ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆ: ವೇಳಾಪಟ್ಟಿ ನಿಗದಿ ಯಾವಾಗ ಆಯೋಗಕ್ಕೆ ಹೈಕೋರ್ಟ್ ಪ್ರಶ್ನೆ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಸೆ.2: ಬಹುನಿರೀಕ್ಷಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಚುನಾವಣೆ ಕುರಿತಂತೆ ವೇಳಾಪಟ್ಟಿಯನ್ನು ಯಾವಾಗ ನಿಗದಿ ಮಾಡುತ್ತೀರಿ ಎಂದು ಹೈಕೋರ್ಟ್ ಗುರುವಾರ ರಾಜ್ಯ ಚುನಾವಣಾ ಆಯೋಗವನ್ನು ಕೇಳಿದೆ.

ಅಲ್ಲದೆ, ಕ್ಷೇತ್ರ ಪುನರ್ ವಿಂಗಡಣೆ ಆದೇಶಕ್ಕೆ ಸದ್ಯಕ್ಕೆ ತಡೆ ನೀಡಲು ನಿರಾಕರಿಸಿರುವ ಹೈಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 8ಕ್ಕೆ ಮುಂದೂಡಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ-2020ರಂತೆ ಬಿಬಿಎಂಪಿ ವಾರ್ಡ್‌ಗಳ ಪುನರ್‌ ವಿಂಗಡಣೆ ಮಾಡಿರುವ ಸರ್ಕಾರದ ಕ್ರಮ ಪ್ರಶ್ನಿಸಿ ವಕೀಲ ಎಸ್‌. ಇಸ್ಮಾಯಿಲ್‌ ಜಬಿವುಲ್ಲಾ, ಶಾಂತಿನಗರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ, ಮಾಜಿ ಕಾಪೋರೇಟರ್‌ಗಳಾದ ಬಿ.ಎನ್‌. ಮಂಜುನಾಥ್‌ ರೆಡ್ಡಿ, ಎನ್‌. ನಾಗರಾಜ್‌ ಹಾಗೂ ಇತರರು ಸೇರಿ ಸಲ್ಲಿಸಿರುವ ಹಲವರು ಸಲ್ಲಿಸಿರುವ ತಕರಾರು ಅರ್ಜಿಗಳು ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರಿದ್ದ ಏಕಸದಸ್ಯಪೀಠದ ಮುಂದೆ ವಿಚಾರಣೆಗೆ ಬಂದವು.

ಆಗ ನ್ಯಾಯಪೀಠ, ಚುನಾವಣಾ ಆಯೋಗದ ವಕೀಲರನ್ನು ಉದ್ದೇಶಿಸಿ,ಬಿಬಿಎಂಪಿ ಚುನಾವಣಾ ವೇಳಾಪಟ್ಟಿ ಎಂದು ನಿಗದಿಪಡಿಸುತ್ತೀರಿ ಪ್ರಶ್ನಿಸಿತು.

ಅದಕ್ಕೆ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ಸೆಪ್ಟೆಂಬರ್ 22 ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ. ಅದಾದ ಬಳಿಕವಷ್ಟೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.

HC notice to state election commission on reservation of wards, BBMP polls announcement

ಈ ಮಧ್ಯೆ, ಅರ್ಜಿದಾರರ ಪರ ವಕೀಲರು ಕ್ಷೇತ್ರ ಪುನರ್‌ ವಿಂಗಡಣೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್‌ಗೆ ಮನವಿ ಮಾಡಿದರು. ಅಲ್ಲದೆ, ಸೆ.22 ರೊಳಗೆ ವಿಚಾರಣೆ ಮುಗಿಸಿ ಆದೇಶ ನೀಡಬಹುದು ಎಂದರು.

ಆದರೆ ನ್ಯಾಯಪೀಠ ಮಧ್ಯಂತರ ಆದೇಶದ ಬಗ್ಗೆ ಇಂದು ನಿರ್ಧರಿಸುವುದಿಲ್ಲ ಎಂದು ಹೈಕೋರ್ಟ್ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿದೆ.

ಹೈಕೋರ್ಟ್‌ ಅಂಗಳದಲ್ಲಿ ಮತ್ತೆ ವಿಚಾರಣೆ

ತೀವ್ರ ಕುತೂಹಲ ಕೆರಳಿಸಿರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ( ಬಿಬಿಎಂಪಿ) ವಿಚಾರ ಮತ್ತೆ ಚುನಾವಣೆಯ ಕುರಿತು ನಿರ್ಧರಿಸುವ ಜವಾಬ್ದಾರಿ ಹೈಕೋರ್ಟ್‌ಗೆ ನೀಡಿದೆ.

ಚುನಾವಣೆ ಕುರಿತಂತೆ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ಆ.26ರಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಗಳಾದ ಎಸ್‌.ಅಬ್ದುಲ್‌ ನಜೀರ್‌ ಮತ್ತು .ಜೆ.ಕೆ.ಮಹೇಶ್ವರಿ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತು.

