತು ಫಲಕ ಕುರಿತು ಒಂದಷ್ಟು ಮಾಹಿತಿ ನೀಡಿದರು. ಈ ಎಲ್ಲ ಆಕ್ಷೇಪಣೆ ಕೇಳಿದ ನ್ಯಾಯಪೀಠ ತಪ್ಪಿತಸ್ಥ ಬಿಡಿಎ ಹಾಗೂ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೂಲಕ ಕ್ರಮ ಜರುಗಿಸಬೇಕು. ಅಧಿಕಾರಿಗಳು ಕರ್ತವ್ಯ ಲೋಪ ಎಸಗಿದ್ದಾದರೆ ಕ್ರಮ ಜರುಗಿಸಿ ಪ್ರಕರಣ ಸಂಬಂಧ ಸಮಗ್ರ ವರದಿ ಸಲ್ಲಿಸುವಂತೆ ಆದೇಶಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+