ಅಕ್ರಮ ಆಸ್ತಿಗಳಿಕೆ ಪ್ರಕರಣ : ಜಯ ಅರ್ಜಿ ವಿಚಾರಣೆ ಆರಂಭ
ಬೆಂಗಳೂರು, ಜ.5 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿ ವಿಚಾರಣೆ ಇಂದಿನಿಂದ ಕರ್ನಾಟಕ ಹೈಕೋರ್ಟ್‌ನ ವಿಶೇಷ ಪೀಠದಲ್ಲಿ ಆರಂಭವಾಗಿದೆ. ವಿಚಾರಣೆಯನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಬೇಕು ಎಂಬ ಜಯಲಲಿತಾ ಪರ ವಕೀಲರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಸುಪ್ರೀಂಕೋರ್ಟ್ ಆದೇಶದ ಅನ್ವಯ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕಸದಸ್ಯ ಪೀಠವನ್ನು ರಚನೆ ಮಾಡಿದ್ದು, ಸೋಮವಾರದಿಂದ ವಿಶೇಷ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ದೂರುದಾರ ಮತ್ತು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ನ್ಯಾಯಾಲಯಕ್ಕೆ ಖದ್ದು ಹಾಜರಾಗಿದ್ದರು. [ಜಯಲಲಿತಾ ಜಾಮೀನು ಅವಧಿ 4 ತಿಂಗಳು ವಿಸ್ತರಣೆ]
ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ಜಯಲಲಿತಾ ಪರ ವಕೀಲರು ಪ್ರಕರಣದಲ್ಲಿ ದೆಹಲಿಯಿಂದ ಬಂದು ಹಿರಿಯ ವಕೀಲರೊಬ್ಬರು ವಾದ ಮಾಡಲಿದ್ದಾರೆ. ಆದ್ದರಿಂದ ವಿಚಾರಣೆಯನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಬೇಕು ಎಂದು ಮನವಿ ಸಲ್ಲಿಸಿದರು, ಆದರೆ, ಕೋರ್ಟ್ ಮನವಿಯನ್ನು ತಿರಸ್ಕರಿಸತು. [ಜಯ ಪ್ರಕರಣ ವಿಚಾರಣೆ : ವಿಶೇಷ ಪೀಠ ರಚನೆ]

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮೊದಲು ದೂರು ನೀಡಿದ್ದ ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ನ್ಯಾಯಾಲಯದಲ್ಲಿ ಖದ್ದು ಹಾಜರಿದ್ದರು ಮತ್ತು ವಾದ ಮಂಡಿಸಲು ಅವಕಾಶ ನಿಡಬೇಕೆಂದು ಮನವಿ ಸಲ್ಲಿಸಿದರುನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಲಿಖಿತ ರೂಪದಲ್ಲಿ ಮನವಿ ಸಲ್ಲಿಸುವಂತೆ ಈ ಸಂದರ್ಭದಲ್ಲಿ ಸೂಚನೆ ನೀಡಿದರು.
2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣ ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದರು. ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. [ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿವರ]
ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ವಿಶೇಷ ಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದರು ಮತ್ತು ಜಾಮೀನು ನೀಡುವಂತೆ ಮನವಿ ಸಲ್ಲಿಸಿದ್ದರು. ಕೋರ್ಟ್ ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು.
ಜಾಮೀನು ನೀಡುವಾಗ ಪ್ರಕರಣದ ವಿಚಾರಣೆಯ ಮೇಲ್ಮನವಿಯನ್ನು ತ್ವರಿತವಾಗಿ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು ಮತ್ತು ಇದಕ್ಕಾಗಿ ವಿಶೇಷ ಪೀಠ ರಚನೆ ಮಾಡುವಂತೆ ಆದೇಶಿಸಿತ್ತು.
-
ಮಾರ್ಚ್ 19ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು












Click it and Unblock the Notifications