ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು ವಿಳಂಬ: ಹೈಕೋರ್ಟ್ ತರಾಟೆ

|
Google Oneindia Kannada News

ಬೆಂಗಳೂರು, ಆಗಸ್ಟ್ 13: ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರವಾಗಿ ನಿರ್ಮಿಸಲಾಗಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ನಿರ್ದಿಷ್ಟ ಕಾಲಮಿತಿಯನ್ನು ಒಳಗೊಂಡ ಅಫಿಡವಿಟ್‌ ಸಲ್ಲಿಸುವಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಆಯುಕ್ತರಿಗೆ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಈ ಕುರಿತ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುವ ವೇಳೆ, ನಗರದಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಕೈಗೊಂಡ ಕ್ರಮಗಳ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಲ್ಲಿಸಿದ್ದ ಪ್ರಮಾಣಪತ್ರವನ್ನು ಪಾಲಿಕೆ ಪರ ವಕೀಲರು ನ್ಯಾಯಪೀಠಕ್ಕೆ ನೀಡಿದ್ದರು.

ಬೆಂಗಳೂರು: ಅಕ್ರಮ ಧಾರ್ಮಿಕ ಕಟ್ಟಡಗಳ ಸಮೀಕ್ಷೆಗೆ 3 ದಿನ ಗಡುವುಬೆಂಗಳೂರು: ಅಕ್ರಮ ಧಾರ್ಮಿಕ ಕಟ್ಟಡಗಳ ಸಮೀಕ್ಷೆಗೆ 3 ದಿನ ಗಡುವು

ಇದರ ನಡುವೆ, 379 ಕಟ್ಟಡಗಳು ಸಾರ್ವಜನಿಕ ಸ್ಥಳ ಅಥವಾ ಖಾಸಗಿ ಜಾಗದಲ್ಲಿವೆಯೇ ಎಂಬ ವಿವಾದವಿದೆ. ಕಟ್ಟಡ ಸ್ಥಳಾಂತರ ಅಥವಾ ಅವುಗಳನ್ನು ತೆರವುಗೊಳಿಸುವುದಕ್ಕೆ ಸಂಬಂಧಿಸಿದಂತೆ ಆಯುಕ್ತರು ನಿರ್ದಿಷ್ಟ ಕಾಲಮಿತಿ ಉಲ್ಲೇಖಿಸಿಲ್ಲ" ಎಂದು ನ್ಯಾಯಾಲಯ ಹೇಳಿತು.

HC Questions BBMP’s Conduct Of Demolishing Only Five Of 277 Illegal Religious Structures

2009ರ ತನ್ನ ಆದೇಶವನ್ನು ಜಾರಿಗೊಳಿಸುವ ಸಂಬಂಧ ಹೈಕೋರ್ಟ್‌ಗಳಿಗೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿದ್ದನ್ನು ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಎನ್‌ ಎಸ್‌ ಸಂಜಯ್‌ ಗೌಡ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ನಿರ್ಮಿಸಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ 2009 ರ ಸೆ.29ರಂದು ಸುಪ್ರೀಂಕೋರ್ಟ್ ಆದೇಶ ಹೊರಡಿಸುವುದಕ್ಕೂ ಮುನ್ನ ನಗರದಲ್ಲಿ 1,893 ಅನಧಿಕೃತ ಧಾರ್ಮಿಕ ಕಟ್ಟಡಗಳಿದ್ದವು.

ಆ ಪೈಕಿ 105 ಕಟ್ಟಡಗಳ ಸ್ಥಳಾಂತರ ಹಾಗೂ 280 ನೆಲಸಮಗೊಳಿಸಬೇಕಿದೆ. ಸುಪ್ರೀಂ ಕೋರ್ಟ್ ಆದೇಶದ ನಂತರ ನಿರ್ಮಾಣಗೊಂಡಿರುವ 277 ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕಿದೆ. ಒಟ್ಟಾರೆ 382ಕಟ್ಟಡಗಳನ್ನು ನೆಲಸಮಗೊಳಿಸಬೇಕಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿತ್ತು.

ಇನ್ನು ಕೇವಲ ಐದು ಕಟ್ಟಡ ಬಿಬಿಎಂಪಿ ತೆರವುಗೊಳಿಸಿದೆ. ಮಂದಗತಿಯಲ್ಲಿ ನಡೆಯುತ್ತಿರುವ ಕ್ರಮವನ್ನು ನ್ಯಾಯಾಲಯ ಒಪ್ಪುವುದಿಲ್ಲ. ಸ್ಥಳಾಂತರಿಸಲು ಕ್ರಮ ಜರುಗಿಸದೆ ಇರುವುದಕ್ಕೆ ಬಿಬಿಎಂಪಿ ಕಾರಣ ನೀಡಿಲ್ಲ. ತೆರವು ಮತ್ತು ಸ್ಥಳಾಂತರಕ್ಕೆ ಕಾಲಮಿತಿಯನ್ನೂ ನಿಗದಿಪಡಿಸಿಲ್ಲ ಎಂದು ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು.

