ಈದ್ಗಾ ಮೈದಾನದಲ್ಲಿ ಕನ್ನಡ ಕಹಳೆ; ಕೋರ್ಟ್ ಆದೇಶವೇನು?
ಬೆಂಗಳೂರು, ನವೆಂಬರ್ 02; ಕರ್ನಾಟಕದ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಕಹಳೆ ಮೊಳಗಲಿದೆ. ಹೌದು, ನಗರದ ಇತಿಹಾಸದಲ್ಲಿ ಇದೇ ಮೊದಲ ಸಲ ಚಾಮರಾಜಪೇಟೆ ನಾಗರೀಕರ ಒಕ್ಕೂಟದಿಂದ ಇಂದಿನಿಂದ ಮೂರು ದಿನಗಳ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.
ಅಲ್ಲದೇ, ಈದ್ಗಾ ಮೈದಾನ ಬಳಕೆ ಮಾಡಲು ಒಂದು ವೇಳೆ ಕಾನೂನು ಅಡಚಣೆಗಳು ಉಂಟಾದಲ್ಲಿ ಅರ್ಜಿದಾರರ ಒಕ್ಕೂಟದಿಂದ ರಾಜ್ಯೋತ್ಸವ ಆಚರಣೆ ಮಾಡಲು ಜಿಲ್ಲಾಡಳಿತದಿಂದ ಪರ್ಯಾಯ ಮೈದಾನ ಒದಗಿಸಬೇಕು ಎಂದೂ ಸಹ ನ್ಯಾಯಪೀಠ ಸ್ಪಷ್ಟ ನಿರ್ದೇಶನ ನೀಡಿದೆ.

ಚಾಮರಾಜಪೇಟೆ ನಾಗರಿಕರ ಒಕ್ಕೂಟ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನಿರಾಕರಿಸಿ ಬೆಂಗಳೂರ ನಗರ ಜಿಲ್ಲಾಧಿಕಾರಿಗಳು ನೀಡಿದ್ದ ಹಿಂಬರಹವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ, ಈ ಅನುಮತಿ ನೀಡಿದೆ.
ಎಲ್ಲ ಧರ್ಮದವರಿಂದ ಆಚರಣೆ: ಕರ್ನಾಟಕ ರಾಜ್ಯ ರಚನೆ ಮತ್ತು ಕರ್ನಾಟಕ ರಾಜ್ಯೋತ್ಸವವನ್ನು ಇಡೀ ರಾಜ್ಯದ ಜನತೆ ಆಚರಣೆ ಮಾಡಬೇಕಾಗಿದ್ದು, ಎಲ್ಲ ಧರ್ಮದವರು ಸೇರಿ ಮೂರು ದಿನಗಳ ಕಾಲ ಆಚರಣೆ ಮಾಡಬಹುದಾಗಿದೆ ಎಂದು ಪೀಠ ಅಭಿಪ್ರಾಯ ಪಟ್ಟಿದೆ.
ಕನ್ನಡ ನಾಡು, ನುಡಿಗೆ ಸಂಬಂಧಿಸಿದಂತೆ ಕೇವಲ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾತ್ರ ಹಮ್ಮಿಕೊಳ್ಳಲಾಗುವುದು. ಜತೆಗೆ, ರಾಜ್ಯ ಬಾವುಟವನ್ನು ಮಾತ್ರ ಧ್ವಜಾರೋಹಣ ಮಾಡಿ, ಇತರೆ ಯಾವುದೇ ಬಾವುಟವನ್ನು ಅಳವಡಿಸುವುದಿಲ್ಲ ಎಂದು ಅರ್ಜಿದಾರರ ಪರ ವಕೀಲರು ನೀಡಿದ ಮುಚ್ಚಳಿಕೆಯನ್ನು ದಾಖಲಿಸಿಕೊಂಡು ನ್ಯಾಯಪೀಠ, ಷರತ್ತುಬದ್ಧ ಅನುಮತಿ ನೀಡಿ, ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ.
