ಹೊಸ ವರ್ಷಾಚರಣೆಗೆ ಮದ್ಯ ನಿಷೇಧ, ಸರ್ಕಾರದ ನಿಲುವು ಕೇಳಿದ ಕೋರ್ಟ್

ಬೆಂಗಳೂರು, ಡಿಸೆಂಬರ್. 13 : ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ ಮದ್ಯ ನಿಷೇಧಿಸುವ ಕುರಿತು ಹೈಕೋರ್ಟ್ ಸರ್ಕಾರದ ನಿಲುವು ಕೇಳಿದೆ. ಡಿ.15ರಂದು ಮುಂದಿನ ವಿಚಾರಣೆ ನಡೆಯಲಿದೆ.

ಬೆಂಗಳೂರು ನಿವಾಸಿ ನಾಗೇಶ್ ಎಂಬುವವರು ಹೊಸ ವರ್ಷಾಚರಣೆ ವೇಳೆ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

HC seeks Karnataka govt response on liquor ban on new year celebration

ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಕುರಿತು ಸರ್ಕಾರದ ಅಭಿಪ್ರಾಯವನ್ನು ಡಿ.15ರಂದು ತಿಳಿಸುವಂತೆ ಸೂಚನೆ ನೀಡಿತು.

ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ಅಭಿಯೋಜನಕರು, ಈ ವರ್ಷ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟಿಗೆ ಮಾಹಿತಿ ನೀಡಿದರು.

ಇದು ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ ವಿಚಾರ. ಕಳೆದ ವರ್ಷ ಹಲವು ಕಡೆ ಅಹಿತಕರ ಘಟನೆ ನಡೆದಿದೆ ಎಂದು ಹೈಕೋರ್ಟ್ ಹೇಳಿತು. ಸರ್ಕಾರ ಡಿ.15ರಂದು ತನ್ನ ನಿಲುವು ತಿಳಿಸಬೇಕು ಎಂದು ಸೂಚಿಸಿತು.

ಹೊಸ ವರ್ಷಾಚರಣೆ ವೇಳೆ ಲೈಂಗಿಕ ದೌರ್ಜನ್ಯ, ಅಪರಾಧ ಚಟುವಟಿಕೆ ನಡೆದಿದೆ. ಆದ್ದರಿಂದ, ನಗರಕ್ಕೆ ಕೆಟ್ಟ ಹೆಸರು ಬಂದಿದೆ. ಹೊಸ ವರ್ಷಾಚರಣೆ ಸಮಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ಪಿಇಎಲ್‌ ಸಲ್ಲಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+