ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಖಿಲ್ ರಾಜಕೀಯ ಭವಿಷ್ಯದ ಬಗ್ಗೆ ದೇವೇಗೌಡ್ರು ಹೇಳಿದ್ದೇನು?

|
Google Oneindia Kannada News

Recommended Video

ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯದ ಬಗ್ಗೆ ಮಾತನಾಡಿದ ಎಚ್ ಡಿ ದೇವೇಗೌಡ | Oneindia Kannada

ಬೆಂಗಳೂರು, ಜೂನ್ 17: ಜಾತ್ಯಾತೀತ ಜನತಾ ದಳ(ಜೆಡಿಎಸ್)ದ ರಾಜ್ಯಾಧ್ಯಕ್ಷ ಸ್ಥಾನ, ತುಮಕೂರಿನ ಸೋಲು, ಮೊಮ್ಮಗ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯದ ಬಗ್ಗೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಮಾತನಾಡಿದ್ದಾರೆ

'ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಖಾಲಿಯಾಗಿಲ್ಲ, ರಾಜ್ಯಾಧ್ಯಕ್ಷರಾಗಿ ಎಚ್ ವಿಶ್ವನಾಥ್ ಅವರು ಮುಂದುವರೆಯುತ್ತಾರೆ. ಬೇರೆ ಯಾರನ್ನು ಅಧ್ಯಕ್ಷರನ್ನಾಗಿ ಮಾಡುವುದಿಲ್ಲ. ಅವರು ಮತ್ತೆ ಅದೇ ಸ್ಥಾನಕ್ಕೆ ಮರಳುವ ತನಕ ಖಾಲಿ ಇರುತ್ತೇ ಹೊರತೂ ಬೇರೆಯವರನ್ನು ನೇಮಿಸಲ್ಲ. ಮೈಸೂರು ಜಿಲ್ಲೆಯ ರಾಜಕಾರಣದಿಂದ ವಿಶ್ವನಾಥ್ ಅವರಿಗೆ ಬೇಸರವಾಗಿದೆ, ಸಚಿವ ಸ್ಥಾನ ಬೇಕು ಎಂದು ನಮ್ಮನ್ನು ಕೇಳಿಲ್ಲ, ಅವರ ಮನಸುತ್ತೇವೆ" ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಿಂದ ನಿಖಿಲ್ ಕುಮಾರಸ್ವಾಮಿ ಔಟ್! ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದ ರೇಸಿನಿಂದ ನಿಖಿಲ್ ಕುಮಾರಸ್ವಾಮಿ ಔಟ್!

ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್​ಅವರನ್ನು ಕಣಕ್ಕಿಳಿಸುವ ಉದ್ದೇಶ ಇರಲಿಲ್ಲ. ಆದರೆ, ಮಂಡ್ಯದ ಜೆಡಿಎಸ್​ಮುಖಂಡರು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಕಣಕ್ಕಿಳಿಸಬೇಕಾಯಿತು ಎಂದರು.

ರಾಜಕೀಯದಿಂದ ದೂರ ಉಳಿಯುತ್ತಾರೆ ಎಂಬ ಸುದ್ದಿ?

ರಾಜಕೀಯದಿಂದ ದೂರ ಉಳಿಯುತ್ತಾರೆ ಎಂಬ ಸುದ್ದಿ?

ಮಂಡ್ಯ ಸೋಲಿನ ಬಳಿಕ ನಿಖಿಲ್ ಅವರು ಮತ್ತೆ ಸಿನಿಮಾ ಕ್ಷೇತ್ರಕ್ಕೆ ಮರಳುತ್ತಾರೆ, ರಾಜಕೀಯದಿಂದ ದೂರ ಉಳಿಯುತ್ತಾರೆ ಎಂಬ ಸುದ್ದಿಯನ್ನು ತಳ್ಳಿ ಹಾಕಿದರು. ಚುನಾವಣೆಯಲ್ಲಿ ಸೋತರೂ ಸುಮ್ಮನೆ ಕೂರುವ ವ್ಯಕ್ತಿಯಲ್ಲ. ರಾಜಕೀಯದಲ್ಲಿಯೇ ಇದ್ದು ಹೋರಾಟ ಮಾಡುವ ಸ್ವಭಾವ ಇದೆ. ಸಿನಿಮಾ ಕ್ಷೇತ್ರಕ್ಕಿಂತ ಹೆಚ್ಚಾಗಿ ರಾಜಕೀಯದಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.