ಬಳಿಕ ನಗರದಲ್ಲಿ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಮತ್ತು ಸ್ಥಳಾಂತರ ಕುರಿತು ಕಾಲಮಿತಿ ನಿಗದಿಪಡಿಸಿ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಬಿಬಿಎಂಪಿಗೆ ಹಾಗೂ ಸರ್ಕಾರಕ್ಕೆ ಸೂಚಿಸಿತು.

ಪ್ರಮಾಣ ಪತ್ರವನ್ನು ಪರಿಶೀಲಿಸಿದ ನ್ಯಾಯಪೀಠ, ಒಟ್ಟು 382 ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸಬೇಕು ಮತ್ತು 105 ಕಟ್ಟಡಗಳನ್ನು ಸ್ಥಳಾಂತರಿಸಬೇಕು ಎಂದು ಹೇಳಿರುವ ಬಿಬಿಎಂಪಿ, ಈವರೆಗೂ ಐದು ಕಟ್ಟಡಗಳನ್ನು ಮಾತ್ರ ತೆರವುಗೊಳಿಸಲಾಗಿದೆ. ಇನ್ನೂ ಒಂದೇ ಒಂದು ಕಟ್ಟಡವನ್ನೂ ಸ್ಥಳಾಂತರಿಸಿಲ್ಲ ಎಂದು ತಿಳಿಸಿದೆ.

ಇದು ಆಘಾತಕಾರಿ ವಿಚಾರವಾಗಿದೆ. ಸುಪ್ರೀಂಕೋರ್ಟ್ ಆದೇಶ ಪ್ರಕಟಗೊಂಡ ನಂತರವೂ 277ಅನಧಿಕೃತ ಕಟ್ಟಡ ತಲೆ ಎತ್ತಿವೆ ಎಂದು ನ್ಯಾಯಪೀಠ ಪ್ರಶ್ನಿಸಿತು.

ರಸ್ತೆ,ಪಾದಚಾರಿ ಮಾರ್ಗ,ಉದ್ಯಾನ,ಮೈದಾನ, ಸರ್ಕಾರಿ ಜಾಗ ಸೇರಿದಂತೆ ಸಾರ್ವಜನಿಕ ಸ್ಥಳಗಳನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಮಂದಿರ, ಚರ್ಚ್,ಮಸೀದಿ,ಗುರುದ್ವಾರ ಸೇರಿದಂತೆ ಧಾರ್ಮಿಕ ಕಟ್ಟಡಗಳ ಸಮೀಕ್ಷೆ ಮಾಡಿ ವರದಿ ನೀಡಬೇಕು ಎಂದು ಸೂಚಿಸಿದ್ದರು.

Recommended Video

ದಂಪತಿಗಳು ನಾಗ ಪೂಜೆಯನ್ನು ಹೇಗೆ ಮಾಡಿದ್ರೆ ಒಳ್ಳೇದು ಗೊತ್ತಾ? | Oneindia Kannada

ಕಟ್ಟಡ ತೆರವಿಗೆ ಸಂಬಂಧಿಸಿದ ಕಾಲಾನುಕ್ರಮವನ್ನು ಒಳಗೊಂಡ ಅಫಿಡವಿಟ್‌ ಅನ್ನು ಮೂರು ವಾರಗಳ ಒಳಗೆ ಸಲ್ಲಿಸುವಂತೆ ಬಿಬಿಎಂಪಿ ಆಯುಕ್ತ ಗೌರವ್‌ ಗುಪ್ತ ಅವರಿಗೆ ಆದೇಶಿಸಿರುವ ಪೀಠವು ವಿಚಾರಣೆಯನ್ನು ಸೆಪ್ಟೆಂಬರ್‌ 17ಕ್ಕೆ ಮುಂದೂಡಿದೆ.(ಮಾಹಿತಿ ಕೃಪೆ- ಬಾರ್ & ಬೆಂಚ್)

English summary
The High Court of Karnataka on Thursday questioned the conduct of the Bruhat Bangalore Mahanagara Palike (BBMP) demolishing only five illegally constructed religious structures even after identifying 277 such structures built after September 29, 2009, the cut-off date set by the apex court for preventing such constructions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X