ಸಾಲಿಸಿಟರ್‌ ಜನರಲ್‌ ತುಷಾರ ಮೆಹ್ತಾ, ಮಧ್ಯಂತರ ಆದೇಶ ಅಥವಾ ನಿರ್ದೇಶನಗಳನ್ನು ನೀಡಲು ಹೈಕೋರ್ಟ್‌ಗೆ ಸ್ವಾತಂತ್ರ್ಯ ನೀಡಬೇಕೆಂದು ಕೋರಿದರು.

HC notice to state election commission on reservation of wards, BBMP polls announcement

ಕೊನೆಗೆ ನ್ಯಾಯಪೀಠ ''ಕಾನೂನು ಪ್ರಕಾರ ಹೈಕೋರ್ಟ್ ತನ್ನ ಮುಂದಿರುವ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ಪರಿಗಣಿಸಿ ಜೇಷ್ಠತೆ ಆಧರಿಸಿ ತೀರ್ಪು ನೀಡಬಹುದು'' ಎಂದು ಹೇಳಿತು.

ಹಾಗಾಗಿ ಹೈಕೋರ್ಟ್‌ನಲ್ಲಿ ವಾರ್ಡ್‌ ಪುನರ್‌ ವಿಂಗಡಣೆ ಪ್ರಶ್ನಿಸಿರುವ ಅರ್ಜಿಗಳು ಮತ್ತು ವಾರ್ಡ್‌ವಾರು ಮೀಸಲು ಪ್ರಶ್ನಿಸಿರುವ ಅರ್ಜಿಗಳು ವಿಚಾರಣೆಗೆ ಬರಲಿದ್ದು, ಅದು ಅರ್ಜಿದಾರರ, ಸರಕಾರ ಮತ್ತು ಚುನಾವಣಾ ಆಯೋಗ- ಮೂವರ ವಾದ ಪ್ರತಿವಾದ ಆಲಿಸಿ ಜೇಷ್ಠತೆಯ ಮೇಲೆ ತೀರ್ಪು ನೀಡಬೇಕಿದೆ.

ವಾರ್ಡ್ ವಾರು ಮೀಸಲಿಗೂ ತಕರಾರು: ಈ ಮಧ್ಯೆ, ಬಿಬಿಎಂಪಿ ವಾರ್ಡ್ ಮೀಸಲಾತಿ ಪ್ರಶ್ನಿಸಿ ಸಲ್ಲಿಸಿ ಈಜಿಪುರದ‌ ಕೆ.ಮಹದೇವ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರ, ಬಿಬಿಎಂಪಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪರ ವಕೀಲರು, ನಿಯಮಬಾಹಿರವಾಗಿ ಮೀಸಲಾತಿ ನಿಗದಿಪಡಿಸಿದ್ದಾರೆಂದು ಆರೋಪಿಸಿ, ಮೀಸಲಾತಿ ಪಟ್ಟಿ ರದ್ದು ಮಾಡಬೇಕೆಂದು ಕೋರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ನೋಟಿಸ್ ಜಾರಿ ನಂತರ ಮುಂದಿನ ವಿಚಾರಣೆಯನ್ನು ಸೆ.1 ಕ್ಕೆ ಮುಂದೂಡಿತು.

ಸುಪ್ರೀಂನಿಂದಲೇ ಸ್ಪಷ್ಟನೆ: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ಗಳ ಪುನರ್‌ವಿಂಗಡಣೆ ಆಕ್ಷೇಪಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸಬಹುದೇ ಹಾಗೂ ಈ ಸಂಬಂಧ ಏನಾದರೂ ಮಧ್ಯಂತರ ಆದೇಶಗಳನ್ನು ಹೊರಡಿಸಬಹುದೇ ಎಂಬ ಹೈಕೋರ್ಟ್‌ ಸುಪ್ರೀಂಕೋರ್ಟ್‌ನಿಂದ ಸ್ಪಷ್ಟನೆ ಬಯಸಿದೆ.

ಈ ವಿಚಾರವಾಗಿ ಸುಪ್ರೀಂಕೋರ್ಟ್‌ನಿಂದ ಸ್ಪಷ್ಟನೆ ತರುವಂತೆ ಅರ್ಜಿದಾರರಿಗೆ ಹೈಕೋರ್ಟ್‌ ಸೂಚಿಸಿದೆ. ಆಗಸ್ಟ್‌ 26ಕ್ಕೆ ಸುಪ್ರೀಂಕೋರ್ಟ್‌ನಲ್ಲಿಈ ಅರ್ಜಿ ವಿಚಾರಣೆಗೆ ನಿಗದಿಯಾಗಿರುವುರಿಂದ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಆ.29ಕ್ಕೆ ಮುಂದೂಡಿದನ್ನು ಇಲ್ಲಿ ಸ್ಮರಿಸಬಹುದಾಗಿದೆ.

English summary
Karnataka High Court on Sept 01 ordered notice to the state government, the Bruhat Bengaluru Mahanagara Palike (BBMP) and the State Election Commission (SEC) on a petition challenging reservation of wards and announcement of BBMP polls.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X