ಅಲ್ಲದೇ, ಒಕ್ಕೂಟದ ಸದಸ್ಯರು ಯಾವುದೇ ಧರ್ಮದ ಧಾರ್ಮಿಕ ಭಾವನೆಗಳ ವಿರುದ್ಧ ಹಾಗೂ ಮತ್ತು ಕೋಮು ಸೌಹಾರ್ಧತೆಗೆ ಧಕ್ಕೆಯಾಗದಂತೆ ಹೇಳಿಕೆ ನೀಡದಂತೆ ನೋಡಿಕೊಳ್ಳಬೇಕು ಎಂದು ಒಕ್ಕೂಟದ ಮುಖ್ಯಸ್ಥರಿಗೆ ನಿರ್ದೇಶನ ನೀಡಿ ಆದೇಶಿಸಿದೆ.
ಡಿಸಿ ಕ್ರಮಕ್ಕೆ ಬೇಸರ: ಕಲಾಪ ಪ್ರಾರಂಭವಾಗುತ್ತಿದ್ದಂತೆ ಅರ್ಜಿದಾರರ ಪರ ವಕೀಲರು, ನ್ಯಾಯಪೀಠದ ಮುಂದೆ ವಿಷಯವನ್ನು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಇದು ಕರ್ನಾಟಕ ರಚನೆಯಾದ ದಿನದ ಪ್ರಯುಕ್ತ ರಾಜ್ಯ ಉತ್ಸವ ಆಚರಣೆ ಮಾಡಲಾಗುತ್ತದೆ. ಇದು ಧಾರ್ಮಿಕ ಕಾರ್ಯಕ್ರಮ ಅಲ್ಲ. ಎಲ್ಲಾ ಧರ್ಮದವರು ಸೇರಿ ಆಚರಣೆ ಮಾಡಬೇಕಾದ ಕಾರ್ಯಕ್ರಮ. ಹಬ್ಬದ ರೀತಿ ಸಂಭ್ರಮ ಮಾಡಬೇಕಿದೆ. ಅಂತಹ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವುದಿಲ್ಲ ಎಂದರೆ ಹೇಗೆ? ಎಂದು ಪ್ರಶ್ನಿಸಿತು.
ಈ ರೀತಿಯ ಕಾರ್ಯಕ್ರಮಗಳಿಗೆ ರಾಜ್ಯ ಸರ್ಕಾರ ಯಾವುದೇ ಆಕ್ಷೇಪ ಮಾಡಬಾರದು. ರಾಜ್ಯ ಸರ್ಕಾರವೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡುತ್ತಿರುವಾಗ, ಇಲ್ಲಿ ಮಾತ್ರ ಅಡ್ಡಿಪಡಿಸುತ್ತಿರುವುದು ಏಕೆ? ಎಂದು ಪ್ರಶ್ನಿಸಿತು.
ಪ್ರಕರಣದ ಹಿನ್ನೆಲೆ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನ.1ರಿಂದ 3ರ ವರೆಗೆ ಕನ್ನಡ ರಾಜ್ಯೋತ್ಸವ ಹಾಗೂ ನಗರ ದೇವತೆ ಅಣ್ಣಮ್ಮ ದೇವಿ ಉತ್ಸವ ಮತ್ತು ಕನ್ನಡ ಸಂಸ್ಕೃತಿಯನ್ನು ಪ್ರಸ್ತುತಪಡಿಸುವ ಸಾಂಸ್ಕೃತಿ ಕಾರ್ಯಕ್ರಮ ಪ್ರದರ್ಶನ ಮಾಡಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರೀಕ ಒಕ್ಕೂಟ ಅಕ್ಟೋಬರ್ 27ರಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು.
ಈ ಮನವಿಯನ್ನು ಪರಿಶೀಲಿಸಿದ್ದ ಜಿಲ್ಲಾಧಿಕಾರಿಗಳು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂಕೋರ್ಟ್ ಆದೇಶವಿದೆ. ಈ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿದಲ್ಲಿ ಅದು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾದಂತಾಗಲಿದೆ. ಆದ ಕಾರಣ ಅನುಮತಿ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಹಿಂಬರಹವನ್ನು ನೀಡಿದ್ದರು. ಇದನ್ನು ಪ್ರಶ್ನಿಸಿ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿತ್ತು.
-
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು












Click it and Unblock the Notifications