ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದ ಹೈಕೋರ್ಟ್

|
Google Oneindia Kannada News

ಬೆಂಗಳೂರು, ಮೇ 6: ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಮೌಖಿಕ ಅಭಿಪ್ರಾಯಪಟ್ಟಿದೆ. ಏ.17ರಂದು ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಮದುವೆ ನಡೆದಿತ್ತು. ಈ ಕುರಿತು ರಾಜ್ಯ ಸರ್ಕಾರದ ವಕೀಲ ವಿಕ್ರಮ್ ಹುಯಿಲ್ಗೊಳ್ ವರದಿ ಸಲ್ಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ 80-95 ಕುಟುಂಬಸ್ಥರು ಭಾಗವಹಿಸಿದ್ದರು.

ಮದುವೆಗೆ ರಾಮನಗರ ಡಿಸಿ ಅನುಮತಿ ನೀಡಿದ್ದರು. ಇಷ್ಟೇ ಅಲ್ಲ ಮದುವೆಗೆ ಆಗಮಿಸಿದ ಎಲ್ಲರಿಗೂ ಮಾಸ್ಕ್, ಸ್ಯಾನಿಟೈಸರ್ ವಿತರಿಸಲಾಗಿತ್ತು ಎಂದು ವರದಿಯಲ್ಲಿ ಹೇಳಿದೆ. ಲಾಕ್‌ಡೌನ್ ಕಟ್ಟು ನಿಟ್ಟಿನ ನಿಯಮದ ನಡುವೆ ಸ್ಯಾಂಡಲ್‌ವುಡ್ ನಟ, ಮಾಜಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ವಿವಾದಕ್ಕೆ ಕಾರಣವಾಗಿತ್ತು.

ಸಿಎಂ ಯಡಿಯೂರಪ್ಪ ಅವರು ಸತ್ಯದ ಪರ ನಿಂತಿದ್ದಾರೆ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಸಿಎಂ ಯಡಿಯೂರಪ್ಪ ಅವರು ಸತ್ಯದ ಪರ ನಿಂತಿದ್ದಾರೆ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ

ರಾಮನಗರ ಜಿಲ್ಲೆಯಲ್ಲಿ ನಡೆದ ವಿವಾಹ ಮಹತೋತ್ಸವ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತ ವರದಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದೀಗ ರಾಜ್ಯ ಸರ್ಕಾರ ನಿಖಿಲ್ ಮದುವೆ ವಿಚಾರವಾಗಿ ವಿವರಣೆಯನ್ನು ಹೈಕೋರ್ಟ್‌ಗೆ ಸಲ್ಲಿಸಿದೆ.

HC Says Purpose Of Lockdown Lost In Nikhil Wedding

ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಈ ವಿವಾಹದ ಬಗ್ಗೆ ನಮಗೆ ಕಾಳಜಿಯಿಲ್ಲ, ರಾಜ್ಯ ಮತ್ತು ಕೇಂದ್ರ ಸರ್ಕಾರದ ನೀತಿಯ ಪ್ರಕಾರ 50 ಕ್ಕೂ ಹೆಚ್ಚು ವ್ಯಕ್ತಿಗಳಿಗೆ ಮದುವೆಗೆ ಹಾಜರಾಗಲು ಅನುಮತಿ ನೀಡಿದರೆ ಲಾಕ್‌ಡೌನ್‌ ನಿಯಮ ಉಲ್ಲಂಘನೆಯಾದಂತಾಗಿದೆ..

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ವಿಭಾಗೀಯ ಪೀಠವು ಯಾವುದೇ ಆಲೋಚನೆಯಿಲ್ಲದೇ ಈ ರೀತಿಯ ಅನುಮತಿ ನೀಡುವುದು ಅಪಾಯಕಾರಿ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯಲ್ಲಿ ಏಪ್ರಿಲ್ 17ರಂದು ಬೆಳಗ್ಗೆ 8 ರಿಂದ 10 ಗಂಟೆಯವರೆಗೆ ನಡೆದ ನಿಖಿಲ್ ವಿವಾಹಕ್ಕೆ ಜಿಲ್ಲಾಧಿಕಾರಿ ಅನುಮತಿ ನೀಡಿದ್ದರು. ಡಿವೈಎಸ್‌ಪಿ ಬಂದೋಬಸ್ತ್ ಮೇಲ್ವಿಚಾರಣೆವಹಿಸಿದ್ದರು. ಮದುವೆಯಲ್ಲಿ ವರ ಹಾಗೂ ವಧುವಿನ ಕುಟುಂಬಗಳಿಗೆ ಸೇರಿದ 80-90 ಮಂದಿ ಭಾಗವಹಿಸಿದ್ದರು. ಎಲ್ಲರಿಗೂ ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಲಾಗಿತ್ತು.

ಅಂತರ ಕಾಯ್ದುಕೊಳ್ಳಲಾಗಿತ್ತು ಎಂದು ವಿಕ್ರಂ ಹುಯಿಲಗೋಳ ಕೋರ್ಟ್‌ಗೆ ತಿಳಿಸಿದ್ದಾರೆ. 80-90 ಜನರಿಗೆ ಮದುವೆಗೆ ಬರಲು ಅನುಮತಿ ಕೊಟ್ಟಿದ್ದು ಲಾಕ್‌ಡೌನ್ ನಿಯಮ ಉಲ್ಲಂಘನೆಯಲ್ಲವೇ ಎಂದು ಹೈಕೋರ್ಟ್ ಪ್ರಶ್ನಿಸಿದೆ.

English summary
The Karnataka HC on Tuesday expressed displeasure over the blanket permission granted by the Ramanagara DC without putting a cap on the number of invitees to the marriage of Nikhil Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X