ರಾಜಕಾಲುವೆ ಒತ್ತುವರಿ, ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ತಡೆ

ಬೆಂಗಳೂರು, ಆಗಸ್ಟ್ 31 : ರಾಜಕಾಲುವೆ ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳ ವಿರುದ್ಧದ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಎಂಟಿಎಫ್ ಒಟ್ಟು 20 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ.

ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದ ರದ್ದುಗೊಳಿಸುವಂತೆ ಕೋರಿ ನಾಲ್ವರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು. ಬುಧವಾರ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ.[ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ]

HC stays BMTF's FIR against 4 BBMP officials

ಬಿಬಿಎಂಪಿ ಅಧಿಕಾರಿಗಳಾದ ಎಂ.ಎಲ್.ಮುನಿಕೃಷ್ಣ, ಪಿ.ಗಂಗಪ್ಪ, ಎಚ್.ಸುನಿತಾ ಮತ್ತು ಎಂ.ಲಿಯಾಕತ್ ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಪ್ರಕರಣ ದಾಖಲಿಸುವ ಮೊದಲು ಮ್ಯಾಜಿಸ್ಟ್ರೇಟ್ ಅನುಮತಿ ಅಗತ್ಯ. ಆದರೆ, ಅನುಮತಿ ಪಡೆಯದ ಹಿನ್ನಲೆಯಲ್ಲಿ ತಡೆಯಾಜ್ಞೆ ನೀಡಲಾಗಿದೆ.[ಬಿಬಿಎಂಪಿ ತೆರವು ಕಾರ್ಯಾಚರಣೆ ಬಂದ್ ಮಾಡಿದ್ದೇಕೆ?]

ಸರ್ಕಾರದ ಆದೇಶದಂತೆ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್‌) ರಾಜಕಾಲುವೆ ಒತ್ತುವರಿಗೆ ಸಹಕಾರ ನೀಡಿದ ಬಿಬಿಎಂಪಿ ಮತ್ತು ಬಿಡಿಎಯ 20 ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದೆ. ಇದನ್ನು ಪ್ರಶ್ನಿಸಿ ಕೆಲವು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.['ಜೆ.ಪಿ.ನಗರವೋ ಮತ್ತೊಂದು ನಗರವೋ ಒತ್ತುವರಿ ತೆರವು ಖಚಿತ']

ಕಳೆದ ವಾರ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಬಿಎಂಟಿಎಫ್ ತನಿಖೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. ಅಧಿಕಾರಿಗಳನ್ನು ಬಂಧಿಸದಂತೆ ಬಿಎಂಟಿಎಫ್‌ಗೆ ಸೂಚನೆ ನೀಡಿತ್ತು ಮತ್ತು ಅಧಿಕಾರಿಗಳು ವಿಚಾರಣೆಗೆ ಸಹಕಾರ ನೀಡಬೇಕು ಎಂದು ಸೂಚಿಸಿತ್ತು.[ರಾಜಕಾಲುವೆ ಒತ್ತುವರಿ ತೆರವು ಎಂಬ ನಿಗೂಢ ರಹಸ್ಯ!]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+