ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭೂ ಪರಭಾರೆ ನಿಷೇಧ ಕಾಯ್ದೆ ಅನುಷ್ಠಾನಕ್ಕೆ ಹೈಕೋರ್ಟ್ ಸೂಚನೆ

|
Google Oneindia Kannada News

ಬೆಂಗಳೂರು,ಜನವರಿ 29: ಎಸ್‌ಟಿಎಸ್‌ಟಿ ಭೂ ಪರಭಾರೆ ನಿಷೇಧ ಕಾಯ್ದೆಯನ್ನು ಅನುಷ್ಠಾನಗೊಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.

ಎಸ್‌ಸಿಎಸ್‌ಟಿ ಭೂ ಪರಭಾರೆ ನಿಷೇಧ ಕಾಯ್ದೆಯಲ್ಲಿನ (ಪಿಟಿಸಿಎಲ್) ನಿರ್ಬಂಧಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿರುವ ಕುರಿತು ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಸಂವಿಧಾನ ಬದ್ಧವಾಗಿದೆ:ಹೈಕೋರ್ಟ್ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಸಂವಿಧಾನ ಬದ್ಧವಾಗಿದೆ:ಹೈಕೋರ್ಟ್

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರನ್ನು ಭೂಹೀನರನ್ನಾಗಿ ಮಾಡುವುದನ್ನು ತಡೆಯಲು ಜಾರಿಗೆ ತಂದ ಎಸ್‌ಸಿಎಸ್‌ಟಿ ಭೂ ಪರಭಾರೆ ನಿಷೇಧ ಕಾಯ್ದೆ ಇಷ್ಟು ದಿನ ಇದ್ದೂ ಇಲ್ಲದಂತಾಗಿತ್ತು. ಅರ್ಜಿ ಸಲ್ಲಿಸಲು ಕಾಲಮಿತಿ ಇರಲಿ ಎಂಬ ಸುಪ್ರೀಂಕೋರ್ಟ್ ಆದೇಶದ ನಂತರ ರಾಜ್ಯದ ಮೂರು ಸಾವಿರಕ್ಕೂ ಹೆಚ್ಚು ಅರ್ಜಿಗಳು ವಜಾಗೊಂಡಿತ್ತು.

HC Seeks Details Of Steps Taken To Prohibit Land Sale

1924ರಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಭೂ ಒಡೆತನದ ಹಕ್ಕನ್ನು ಮೈಸೂರು ಅರಸರು ಕೊಟ್ಟರು. ಸ್ವಾತಂತ್ರ್ಯ ಬರುವ ಮೊದಲು ರಾಜರು, ಸ್ವಾತಂತ್ರ್ಯ ನಂತರ ಸರ್ಕಾರಗಳು ಮುಫ್ತಾಗಿ ನೀಡಿದ ಭೂಮಿಯನ್ನು ನಿರ್ದಿಷ್ಟ ಕಾಲದವರೆಗೆ ಪರಭಾರೆ ಮಾಡಬಾರದು ಎಂಬ ಷರತ್ತನ್ನು ವಿಧಿಸುತ್ತಿದ್ದರು.

ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ಮಂಜೂರು ಮಾಡಿರುವ ಭೂಮಿಯನ್ನು ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದೆ ವರ್ಗಾವಣೆ ಮಾಡುವುದನ್ನು ಕಾಯ್ದೆಯ ಸೆಕ್ಷನ್ 6ರಲ್ಲಿ ನಿರ್ಬಂಧಿಸಲಾಗಿದೆ. ಈ ಸೆಕ್ಷನ್ ಅನುಷ್ಠಾನಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಪೀಠ ಹೇಳಿದೆ

ತುಮಕೂರಿನ ಬಿ. ದಾಸಪ್ಪ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

English summary
The Karnataka High Court on Thursday directed the state government to list out the measures taken for effective implementation of Section 6 of Prohibition of Transfer of Certain Lands Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X