ನಿಖಿಲ್ ಕುಮಾರಸ್ವಾಮಿಗೆ ಮಹತ್ವದ ಜವಾಬ್ದಾರಿಯನ್ನು ಕೊಡಲಿರುವ ದೇವೇಗೌಡರು ನಿಖಿಲ್ ಕುಮಾರಸ್ವಾಮಿಗೆ ಮಹತ್ವದ ಜವಾಬ್ದಾರಿಯನ್ನು ಕೊಡಲಿರುವ ದೇವೇಗೌಡರು

ನನ್ನ ಸೋಲಿಗೆ ಯಾರೂ ಹೊಣೆಯಲ್ಲ : ಎಚ್ಡಿಡಿ

ನನ್ನ ಸೋಲಿಗೆ ಯಾರೂ ಹೊಣೆಯಲ್ಲ : ಎಚ್ಡಿಡಿ

ನನ್ನ ಸೋಲಿಗೆ ಯಾರೂ ಹೊಣೆಯಲ್ಲ: ಪ್ರಜ್ವಲ್ ರೇವಣ್ಣಗೆ ಹಾಸನ ಕ್ಷೇತ್ರ ಬಿಟ್ಟು ಕೊಡುತ್ತೇನೆ ಎಂದು ವರ್ಷಗಳ ಹಿಂದೆಯೇ ನಿರ್ಧರಿಸಿದ್ದೆ. ತುಮಕೂರಿನಲ್ಲಿ ನನ್ನ ಸೋಲಿಗೆ ಯಾರನ್ನು ಹೊಣೆ ಮಾಡೋದಿಲ್ಲ. ಯಾರನ್ನು ಗುರಿಯಾಗಿಸುವುದಿಲ್ಲ, ಸೋಲಿನ ಬಗ್ಗೆ ಚರ್ಚೆ ಮಾಡುವ ಬದಲು ಪಕ್ಷ ಸಂಘಟನೆ ಮಾಡುವುದರಲ್ಲಿ ನಾನು ನಿರತನಾಗಿದ್ದೇನೆ ಎಂದರು.

ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

ಕುಮಾರಸ್ವಾಮಿ ಗ್ರಾಮ ವಾಸ್ತವ್ಯ: ನನ್ನ ಮಗ ಇಡೀ‌ ದಿನ ಜನರ ಸಮಸ್ಯೆ ಆಲಿಸುತ್ತಾರೆ. ಅಧಿಕಾರಿಗಳು ಕೂಡ ಈ ಬಾರಿ ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸುತ್ತಾರೆ. ಬೆಳಗ್ಗೆ 10 ಗಂಟೆಯಿಂದಲೇ ಗ್ರಾಮ ವಾಸ್ತವ್ಯ ಪ್ರಾರಂಭ ಆಗುತ್ತೆ. ಜನರ ಸಮಸ್ಯೆ ಆಲಿಸಿದ ಬಳಿಕ ಸಿಎಂ, ಸಂಜೆ ಒಂದು ಶಾಲೆಯಲ್ಲಿ ವಾಸ್ತವ್ಯ ಮಾಡುತ್ತಾರೆ ಎಂದು ಹೇಳಿದರು.

ಹಾಸನ ಜಿಲ್ಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯಹಾಸನ ಜಿಲ್ಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

ಮಾಧ್ಯಮಗಳ ಮೇಲೆ ಕೋಪ ಏಕೆ?

ಮಾಧ್ಯಮಗಳ ಮೇಲೆ ಕೋಪ ಏಕೆ?

ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮಾಧ್ಯಮಗಳ ಮೇಲೆ ಅದರಲ್ಲೂ ಟಿವಿ ಮಾಧ್ಯಮಗಳ ಮೇಲೆ ಸಿಟ್ಟಿದೆ. ಮೈತ್ರಿ ಸರ್ಕಾರ ರಚನೆಯಾದ ಸಂದರ್ಭದಿಂದ ಮಾಧ್ಯಮಗಳು ಬೆಂಬಲ ನೀಡಲಿಲ್ಲ ಎಂಬ ಕೊರಗಿದೆ. ಈ ಬಗ್ಗೆ ಚರ್ಚೆಗಳಾಗಿವೆ. ಈಗ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಮಾತನಾಡುತ್ತಾರೆ, ಮುಂದೆ ಎಲ್ಲಾ ಸರಿ ಹೋಗುತ್ತದೆ ಎಂದರು.

English summary
Nikhil Kumaraswamy has lost a election not his political career, he is here to stay and build party said JDS supremo HD Deve Gowda about his grandson's political future.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X