ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ದೇವೇಗೌಡರು ಏನಂದ್ರು?
Recommended Video
ಬೆಂಗಳೂರು ಫೆಬ್ರವರಿ 10; ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ತೀವ್ರ ಚರ್ಚೆಯಲ್ಲಿದ್ದ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಈ ಬಗ್ಗೆ ಎಂದೂ ಪ್ರತಿಕ್ರಿಯೆ ನೀಡಿರದಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಈ ಬಗ್ಗೆ ಮಾತನಾಡಿದ್ದಾರೆ.
ಸೋಮವಾರ ತಮ್ಮ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದ ದೇವೇಗೌಡರನ್ನು ಭೇಟಿಯಾಗಿದ್ದ ಮಾಧ್ಯಮಗಳು ಸಹಜವಾಗಿ ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೆದಕಿದ್ದಾರೆ. ಈ ಬಗ್ಗೆ ತುಸು ಸಿಡುಕಿನಿಂದಲೇ ಉತ್ತರಿಸಿದ ಗೌಡರು, 'ನನಗೇಕೆ ಅವೆಲ್ಲ? ನಾನು ಅ ಬಗ್ಗೆ ಪ್ರತಿಕ್ರಿಯೆ ನೀಡೊಲ್ಲ' ಎಂದು ಖಡಕ್ ಉತ್ತರ ಕೊಟ್ಟರು.
ಇದೇ ವೇಳೆ ಮೀಸಲಾತಿ ಮೂಲಭೂತ ಹಕ್ಕಲ್ಲ ಎಂಬ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಗೌಡರು, 'ಈ ಬಗ್ಗೆ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ಅವಕಾಶ ಇದೆ. ಹಾಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲು ನಾನು ಮೋದಿ ಅವರನ್ನು ಒತ್ತಾಯಿಸುತ್ತೇನೆ' ಎಂದು ಹೇಳಿದರು.

ಸೋಮವಾರ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಅದ್ದೂರಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಈ ವೇಳೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ರಾಜಕೀಯ ಧುರೀಣರು ಭಾಗಿಯಾಗಿ ನವಜೋಡಿಗೆ ಶುಭಾಶಯ ಕೋರಿದರು.












Click it and Unblock the Notifications