ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಹೈಕೋರ್ಟ್ ತಡೆ

|
Google Oneindia Kannada News

ಬೆಂಗಳೂರು, ಏ.27:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ನಿತ್ಯ ಲಕ್ಷಾಂತರ ವಾಹನಗಳಿಂದ ಗಿಜಿಗುಡುತ್ತಿರುವ ಬೆಂಗಳೂಇನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಎಲಿವೇಟೆಡ್ ಕಾರಿಡಾರ್ ಯೋಜನೆ ಆರಂಭಿಸಲಾಗಿತ್ತು.

'ಎಲಿವೇಟೆಡ್ ಕಾರಿಡಾರ್ ಬೇಡ'ಹೋರಾಟಗಾರರನ್ನು ಚರ್ಚೆಗೆ ಆಹ್ವಾನಿಸಿದ ಸಿಎಂ 'ಎಲಿವೇಟೆಡ್ ಕಾರಿಡಾರ್ ಬೇಡ'ಹೋರಾಟಗಾರರನ್ನು ಚರ್ಚೆಗೆ ಆಹ್ವಾನಿಸಿದ ಸಿಎಂ

ನಮ್ಮ ಬೆಂಗಳೂರು ಫೌಂಡೇಷನ್‌ ಮತ್ತು ಸಿಟಿಜನ್‌ ಆ್ಯಕ್ಷನ್‌ ಫೋರಂ ಮತ್ತಿತರ ಸಂಸ್ಥೆಗಳು ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯನ್ನು ಆಲಿಸಿದ ಹಂಗಾಮಿ ಸಿಜೆ ಎಲ್‌. ನಾರಾಯಣಸ್ವಾಮಿ ಮತ್ತು ನ್ಯಾ.ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಈ ಆದೇಶ ಹೊರಡಿಸಿ ವಿಚಾರಣೆಯನ್ನು ಜೂ.3ಕ್ಕೆ ಮುಂದೂಡಿದೆ.

HC puts brake on elevated corridor project till June 3

ಹೆಬ್ಬಾಳದ ಬ್ಯಾಪ್ಟಿಸ್ಟ್‌ ಆಸ್ಪತ್ರೆಯಿಂದ ಮೇಕ್ರಿ ಸರ್ಕಲ್‌ ಮಾರ್ಗವಾಗಿ ಸಿಲ್ಕ್‌ಬೋರ್ಡ್‌ವರೆಗೆ ಎಲಿವೇಟೆಡ್‌ ಕಾರಿಡಾರ್‌ ನಿರ್ಮಿಸಲು ಸರಕಾರ ಟೆಂಡರ್‌ ಕರೆದಿದೆ.

ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ ಎಲಿವೇಟೆಡ್ ಕಾರಿಡಾರ್‌ನಿಂದ ಮರಗಳಿಗಷ್ಟೇ ಅಲ್ಲ ಬಫರ್‌ ವಲಯಕ್ಕೂ ಅಪಾಯ

ಯೋಜನೆಗೆ ಕರೆದಿರುವ ಟೆಂಡರ್‌ ಸರಕಾರ ಅಂತಿಮಗೊಳಿಸುವಂತಿಲ್ಲ. ಒಂದು ವೇಳೆ ಅಂತಿಮಗೊಳಿಸಿದರೂ ಮುಂದಿನ ವಿಚಾರಣೆವರೆಗೆ ಯಾವುದೇ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ಮಧ್ಯಾಂತರ ಆದೇಶಿಸಿ ವಿಚಾರಣೆ ಮುಂದೂಡಿದೆ.

English summary
In a major setback to the state government, the High Court of Karnataka on Friday stayed the process of finalising tenders for the controversial elevated corridor project, and if tenders are finalised, it restrained the authorities from going ahead with the project untill June 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X