ಎಚ್.ವಿಶ್ವನಾಥ್ ಆರೋಗ್ಯ ವಿಚಾರಿಸಿದ ದೇವೇಗೌಡ

ಬೆಂಗಳೂರು, ಮಾರ್ಚ್ 18 : ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಎಚ್.ವಿಶ್ವನಾಥ್ ಅವರ ಆರೋಗ್ಯ ವಿಚಾರಿಸಿದರು. ಶನಿವಾರದಿಂದ ವಿಶ್ವನಾಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ ಸಂಜೆ ಎಚ್.ಡಿ.ದೇವೇಗೌಡ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಜೆಡಿಎಸ್ ರಾಜ್ಯಾಧ್ಯಕ್ಷ, ಶಾಸಕ ಎಚ್.ವಿಶ್ವನಾಥ್ ಅವರ ಆರೋಗ್ಯ ವಿಚಾರಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಹುಣಸೂರು ಶಾಸಕ ಎಚ್. ವಿಶ್ವನಾಥ್ ಅವರಿಗೆ ಹೈದರಾಬಾದ್‌ನಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು. ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಬೆಂಗಳೂರಿಗೆ ವಾಪಸ್ ಆಗಿದ್ದರು.

HD Deve Gowda

ಶನಿವಾರ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಿಶ್ವನಾಥ್ ಅವರು ಈಗ ಗುಣಮುಖರಾಗಿದ್ದು ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಪುತ್ರ ಅಮಿತ್ ದೇವರಹಟ್ಟಿ ಹೇಳಿದ್ದಾರೆ.

ದೇವೇಗೌಡರ ನಿವಾಸದಲ್ಲಿ ಸಭೆ : ಎಚ್.ವಿಶ್ವನಾಥ್ ಭೇಟಿ ಬಳಿಕ ಎಚ್.ಡಿ.ದೇವೇಗೌಡ ಅವರು ಪದ್ಮನಾಭನಗರದ ನಿವಾಸಕ್ಕೆ ಆಗಮಿಸಿದರು. ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ವೈ.ಎಸ್‌.ವಿ.ದತ್ತಾ ಅವರು ಸಹ ಆಗಮಿಸಿದ್ದು ತುಮಕೂರು ಕ್ಷೇತ್ರದ ಅಭ್ಯರ್ಥಿ ಅಂತಿಮಗೊಳಿಸಲು ಸಭೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+