ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು ವಿಳಂಬ: ಹೈಕೋರ್ಟ್ ತರಾಟೆ
ಬೆಂಗಳೂರು, ಆಗಸ್ಟ್ 13: ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ನಿರ್ದಿಷ್ಟ ಕಾಲಮಿತಿಯನ್ನು ಒಳಗೊಂಡ ಅಫಿಡವಿಟ್ ಸಲ್ಲಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುವ ವೇಳೆ, ನಗರದಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕೈಗೊಂಡ ಕ್ರಮಗಳ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಲ್ಲಿಸಿದ್ದ ಪ್ರಮಾಣಪತ್ರವನ್ನು ಪಾಲಿಕೆ ಪರ ವಕೀಲರು ನ್ಯಾಯಪೀಠಕ್ಕೆ ನೀಡಿದ್ದರು.
ಇದರ ನಡುವೆ, 379 ಕಟ್ಟಡಗಳು ಸಾರ್ವಜನಿಕ ಸ್ಥಳ ಅಥವಾ ಖಾಸಗಿ ಜಾಗದಲ್ಲಿವೆಯೇ ಎಂಬ ವಿವಾದವಿದೆ. ಕಟ್ಟಡ ಸ್ಥಳಾಂತರ ಅಥವಾ ಅವುಗಳನ್ನು ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ಆಯುಕ್ತರು ನಿರ್ದಿಷ್ಟ ಕಾಲಮಿತಿ ಉಲ್ಲೇಖಿಸಿಲ್ಲ" ಎಂದು ನ್ಯಾಯಾಲಯ ಹೇಳಿತು.

2009ರ ತನ್ನ ಆದೇಶವನ್ನು ಜಾರಿಗೊಳಿಸುವ ಸಂಬಂಧ ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದ್ದನ್ನು ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ಅವರಿದ್ದ ವಿಭಾಗೀಯ ಪೀಠ ನಡೆಸಿತು.
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ 2009 ರ ಸೆ.29ರಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸುವುದಕ್ಕೂ ಮುನ್ನ ನಗರದಲ್ಲಿ 1,893 ಅನಧಿಕೃತ ಧಾರ್ಮಿಕ ಕಟ್ಟಡಗಳಿದ್ದವು.
ಆ ಪೈಕಿ 105 ಕಟ್ಟಡಗಳ ಸ್ಥಳಾಂತರ ಹಾಗೂ 280 ನೆಲಸಮಗೊಳಿಸಬೇಕಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ನಿರ್ಮಾಣಗೊಂಡಿರುವ 277 ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕಿದೆ. ಒಟ್ಟಾರೆ 382ಕಟ್ಟಡಗಳನ್ನು ನೆಲಸಮಗೊಳಿಸಬೇಕಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿತ್ತು.
ಇನ್ನು ಕೇವಲ ಐದು ಕಟ್ಟಡ ಬಿಬಿಎಂಪಿ ತೆರವುಗೊಳಿಸಿದೆ. ಮಂದಗತಿಯಲ್ಲಿ ನಡೆಯುತ್ತಿರುವ ಕ್ರಮವನ್ನು ನ್ಯಾಯಾಲಯ ಒಪ್ಪುವುದಿಲ್ಲ. ಸ್ಥಳಾಂತರಿಸಲು ಕ್ರಮ ಜರುಗಿಸದೆ ಇರುವುದಕ್ಕೆ ಬಿಬಿಎಂಪಿ ಕಾರಣ ನೀಡಿಲ್ಲ. ತೆರವು ಮತ್ತು ಸ್ಥಳಾಂತರಕ್ಕೆ ಕಾಲಮಿತಿಯನ್ನೂ ನಿಗದಿಪಡಿಸಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು.
ಬಳಿಕ ನಗರದಲ್ಲಿ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಮತ್ತು ಸ್ಥಳಾಂತರ ಕುರಿತು ಕಾಲಮಿತಿ ನಿಗದಿಪಡಿಸಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ಹಾಗೂ ಸರ್ಕಾರಕ್ಕೆ ಸೂಚಿಸಿತು.
ಪ್ರಮಾಣ ಪತ್ರವನ್ನು ಪರಿಶೀಲಿಸಿದ ನ್ಯಾಯಪೀಠ, ಒಟ್ಟು 382 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಬೇಕು ಮತ್ತು 105 ಕಟ್ಟಡಗಳನ್ನು ಸ್ಥಳಾಂತರಿಸಬೇಕು ಎಂದು ಹೇಳಿರುವ ಬಿಬಿಎಂಪಿ, ಈವರೆಗೂ ಐದು ಕಟ್ಟಡಗಳನ್ನು ಮಾತ್ರ ತೆರವುಗೊಳಿಸಲಾಗಿದೆ. ಇನ್ನೂ ಒಂದೇ ಒಂದು ಕಟ್ಟಡವನ್ನೂ ಸ್ಥಳಾಂತರಿಸಿಲ್ಲ ಎಂದು ತಿಳಿಸಿದೆ.
ಇದು ಆಘಾತಕಾರಿ ವಿಚಾರವಾಗಿದೆ. ಸುಪ್ರೀಂಕೋರ್ಟ್ ಆದೇಶ ಪ್ರಕಟಗೊಂಡ ನಂತರವೂ 277ಅನಧಿಕೃತ ಕಟ್ಟಡ ತಲೆ ಎತ್ತಿವೆ ಎಂದು ನ್ಯಾಯಪೀಠ ಪ್ರಶ್ನಿಸಿತು.
ರಸ್ತೆ,ಪಾದಚಾರಿ ಮಾರ್ಗ,ಉದ್ಯಾನ,ಮೈದಾನ, ಸರ್ಕಾರಿ ಜಾಗ ಸೇರಿದಂತೆ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಮಂದಿರ, ಚರ್ಚ್,ಮಸೀದಿ,ಗುರುದ್ವಾರ ಸೇರಿದಂತೆ ಧಾರ್ಮಿಕ ಕಟ್ಟಡಗಳ ಸಮೀಕ್ಷೆ ಮಾಡಿ ವರದಿ ನೀಡಬೇಕು ಎಂದು ಸೂಚಿಸಿದ್ದರು.
ಕಟ್ಟಡ ತೆರವಿಗೆ ಸಂಬಂಧಿಸಿದ ಕಾಲಾನುಕ್ರಮವನ್ನು ಒಳಗೊಂಡ ಅಫಿಡವಿಟ್ ಅನ್ನು ಮೂರು ವಾರಗಳ ಒಳಗೆ ಸಲ್ಲಿಸುವಂತೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಅವರಿಗೆ ಆದೇಶಿಸಿರುವ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿದೆ.(ಮಾಹಿತಿ ಕೃಪೆ- ಬಾರ್ & ಬೆಂಚ್)
-
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications